Karnataka Weather: ರಾಜ್ಯದಲ್ಲಿ ಮುಂದಿನ 5 ದಿನ ಅಬ್ಬರಿಸಲಿದೆ ಮಳೆ; ಯೆಲ್ಲೋ ಅಲರ್ಟ್ ಘೋಷಣೆ
Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಬಹುತೇಕ ಶುಭ್ರ ಆಕಾಶ ಇರಲಿದ್ದು, ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 22°C ಆಗುವ ಸಾಧ್ಯತೆ ಇದೆ.


ಬೆಂಗಳೂರು: ಬೇಸಿಗೆಯಲ್ಲಿ ರಾಜ್ಯಕ್ಕೆ ಮಳೆ ಮುನ್ಸೂಚನೆ ಸಿಕ್ಕಿದ್ದು, ಮುಂದಿನ ಐದು ದಿನಗಳ ಕಾಲ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Karnataka Weather) ಸಾಧ್ಯತೆ ಇದೆ. ಹೀಗಾಗಿ ಭಾರತ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಮಾ.31ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡದ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ (Heavy Rain) ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಮುನ್ಸೂಚನೆ:
ಮುಂದಿನ 24 ಗಂಟೆಗಳು: ಬಹುತೇಕ ಶುಭ್ರ ಆಕಾಶ ಇರಲಿದ್ದು, ಮಧ್ಯಾಹ್ನ/ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 22°C ಆಗುವ ಸಾಧ್ಯತೆ ಇದೆ.
ಮುಂದಿನ 48 ಗಂಟೆಗಳು: ಬಹುತೇಕ ಶುಭ್ರ ಆಕಾಶವಿರಲಿದ್ದು, ಮಧ್ಯಾಹ್ನ/ಸಂಜೆ ವೇಳೆಗೆ ಭಾಗಶಃ ಮೋಡ ಕವಿದ ವಾತಾವರಣ ಇರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35°C ಮತ್ತು 22°C ಆಗುವ ಸಾಧ್ಯತೆ ಇದೆ.
ರಾಜ್ಯದಾದ್ಯಂತ ಏಪ್ರಿಲ್ 1 ಮತ್ತು 2 ರಂದು ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾಧ್ಯತೆಯಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಇನ್ನು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಏ. 3, 4 ಹಾಗೂ ದಕ್ಷಿಣ ಒಳನಾಡಿನಲ್ಲಿ ಏ.2 ರಿಂದ 4ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮುಂದಿನ 5 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) March 30, 2025
ರಾಜ್ಯದಾದ್ಯಂತ ಏಪ್ರಿಲ್ 1 & 2 ರಂದು ಮೋಡ ಕವಿದ ವಾತಾವರಣದೊಂದಿಗೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 40-50 ಕಿಮೀ ತಲುಪುವ ಸಾದ್ಯತೆಯಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. pic.twitter.com/2CB3IyehQm
ಏ.1ರಂದು ಕರಾವಳಿ ಕರ್ನಾಟಕದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಹಾಸನ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.
ಏ.2ರಂದು ಕೆಳ ಹಂತದ ಪೂರ್ವ ದಿಕ್ಕಿನ ತಗ್ಗು, ಮೇಲ್ಮಟ್ಟದ ಪಶ್ಚಿಮ ದಿಕ್ಕಿನ ತಗ್ಗು ಮತ್ತು ಬಿಸಿಲಿನ ಪ್ರಭಾವದಿಂದಾಗಿ, ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮತ್ತು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗಲಿದ್ದು, ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
ಏ.3ರಂದು ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ಸುದ್ದಿಯನ್ನೂ ಓದಿ | Health Tips: ಬೇಸಿಗೆಯಲ್ಲಿ ಯಾವ ಬಗೆಯ ಚರ್ಮದ ಆರೈಕೆ ಹೇಗಿರಬೇಕು?
ಏ.4ರಂದು ಕರಾವಳಿ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.