ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Hubli Girl Murder: ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ; ಎನ್‌ಕೌಂಟರ್‌ನಲ್ಲಿ ಬಿಹಾರದ ಆರೋಪಿ ಹತ್ಯೆ!

Hubli Girl Murder: ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಆರೋಪಿ ಹಲ್ಲೆಗೆ ಯತ್ನಿಸಿದ್ದರಿಂದ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ಈ ವೇಳೆ ಆರೋಪಿ ಮೃತಪಟ್ಟಿದ್ದಾನೆ.

ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ; ಎನ್‌ಕೌಂಟರ್‌ನಲ್ಲಿ ಬಿಹಾರದ ಆರೋಪಿ ಹತ್ಯೆ!

Profile Prabhakara R Apr 13, 2025 8:59 PM

ಹುಬ್ಬಳ್ಳಿ: ನಗರದಲ್ಲಿ 5 ವರ್ಷದ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ
(Hubli Girl Murder) ಮಾಡಿದ್ದ ಬಿಹಾರ ಮೂಲದ ಆರೋಪಿ, ಪೊಲೀಸರ ಎನ್‌ಕೌಂಟರ್‌ಗೆ ಬಲಿಯಾಗಿದ್ದಾನೆ. ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್ ಇರುವ ಜಾಗ ಪತ್ತೆಯಾಗಿದ್ದರಿಂದ ಆತನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಆದರೆ, ಪೊಲೀಸರ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ್ದರಿಂದ ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದು, ಆರೋಪಿ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಕಾಲು ಮತ್ತು ಎದೆಯ ಭಾಗಕ್ಕೆ ಬುಲೆಟ್‌ ತಗುಲಿದ್ದರಿಂದ ಆರೋಪಿ ಕುಸಿದುಬಿದ್ದಿದ್ದಾನೆ. ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಆತ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಬಾಲಕಿಯ ತಂದೆ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿತ್ತು. ಬಾಲಕಿ ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದು ಹೊರೆಗೆ ಮಗು ಆಟವಾಡುತ್ತಿತ್ತು. ಇದನ್ನು ಗಮನಿಸಿದ ರಿತೇಶ್ ಕುಮಾರ್ ಚಾಕೋಲೆಟ್ ಕೊಡುವ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ. ಆರೋಪಿಯ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಮಗಳು ಕಾಣೆಯಾಗಿದ್ದಾಳೆಂದು ತಾಯಿಗೆ ತಿಳಿದಾಗ, ಆಕೆ ಸ್ಥಳೀಯರೊಂದಿಗೆ ಸೇರಿ ಆಕೆಗಾಗಿ ಹುಡುಕಾಟ ಆರಂಭಿಸಿದರು. ಬಾಲಕಿಯ ಪೋಷಕರು ಕೊಪ್ಪಳದವರಾಗಿದ್ದು, ಪೇಂಟಿಂಗ್ ಕೆಲಸಕ್ಕಾಗಿ ಹುಬ್ಬಳ್ಳಿಗೆ ಬಂದಿದ್ದರು. ನಿರ್ಮಾಣ ಹಂತದ ಕಟ್ಟಡದ ಬಳಕೆಯಾಗದ ಶೌಚಾಲಯದಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು.

ಘಟನೆ ಖಂಡಿಸಿ ಅಶೋಕ್ ನಗರ ಪೊಲೀಸ್ ಠಾಣೆಯ ಮುಂದೆ ಸ್ಥಳೀಯರಿಂದ ಬೃಹತ್ ಪ್ರತಿಭಟನೆ ನಡೆದಿತ್ತು. ಹೀಗಾಗಿ ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಠಾಣೆಗೆ ಭೇಟಿ ನೀಡಿ ಪ್ರತಿಭಟನಾ ನಿರತ ಜನರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ಇದರ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಗುಂಡೇಟಿಗೆ ಆರೋಪಿ ಬಲಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ರಾಜಭವನದ ಎದುರೇ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ಪೊಲೀಸರು ದೂರು ಸ್ವೀಕರಿಸುತ್ತಿಲ್ಲ ಎಂದು ಮನನೊಂದು ವ್ಯಕ್ತಿಯೊಬ್ಬ ನಗರದ ರಾಜಭವನದ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ. ಪೊಲೀಸರು ದೂರು ಸ್ವೀಕರಿಸುತ್ತಿಲ್ಲ ಎಂದು ಆತ್ಮಹತ್ಯೆಗೆ ಮುನ್ನಾ ವ್ಯಕ್ತಿ ಆರೋಪಿಸಿದ್ದಾನೆ. ಮತ್ತೊಂದೆಡೆ ಹೆಂಡತಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದೆ. ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ನನಗೆ ಬದುಕಲು ದಾರಿ ಇಲ್ಲ. ಸಾಯುವುದೊಂದೇ ದಾರಿ ಎಂದು ವ್ಯಕ್ತಿ ಹೇಳಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೆಳಗಾವಿಯ ಹಾಸ್ಟೆಲ್‌ನಲ್ಲಿ ಬಿಸಿಎ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಳಗಾವಿ: ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನಡೆದಿದೆ. ಶಿಲ್ಪಾ ಯರಮಸನಾಳ (20) ಆತ್ಮಹತ್ಯೆ (Self Harming) ಮಾಡಿಕೊಂಡ ಯುವತಿ.‌ ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ವಿದ್ಯಾರ್ಥಿನಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಹಾಸ್ಟೆಲ್‌ನ ಐದನೇ ಕೊಠಡಿಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.‌