ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mallikarjun Kharge: ನಾನೇನೂ ಹೇಳೊಲ್ಲ: ಸಿಎಂ ಗೊಂದಲ ಬಗ್ಗೆ ಮೌನ ಮುರಿದ ಮಲ್ಲಿಕಾರ್ಜುನ ಖರ್ಗೆ

Karnataka Congress: ರಾಜ್ಯ ಸರ್ಕಾರ ಹಾಗೂ ಪಕ್ಷಕ್ಕೆ ತೀವ್ರ ಹಾನಿಯುಂಟು ಮಾಡುತ್ತಿರುವ ನಾಯಕತ್ವ ಬದಲಾವಣೆ ಗೊಂದಲಕ್ಕೆ ಅಂತಿಮ ತೆರೆ ಎಳೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒತ್ತಾಯಿಸಿದ್ದರು. ಇಂದು ಖರ್ಗೆ ಅವರು ಮಾಧ್ಯಮಗಳ ಮುಂದೆ ಮೊದಲ ಬಾರಿಗೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ಸದ್ಯ ರಾಜ್ಯ ಕಾಂಗ್ರೆಸ್‌ನಲ್ಲಿ (Karnataka congress) ಸಿಎಂ (Chief minister) ಸ್ಥಾನಮಾನದ ಬಗ್ಗೆ ನಡೆಯುತ್ತಿರುವ ಹೇಳಿಕೆ- ಪ್ರತಿಹೇಳಿಕೆಗಳ ಗೊಂದಲದ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (AICC president Mallikarjun Kharge) ಕೊನೆಗೂ ಮೌನ ಮುರಿದು ಮೊಟ್ಟಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸದ್ಯಕ್ಕೆ ನನ್ನ ಹತ್ತಿರ ಹೇಳೋಕೆ ಏನೂ ಇಲ್ಲ ಎಂದಿದ್ದಾರೆ.

ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ರಾತ್ರಿ 8 ಗಂಟೆಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಹಲವು ವಿಚಾರಗಳ ಕುರಿತು ಚರ್ಚೆ ಮಾಡಿದ್ದರು. ಇಂದು ಈ ಬಗ್ಗೆ ಮಾಧ್ಯಮಗಳು ಪ್ರಶ್ನೆ ಮಾಡಿದಾಗ ಖರ್ಗೆ ಈ ಚುಟುಕು ಉತ್ತರ ನೀಡಿ ಕಾರು ಹತ್ತಿದ್ದಾರೆ. ಯಾವ ವಿಚಾರದಲ್ಲೂ ನನಗೆ ಹೇಳೋಕೆ ಈಗ ಏನೂ ಇಲ್ಲ. ಸದ್ಯದ ಬೆಳವಣಿಗೆ ಬಗ್ಗೆ ನಾನು ಏನೂ ಹೇಳಲ್ಲ. ಎಲ್ಲವನ್ನೂ ಹೈಕಮಾಂಡ್ ತೀರ್ಮಾನ ಮಾಡುತ್ತೆ ಎಂದು ಖರ್ಗೆ ಹೇಳಿದರು.

ಆ ಮೂಲಕ, ಚೆಂಡನ್ನು ರಾಹುಲ್‌ ಗಾಂಧಿ ಅವರ ಕೋರ್ಟ್‌ಗೆ ಎಸೆಯಲಾಗಿದೆ ಎಂದು ಪರೋಕ್ಷವಾಗಿ ಅವರು ಹೇಳಿದ್ದಾರೆ. ರಾಹುಲ್ ಗಾಂಧಿ ಜೊತೆ ಚರ್ಚಿಸಿದ ನಂತರವೇ ಅಂತಿಮ ನಿರ್ಧಾರ ಎಂಬರ್ಥದಲ್ಲಿ ಅವರು ಮಾತನಾಡಿದ್ದಾರೆ. ಸದ್ಯ ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದು, ಅವರು ಬಂದ ಬಳಿಕವೇ ಈ ಬಣ ಕಿತ್ತಾಟಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಈ ಮೂಲಕ, ತಾವೇ ಸ್ವತಃ ಎಐಸಿಸಿ ಅಧ್ಯಕ್ಷರಾಗಿದ್ದು, ಹೈಕಮಾಂಡ್‌ ಆಗಿದ್ದರೂ, ತನಗಿಂತ ಮೇಲೆ ಇನ್ನೊಬ್ಬರು ಹೈಕಮಾಂಡ್‌ ಇದ್ದಾರೆ, ಅವರು ಎಲ್ಲನ್ನೂ ತೀರ್ಮಾನ ಮಾಡುತ್ತಾರೆ ಎಂದು ಖರ್ಗೆ ಸೂಚಿಸಿದ್ದಾರೆ.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ: ತಂದೆ ಪರ ಯತೀಂದ್ರ ಮತ್ತೆ ಬ್ಯಾಟಿಂಗ್

ಗೊಂದಲಕ್ಕೆ ತೆರೆ ಎಳೆಯಲು ಖರ್ಗೆಗೆ ಸಿಎಂ ಒತ್ತಾಯ

ರಾಜ್ಯ ಸರ್ಕಾರ ಹಾಗೂ ಪಕ್ಷಕ್ಕೆ ತೀವ್ರ ಹಾನಿಯುಂಟು ಮಾಡುತ್ತಿರುವ ನಾಯಕತ್ವ ಬದಲಾವಣೆ ಗೊಂದಲಕ್ಕೆ ಅಂತಿಮ ತೆರೆ ಎಳೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಖರ್ಗೆ ಅವರು, ದೆಹಲಿಗೆ ತೆರಳಿದ ಕೂಡಲೇ ವರಿಷ್ಠ ರಾಹುಲ್‌ ಗಾಂಧಿ ಅವರೊಂದಿಗೆ ಚರ್ಚಿಸಿ ಈ ಬಗ್ಗೆ ಸ್ಪಷ್ಟತೆ ನೀಡುವ ಮೂಲಕ ಗೊಂದಲ ಪರಿಹರಿಸುವ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಪ್ರಸ್ತುತ ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ನ. 26ರಂದು ಹಿಂತಿರುಗಲಿದ್ದು, ಅನಂತರ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿಗೆ ಬುಲಾವ್‌ ನೀಡಿ ಈ ವಿಚಾರದ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಇದನ್ನೂ ಓದಿ: Cm Siddaramaiah: ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ತಲೆ ಬಾಗಲೇ ಬೇಕು; ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿದ್ದೇನು?

ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಿದ ಬೆನ್ನಲ್ಲೇ ತೀವ್ರಗೊಂಡಿರುವ ಅಧಿಕಾರ ಹಸ್ತಾಂತರ ಗೊಂದಲ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸುಮಾರು ಒಂದೂವರೆ ಗಂಟೆ ಸುದೀರ್ಘ ಚರ್ಚೆ ನಡೆಸಿದರು. ಈ ಚರ್ಚೆಯ ವೇಳೆ ಸಚಿವ ಸಂಪುಟ ಪುನಾರಚನೆಯೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿವರವಾದ ಚರ್ಚೆ ನಡೆದಿದೆ. ರಾಜ್ಯ ಸರ್ಕಾರಕ್ಕೆ ಯಶಸ್ವಿ ಎರಡೂವರೆ ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸಂಪುಟ ಪುನಾರಚನೆ ಪ್ರಸ್ತಾಪವನ್ನು ಮತ್ತೆ ಮಂಡಿಸಿದರು ಎನ್ನಲಾಗಿದೆ.

ಹರೀಶ್‌ ಕೇರ

View all posts by this author