Karnataka Weather: ಇಂದು ಕೊಡಗು, ಹಾಸನ ಸೇರಿ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ!
Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಸ್ಪಷ್ಟವಾದ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 °C ಮತ್ತು 21 °C ಆಗಿರುವ ಸಾಧ್ಯತೆಯಿದೆ.


ಬೆಂಗಳೂರು: ಶಿವಮೊಗ್ಗ ಜಿಲ್ಲೆ ಸೇರಿ ರಾಜ್ಯದ ವಿವಿಧೆಡೆ ಬುಧವಾರ ಗುಡುಗು ಸಹಿತ ಮಳೆಯಾಗಿದೆ. ಇನ್ನು ಮಾ.27ರಂದು ಗುರುವಾರ ಕೂಡ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ದಕ್ಷಿಣ ಒಳ ಕರ್ನಾಟಕದ ಒಂದು ಅಥವಾ ಎರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಸ್ಪಷ್ಟವಾದ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34 °C ಮತ್ತು 21 °C ಆಗಿರುವ ಸಾಧ್ಯತೆಯಿದೆ.
ಇನ್ನು ಮಾ. 28ರಂದು ರಾಜ್ಯದಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಏಪ್ರಿಲ್ 1ರ ವರೆಗೆ ಇದೇ ರೀತಿಯ ಪರಿಸ್ಥಿತಿ ಮುಂದುವರಿಯಲಿದೆ.
ಮುಂದಿನ 24 ಗಂಟೆಗಳ ಕಾಲ ಉತ್ತರ ಅಂತರಿಕ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆ ಇಲ್ಲ, ನಂತರ 2-4 ಡಿಗ್ರಿ ಸೆಲ್ಸಿಯನ್ ಏರಿಕೆಯಾಗಲಿದೆ. ಮುಂದಿನ 2 ದಿನಗಳಲ್ಲಿ ದಕ್ಷಿಣ ಒಳನಾಡಿನ ಕರ್ನಾಟಕದ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಿಲ್ಲ. 3ನೇ ದಿನದಿಂದ 2-3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಲಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ 2-3 ಡಿಗ್ರಿ ಸೆಲ್ಸಿಯಸ್ ಕ್ರಮೇಣ ಹೆಚ್ಚವಾಗಲಿದೆ. ಕರಾವಳಿ ಕರ್ನಾಟಕದಲ್ಲಿ ಮುಂದಿನ 5 ದಿನಗಳವರೆಗೆ ಗರಿಷ್ಠ-ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ.
ಈ ಸುದ್ದಿಯನ್ನೂ ಓದಿ | Healthy Tips: ಏರುತ್ತಿರುವ ಬಿಸಿಲಿನಲ್ಲಿ ದೇಹಕ್ಕೆ ನೀರುಣಿಸುವುದು ಹೇಗೆ?
ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು
ರಾಜ್ಯದ ಕಲಬುರಗಿಯಲ್ಲಿ ಮಂಗಳವಾರ ಗರಿಷ್ಠ ತಾಪಮಾನ 38.6°C ದಾಖಲಾಗಿದೆ. ರಾಜ್ಯದ ಬಯಲು ಸೀಮೆಯಲ್ಲಿ ಧಾರವಾಡದಲ್ಲಿ ಕನಿಷ್ಠ ತಾಪಮಾನ 18 ಡಿ.ಸೆ. ದಾಖಲಾಗಿದೆ.