Karnataka Weather: ಯೆಲ್ಲೋ ಅಲರ್ಟ್; ಇಂದು ಬೆಂಗಳೂರು, ಕೊಡಗು ಸೇರಿ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ
Karnataka Weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ.


ಬೆಂಗಳೂರು: ರಾಜ್ಯದಲ್ಲಿ ಇನ್ನಷ್ಟು ದಿನ ಪೂರ್ವ ಮುಂಗಾರು ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದ್ದು, ಮುಂದಿನ 3 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆ (Karnataka Rains) ಬೀಳುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಏಪ್ರಿಲ್ 23ರವರೆಗೆ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ವರುಣ ಆರ್ಭಟಿಸಲಿದ್ದಾನೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಸಂಜೆ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 33°C ಮತ್ತು 22°C ಇರುವ ಸಾಧ್ಯತೆ ಇದೆ.
ಏಪ್ರಿಲ್ 21ರಂದು ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಏ. 22ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಏ.23ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಹಾವೇರಿ, ಗದಗ, ಧಾರವಾಡ, ಕೊಪ್ಪಳ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಏ. 24ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆ/ಗುಡುಗು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಮಂಡ್ಯ, ತುಮಕೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health: ವರ್ಟಿಗೋ ಅಥವಾ “ಚಕ್ಕರ್” ಕುರಿತು ತಿಳಿಯಬೇಕೇ? ಈ ಒಳನೋಟಪೂರ್ಣ ಅಧ್ಯಯನ ವರದಿ ಓದಿ!
ಏ. 25 ಮತ್ತು 26ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ರಾಯಚೂರು, ಗದಗ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಹಗುರ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.