ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ ಶುರು; ಬೆಂಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ವರ್ಷಧಾರೆಯಾಗುವ ಸಾಧ್ಯತೆ

Karnataka Weather: ಆಂಧ್ರ ಪ್ರದೇಶದ ಕರಾವಳಿಗೆ ಅಪ್ಪಳಿಸಿದ ಮುರಸು ಚಂಡಮಾರುತದ ಪ್ರಭಾವದಿಂದ ರಾಜ್ಯದಲ್ಲೂ ಮಳೆಯಾಗಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಬಿರುಗಾಳಿ, ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಸಾಂಧರ್ಬಿಕ ಚಿತ್ರ

ಬೆಂಗಳೂರು, ನ. 4: ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ಮುರಸು ಚಂಡಮಾರುತವು (Cyclone Murasu) ಆಂಧ್ರ ಪ್ರದೇಶ ಕರಾವಳಿಗೆ ಅಪ್ಪಳಿಸಿದ್ದು, ಇದರ ಪ್ರಭಾವ ಇಂದು (ನವೆಂಬರ್ 4) ರಾಜ್ಯದಲ್ಲೂ ಕಂಡು ಬರಲಿದೆ (Karnataka Weather). ಬೆಂಗಳೂರು ಸಹಿತ ವಿವಿಧಡೆ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಬಿರುಗಾಳಿ, ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಇನ್ನು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು (ನಗರ, ಗ್ರಾಮಾಂತರ), ಬಳ್ಳಾರಿ, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆಡೆ, ಚಿತ್ರದುರ್ಗ, ಮಂಡ್ಯ, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ವರ್ಷಧಾರೆಯಾಗಲಿದೆ. ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.

ಪ್ರತಿ ಕೊಠಡಿಗೆ ಇಬ್ಬರು ಮೇಲ್ವಿಚಾರಕರು; ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ ಮತ್ತಷ್ಟು ಕಠಿಣ ಕ್ರಮ ಕೈಗೊಂಡ ಕೆಇಎ

ಇನ್ನೂ ಮಳೆಯಾಗುತ್ತ?

ಹವಾಮಾನ ವರದಿಯ ಪ್ರಕಾರ ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರಿಯಲಿದೆ. ನವೆಂಬರ್‌ 5ರಂದು ಕರಾವಳಿಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ ಜತೆಗೆ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆ ಸುರಿಯಲಿದೆ. ಬೆಂಗಳೂರು (ನಗರ, ಗ್ರಾಮಾಂತರ), ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆಡೆ, ಶಿವಮೊಗ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಕಲಬುರಗಿ, ಯಾದಗಿರಿ, ರಾಉಚೂರು, ಕೊಪ್ಪಳ, ಹಾವೇರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ನವೆಂಬರ್‌ 9ರ ತನಕ ಮಳೆ ಇರಲಿದೆ.

ಆಂಧ್ರ ಕರಾವಳಿಗೆ ಅಪ್ಪಳಿಸಿದ ಮುರಸು

ಬಂಗಾಳಕೊಲ್ಲಿಯಲ್ಲಿ ಎದ್ದಿರುವ ತೀವ್ರ ಸ್ವರೂಪದ ಮುರಸು ಚಂಡಮಾರುತವು ನವೆಂಬರ್ 3ರ ಮುಂಜಾನೆ ಆಂಧ್ರ ಪ್ರದೇಶದ ಕರಾವಳಿಗೆ ಅಪ್ಪಳಿಸಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಈ ಚಂಡಮಾರುತವು ಮಂಗಳವಾರ ಮುಂಜಾನೆ ನೆಲ್ಲೂರು ಮತ್ತು ನರಸಾಪುರ ನಡುವೆ ವಿಶೇಷವಾಗಿ ಒಂಗೋಲ್ ಕರಾವಳಿಯ ಬಳಿ ಭೂಮಿಯನ್ನು ಸ್ಪರ್ಶಿಸಿದೆ.

ಭೂಕುಸಿತದ ನಂತರ ಚಂಡಮಾರುತವು ತೀರ ದಾಟಿ ಒಳನಾಡಿನತ್ತ ಚಲಿಸುತ್ತಿದೆ. ಆಂಧ್ರ ಪ್ರದೇಶದ ದಕ್ಷಿಣ ಕರಾವಳಿ ಜಿಲ್ಲೆಗಳಾದ ಪ್ರಕಾಶಂ, ಬಾಪಟ್ಟಾ, ಕೃಷ್ಣ, ಗುಂಟೂರು, ಎನ್‌. ಟಿ.ಆರ್‌. ಮತ್ತು ನೆಲ್ಲೂರು ಜಿಲ್ಲೆಗಳಲ್ಲಿ ಮುಂದಿನ 12 ಗಂಟೆಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಮುನ್ನೆಚ್ಚರಿಕಾ ಕ್ರಮವಾಗಿ ಹಲವು ಜಿಲ್ಲ ಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುರಸು ಚಂಡಮಾರುತ ಕರಾವಳಿಗೆ ಅಪ್ಪಳಿಸುವ ಸಮಯದಲ್ಲಿ ಮತ್ತು ಅದರ ಸುತ್ತಲಿನ ಪ್ರದೇಶಗಳಲ್ಲಿ ಗಂಟೆಗೆ 100-110 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author