ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Hot weather: ಬಿಸಿಲ ತಾಪ: 9 ಜಿಲ್ಲೆಗಳ ಕಚೇರಿ ಸಮಯ ಬದಲಾವಣೆ, ಮಧ್ಯಾಹ್ನ 1.30ವರೆಗೂ ಮಾತ್ರ ಕೆಲಸ

ಬೇಸಿಗೆಯ ತೀವ್ರ ಬಿಸಿಲಿನಿಂದಾಗಿ ನೌಕರರು ಕರ್ತವ್ಯ ನಿರ್ವಹಿಸಲು ಎದುರಿಸುತ್ತಿರುವ ತೊಂದರೆಗಳನ್ನು ಮನಗಂಡು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವಿವಿಧ ನೌಕರರ ಒಕ್ಕೂಟಗಳು ಸರ್ಕಾರದ ಮುಂದೆ ಮನವಿ ಸಲ್ಲಿಸಿದ್ದವು. ಈ ಪ್ರಸ್ತಾವನೆಯ ಹಿನ್ನೆಲೆಯಲ್ಲಿ ಸರ್ಕಾರ ಮಾನವೀಯ ದೃಷ್ಟಿಯಿಂದ ಕೆಲಸದ ಅವಧಿಯನ್ನು ಬದಲಾಯಿಸಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು, ಏ.1: ಉತ್ತರ ಕರ್ನಾಟಕದ (Uttara Karnataka weather) ಜಿಲ್ಲೆಗಳಲ್ಲಿ ಬೇಸಿಗೆಯ ಬಿಸಿಲಿನ (Hot weather) ತಾಪಮಾನ ಗಣನೀಯವಾಗಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಸರ್ಕಾರಿ ನೌಕರರ (Government employees) ಹಿತದೃಷ್ಟಿಯಿಂದ ರಾಜ್ಯ ಸರ್ಕಾರವು (Karnataka government) 9 ಜಿಲ್ಲೆಗಳ ಕಚೇರಿ ಕೆಲಸದ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಅಂದರೆ, ಕಲಬುರಗಿ, ಬೀದರ್ , ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಈ ಹೊಸ ವೇಳಾಪಟ್ಟಿ ಜಾರಿಯಲ್ಲಿರಲಿದೆ.

ಬದಲಾದ ಸಮಯದ ವಿವರ

ಅವಧಿ: 2026ರ ಏಪ್ರಿಲ್ ಮತ್ತು ಮೇ ತಿಂಗಳುಗಳವರೆಗೆ ಮಾತ್ರ.

ಹೊಸ ಸಮಯ: ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯವರೆಗೆ.

ಬೇಸಿಗೆಯ ತೀವ್ರ ಬಿಸಿಲಿನಿಂದಾಗಿ ನೌಕರರು ಕರ್ತವ್ಯ ನಿರ್ವಹಿಸಲು ಎದುರಿಸುತ್ತಿರುವ ತೊಂದರೆಗಳನ್ನು ಮನಗಂಡು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ವಿವಿಧ ನೌಕರರ ಒಕ್ಕೂಟಗಳು ಸರ್ಕಾರದ ಮುಂದೆ ಮನವಿ ಸಲ್ಲಿಸಿದ್ದವು. ಈ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು, ಮಾನವೀಯ ದೃಷ್ಟಿಯಿಂದ ಕೆಲಸದ ಅವಧಿಯನ್ನು ಬದಲಾಯಿಸಿದೆ.

Karnataka Weather: ತಂಪಾಯ್ತು ರಾಜಧಾನಿ, ಇಂದೂ ಸುರಿಯಲಿದೆ ಮಳೆ, ಕೆಲವೆಡೆ ಯೆಲ್ಲೋ ಅಲರ್ಟ್

ಪ್ರಮುಖ ಸೂಚನೆಗಳು ಏನು?

ಸಾರ್ವಜನಿಕ ಸೇವೆಗೆ ಅಡ್ಡಿಯಾಗಬಾರದು: ಕಚೇರಿ ಅವಧಿ ಬದಲಾದ ಸಮಯದಲ್ಲೂ ಸಾರ್ವಜನಿಕರಿಗೆ ಯಾವುದೇ ಲೋಪ ಅಥವಾ ಅಡಚಣೆಯಾಗದಂತೆ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಬೇಕು.

ತುರ್ತು ಸಂದರ್ಭ: ತುರ್ತು ಸಂದರ್ಭಗಳಲ್ಲಿ ಅಥವಾ ಅನಿವಾರ್ಯ ಕೆಲಸಗಳಿದ್ದಾಗ ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಸೂಚಿಸಿದಲ್ಲಿ, ಸಮಯದ ಮಿತಿಯಿಲ್ಲದೆ ನೌಕರರು ಕರ್ತವ್ಯ ನಿರ್ವಹಿಸುವುದು ಕಡ್ಡಾಯವಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಜಾರಿಗೆ ತರುವಂತೆ ಸೂಚಿಸಿದ್ದಾರೆ.

ಹರೀಶ್‌ ಕೇರ

View all posts by this author