ಫೋಟೋ ಗ್ಯಾಲರಿ ಗುಜರಾತ್​ ವಿಮಾನ ಪತನ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bike Taxi Ban: ಓಲಾ, ಉಬರ್‌, ರ‍್ಯಾಪಿಡೋಗೆ ಶಾಕ್; ಬೈಕ್‌ ಟ್ಯಾಕ್ಸಿ ಸೇವೆ ನಿರ್ಬಂಧ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

Bike Taxi Service: ಈ ಮೊದಲು ಜೂನ್‌ 15ರವರೆಗೆ ಬೈಕ್‌ ಟ್ಯಾಕ್ಸಿ ಸೇವೆ ವಿಸ್ತರಣೆಗೆ ಕೋರ್ಟ್ ಅವಕಾಶ ನೀಡಿತ್ತು. ಆದರೆ, ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಅನುಮತಿಗೆ ನಿರ್ದೇಶನ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್‌ ವಿಭಾಗೀಯ ಪೀಠವು, ಏಕಸದಸ್ಯ ಪೀಠ ಮಾಡಿದ್ದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.

ಬೈಕ್‌ ಟ್ಯಾಕ್ಸಿ ಸೇವೆ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್‌ ನಕಾರ

Profile Prabhakara R Jun 13, 2025 9:18 PM

ಬೆಂಗಳೂರು: ಮೋಟಾರು ವಾಹನ ಕಾಯಿದೆಯಡಿ ರಾಜ್ಯ ಸರ್ಕಾರವು ಸೂಕ್ತ ಮಾರ್ಗಸೂಚಿಗಳನ್ನು ರೂಪಿಸುವವರೆಗೆ ಓಲಾ, ಉಬರ್ ಮತ್ತು‌ ರ‍್ಯಾಪಿಡೋ ಬೈಕ್‌ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸಲು ಏಕಸದಸ್ಯ ಪೀಠ ಮಾಡಿದ್ದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್‌ ಶುಕ್ರವಾರ ನಿರಾಕರಿಸಿದೆ. ಇದರಿಂದ ರಾಜ್ಯದಲ್ಲಿ ಜೂನ್‌ 16ರಿಂದ ಬೈಕ್‌ ಟ್ಯಾಕ್ಸಿ ಸೇವೆ‌ ಸ್ಥಗಿತಗೊಳ್ಳಲಿದೆ.

ಈ ಮೊದಲು ಜೂನ್‌ 15ರವರೆಗೆ ಬೈಕ್‌ ಟ್ಯಾಕ್ಸಿ ಸೇವೆ ವಿಸ್ತರಣೆಗೆ ಕೋರ್ಟ್ ಅವಕಾಶ ನೀಡಿತ್ತು. ಆದರೆ, ಬೈಕ್‌ ಟ್ಯಾಕ್ಸಿ ಸೇವೆ ಮುಂದುವರಿಸಲು ಅನುಮತಿಗೆ ನಿರ್ದೇಶನ ಕೋರಿ ಎಎನ್‌ಐ ಟೆಕ್ನಾಲಜೀಸ್‌ ಪ್ರೈವೇಟ್‌ ಲಿಮಿಟೆಡ್‌ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್‌ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್‌ ಹರೀಶ್‌ ಕುಮಾರ್‌ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ನಿಯಮ ರೂಪಿಸಲಾಗುತ್ತಿದ್ದು, ತಡವಾಗಲಿದೆ ಎಂದು ಸರ್ಕಾರ ಹೇಳಿದ್ದರೆ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಬಹುದಿತ್ತು. ಆದರೆ, ಬೈಕ್‌ ಟ್ಯಾಕ್ಸಿಗೆ ಅನುಮತಿಸುವುದಿಲ್ಲ ಎಂದು ರಾಜ್ಯ ಸರ್ಕಾರವು ನೀತಿಯ ಭಾಗವಾಗಿ ಕ್ರಮಕೈಗೊಂಡಿದೆ. ಹೀಗಾಗಿ, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲಾಗದು. ಇದರಲ್ಲಿ ಬೈಕ್‌ ಟ್ಯಾಕ್ಸಿ ಚಾಲಕರು ಮತ್ತು ಸಾರ್ವಜನಿಕರ ಹಿತಾಸಕ್ತಿ ಇದೆ ಎಂಬುದರ ಅರಿವಿದೆ ಎಂದೂ ನ್ಯಾಯಾಲಯ ಹೇಳಿದೆ.

ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು, ನಮ್ಮ ಪ್ರಕಾರ ಹೊಸ ನಿಯಮಗಳೇ ಬೇಕಿಲ್ಲ. ದ್ವಿಚಕ್ರ ವಾಹವನ್ನು ಸಾರಿಗೆ ವಾಹನವನ್ನಾಗಿ ಬಳಕೆ ಮಾಡಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ. ಇದನ್ನು ಏಕಸದಸ್ಯ ಪೀಠ ಗುರುತಿಸಿದೆ. ರಾಜ್ಯ ಸರ್ಕಾರವು ನಿಯಮ ರೂಪಿಸಿರುವುದರಿಂದ ನಾಲ್ಕು ಚಕ್ರ ವಾಹನಗಳು ಟ್ಯಾಕ್ಸಿ ಸೇವೆ ನೀಡುತ್ತಿವೆ. ಇದು ದ್ವಿಚಕ್ರ ವಾಹನಗಳಿಗೂ ಅನ್ವಯಿಸುತ್ತದೆ ಎಂದರು.

ಇದಕ್ಕೆ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು, ಹಾಗಾದರೆ ಇದರಡಿ ಟ್ರಕ್‌ ಅನ್ನು ತರಬಹುದು ಎಂದಾಗುತ್ತದೆ ಅಲ್ಲವೇ ಎಂದರು. ಅಲ್ಲದೇ, ಮಧ್ಯಂತರ ಪರಿಹಾರಕ್ಕೆ ವಿರೋಧಿಸಿದರು. ಮುಂದುವರಿದು, ಐದು ವರ್ಷದಿಂದ ಅವರು ಪರ್ಮಿಟ್‌ ಇಲ್ಲದೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಈ ಸುದ್ದಿಯನ್ನೂ ಓದಿ | MLA Vinay Kulkarni: ಯೋಗೀಶ್ ಗೌಡ ಹತ್ಯೆ ಪ್ರಕರಣ; ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ!

ಇದಕ್ಕೆ ಚಿನ್ನಪ್ಪ ಅವರು, ಮುಂದಿನ ವಿಚಾರಣೆವರೆಗೆ ತಡೆ ನೀಡಬೇಕು ಎಂದರು. ಇದಕ್ಕೆ ನಿರಾಕರಿಸಿದ ಪೀಠವು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿ, ವಿಚಾರಣೆಯನ್ನು ಜೂನ್‌ 24ಕ್ಕೆ ಮುಂದೂಡಿತು.