ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ASHA workers: ಆಶಾ ಕಾರ್ಯಕರ್ತೆಯರಿಗೆ ಗುಡ್‌ ನ್ಯೂಸ್‌; ಗೌರವಧನ 1000 ರೂ. ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ

ASHA workers: 2025-26 ನೇ ಸಾಲಿನ ರಾಜ್ಯ ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದಂತೆ ʼಆಶಾ ಕಾರ್ಯಕರ್ತೆಯರಿಗೆ ತಂಡಾಧಾರಿತ ಪ್ರೋತ್ಸಾಹಧನ 1000 ರೂ. ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪವಿತ್ರಾ ಆದೇಶ ಹೊರಡಿಸಿದ್ದಾರೆ.

ಆಶಾ ಕಾರ್ಯಕರ್ತೆಯರಿಗೆ ಗೌರವಧನ 1000 ರೂ. ಹೆಚ್ಚಳ

Profile Prabhakara R May 16, 2025 5:00 PM

ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ (ASHA workers) ರಾಜ್ಯ ಸರ್ಕಾರದಿಂದ ಗುಡ್‌ ನ್ಯೂಸ್‌ ಸಿಕ್ಕಿದೆ. ರಾಜ್ಯ ಬಜೆಟ್‌ನಲ್ಲಿ ಘೋಷಿಸಿದಂತೆ ಆಶಾ ಕಾರ್ಯಕರ್ತೆಯರ ಗೌರವಧನವನ್ನು 1000 ರೂ. ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪವಿತ್ರಾ ಆದೇಶ ಹೊರಡಿಸಿದ್ದಾರೆ. 2025-26 ನೇ ಸಾಲಿನ ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದಂತೆ ʼಆಶಾ ಕಾರ್ಯಕರ್ತೆಯರಿಗೆ ತಂಡಾಧಾರಿತ ಪ್ರೋತ್ಸಾಹಧನ 1000 ರೂ. ಹೆಚ್ಚಿಸಲು ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರಿಂದ ಸ್ವೀಕೃತವಾದ ಏಕಕಡತದಲ್ಲಿ ಆಶಾ ಕಾಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಗುರುತಿಸಿ, ಆಯ್ಕೆ ಮಾಡಲಾಗಿದೆ. ಅವರ ಗ್ರಾಮ/ಪ್ರದೇಶದ ವ್ಯಾಪ್ತಿಯಲ್ಲಿ ಸಮುದಾಯದ ಆರೋಗ್ಯ ಸ್ಥಿತಿಯ ಸುಧಾರಣೆಗೆ ಆರೋಗ್ಯ ಸೇವೆಗಳನ್ನು ಪಡೆಯಲು ಮತ್ತು ಆರೋಗ್ಯ ಆರೈಕೆ ಚಟುವಟಿಕೆಗಳು ಹಾಗೂ ನಡವಳಿಕೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರತಿ 1000 ಜನಸಂಖ್ಯೆಗೆ ಹಾಗೂ ನಗರ ಪ್ರದೇಶದಲ್ಲಿ ಪ್ರತಿ 2500 ಜನಸಂಖ್ಯೆಗೆ ಒಬ್ಬರಂತೆ ಆಶಾಕಾರ್ಯಕರ್ತೆಯನ್ನು ಆಯ್ಕೆ ಮಾಡಲಾಗುವುದು, ಇದರಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ 42,524 ಹುದ್ದೆಗಳು ಮಂಜೂರಾಗಿದ್ದು, ಪ್ರಸ್ತುತ 41000 ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಆಯುಷ್ಮಾನ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು ಆರೋಗ್ಯ ನಿರೀಕ್ಷಣಾಧಿಕಾರಿಗಳು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಮತ್ತು ಸಾಮೂಹಿಕ ನೆಲೆಗಟ್ಟಿನ ಕಾರ್ಯನಿರ್ವಹಣೆಯನ್ನು ಉತ್ತೇಜಿಸಲು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅನುದಾನದಿಂದ ತಂಡ ಆಧಾರಿತ ಪ್ರೋತ್ಸಾಹಧನವನ್ನು (Team based Incentive) ವಿನ್ಯಾಸಗೊಳಿಸಲಾಗಿದೆ.

  • ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳು- 1,500 ರೂ.
  • ಆರೋಗ್ಯ ನಿರೀಕ್ಷಣಾಧಿಕಾರಿಗಳು- 1500 ರೂ.
  • ಆಶಾ ಕಾರ್ಯಕರ್ತೆಯರು – 1000 ರೂ.

ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರ-ಆಯುಷ್ಮಾನ್ ಆರೋಗ್ಯ ಮಂದಿರ ಕೇಂದ್ರ ಸ್ನಾನದ ಆರೋಗ್ಯ ಉಪಕೇಂದ್ರಗಳು, ಆಯುಷ್ಮಾನ್ ಆರೋಗ್ಯ ಮಂದಿರಗಳಾಗಿ ಮೇಲ್ದರ್ಜೆಗೇರದ ಆರೋಗ್ಯ ಉಪಕೇಂದ್ರಗಳು ಮತ್ತು ನಗರ ಪ್ರದೇಶದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 15,004 ಆಶಾಕಾರ್ಯಕರ್ತೆಯರಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ತಂಡ ಆಧಾರಿತ ಪ್ರೋತ್ಸಾಹ ಧನವು (Team based Incentive) ಅನುಮೋದನೆಯಾಗಿಲ್ಲ. ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಶಾಕಾರ್ಯಕರ್ತೆಯರಿಗೆ ಸಮಾನವಾಗಿ ತಂಡ ಆಧಾರಿತ ಪ್ರೋತ್ಸಾಹ ಧನವನ್ನು ನೀಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಆಶಾಕಾರ್ಯಕರ್ತೆಯರಿಗೆ ಮಾಸಿಕ ರೂ. 1000 ಪ್ರೋತ್ಸಾಹಧನವನ್ನು ನೀಡಲು 18 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರದ ಅನುದಾನದಿಂದ ಭರಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ | Greater Bengaluru: ಗ್ರೇಟರ್‌ ಬೆಂಗಳೂರಿಗೆ ಮೀಸಲಾತಿ ಪ್ರಕಟಿಸಿ ಶೀಘ್ರದಲ್ಲೇ ಚುನಾವಣೆ: ಡಿಸಿಎಂ ಡಿಕೆಶಿ