Karnataka weather: ಇಂದು ರಾಜ್ಯಾದ್ಯಂತ ಒಣ ಹವೆ; ಮಾ.11ರಿಂದ ಕರಾವಳಿ, ದಕ್ಷಿಣ ಒಳನಾಡಲ್ಲಿ ಮಳೆ ನಿರೀಕ್ಷೆ
Karnataka weather: ಮಾರ್ಚ್ 10ರವರೆಗೆ ರಾಜ್ಯಾದ್ಯಂತ ಒಣ ಹವೆಯ ವಾತಾವರಣ ಇರಲಿದ್ದು, ನಂತರ ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಒಣ ಹವೆ ವಾತಾವರಣವಿತ್ತು. ಇಂದು (ಮಾ.8) ಕೂಡ ಒಣ ಹವೆ (Karnataka weather) ಇರುವ ಸಾಧ್ಯತೆಯಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಭಾಗದಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ಆಕಾಶವಿರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 34°C ಮತ್ತು 20°C ಇರುವ ಸಾಧ್ಯತೆ ಇದೆ. ಹಾಗೆಯೇ ಇನ್ನೆರಡು ಮೂರು ದಿನಗಳ ಬಳಿಕ ರಾಜ್ಯದಲ್ಲಿ ಬೇಸಿಗೆ ಮಳೆಯಾಗುವ ಮುನ್ಸೂಚನೆಯನ್ನು ಎಂದು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಇನ್ನು ಮಾ. 9ರಂದು ಕೂಡ ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಇದೇ ರೀತಿಯ ಸ್ಥಿತಿ ಮಾರ್ಚ್ 10ರಂದು ಇರಲಿದೆ. ನಂತರ ಮಾ.11ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರದ ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾದ ಲಘು ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.
ಮಾ.12ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಲಘು ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.
ದಿನ 7(13 ಮಾರ್ಚ್ 2025): ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಲಘು ಮಳೆಯಾಗುವ ಸಾಧ್ಯತೆಯಿದೆ.ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.
ಮುಂದಿನ 5 ದಿನಗಳವರೆಗೆ ಕರ್ನಾಟಕದದಲ್ಲಿ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆ ಇಲ್ಲ. ಮುಂದಿನ 2 ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಾಗುವುದಿಲ್ಲ ಎಂದು ಇಲಾಖೆ ತಿಳಿಸಿದೆ.
ಈ ಸುದ್ದಿಯನ್ನೂ ಓದಿ | International Women's Day 2025: ಭಾರತೀಯ ನಾರಿಯರಿಂದ ನಿರ್ಮಾಣಗೊಂಡ ಪ್ರಾಚೀನ ಸ್ಮಾರಕಗಳು ಇವು...!
ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಗುರುವಾರ ಕಲಬುರಗಿಯಲ್ಲಿ ಅತೀ ಹೆಚ್ಚು ಉಷ್ಣಾಂಶ 37.8 ಡಿ.ಸೆ ದಾಖಲಾಗಿತ್ತು. ಇನ್ನು ಬೀದರ್‌ನಲ್ಲಿ ಅತೀ ಕಡಿಮೆ ಉಷ್ಣಾಂಶ 12.0 ಡಿ.ಸೆ. ಬೀದರನಲ್ಲಿ ದಾಖಲಾಗಿತ್ತು.