ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: 2028ರಲ್ಲೂ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ: ಸಿಎಂ ಸಿದ್ದರಾಮಯ್ಯ

CM Siddaramaiah: ಕೆಲವು ಶಾಸಕರು ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುತ್ತಿದ್ದಾರೆ. ಅಭಿಮಾನದಿಂದ ಕೆಲವರು ಹಾಗೇ ಹೇಳಿಕೆ ಕೊಡುತ್ತಾರೆ. ಆದರೆ ಅಧಿಕಾರ ಹಂಚಿಕೆಯ ಬಗ್ಗೆ ಯಾವ ಚರ್ಚೆಯೂ ಕಾಂಗ್ರೆಸ್‌ ಹೈಕಮಾಂಡ್‌ ಮುಂದೆ ಆಗಿಲ್ಲ. 2028ರಲ್ಲೂ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

2028ರಲ್ಲೂ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ: ಸಿಎಂ ಸಿದ್ದರಾಮಯ್ಯ

ಹರೀಶ್‌ ಕೇರ ಹರೀಶ್‌ ಕೇರ Jul 10, 2025 2:31 PM

ಬೆಂಗಳೂರು : ಈ ಅವಧಿಯ ಐದೂ ವರ್ಷಗಳ ಕಾಲ ನಾನೇ ಮುಖ್ಯಮಂತ್ರಿ ಆಗಿರುತ್ತೇನೆ. 2028ರಲ್ಲೂ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿಕೆ ನೀಡಿದ್ದಾರೆ. ಇತ್ತೀಚಿಗೆ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆದ ವಿಶೇಷ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಮಯ್ಯ, 5 ವರ್ಷಗಳ ಕಾಲ ನಾನೇ ಸಿಎಂ ಆಗಿರುತ್ತೇನೆ ಎಂದು ಹೇಳಿಕೆ ನೀಡಿದ್ದರು. ಇದೀಗ ರಾಷ್ಟ್ರೀಯ ಮಾಧ್ಯಮವೊಂದರ ಸಂದರ್ಶನದಲ್ಲಿ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅದನ್ನು ಪುನುರುಚ್ಚರಿಸಿದ್ದಾರೆ.

ಕೆಲವು ಶಾಸಕರು ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸುತ್ತಿದ್ದಾರೆ. ಹೆಚ್ಚಿನ ಶಾಸಕರೇನೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಬೆಂಬಲಿಸಿಲ್ಲ. ಅಧಿಕಾರ ಹಂಚಿಕೆಯ ಬಗ್ಗೆ ಯಾವ ಚರ್ಚೆಯೂ ಕೂಡ ಆಗಿಲ್ಲ. 2028ರಲ್ಲೂ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ ಎಂದು ತಿಳಿಸಿದ್ದಾರೆ.

ಹೈಕಮಾಂಡ್ ಏನು ನಿರ್ಧಾರ ಮಾಡುತ್ತದೆಯೋ ನಾನು ಅದಕ್ಕೆ ಬದ್ಧನಾಗಿದ್ದೇನೆ. ನಾನಾಗಲಿ ಡಿಸಿಎಂ ಡಿಕೆ ಶಿವಕುಮಾರ್ ಆಗಲಿ ಹೈಕಮಾಂಡ್ ಹೇಳುವುದನ್ನು ಪಾಲನೆ ಮಾಡಬೇಕು. ಡಿಕೆ ಶಿವಕುಮಾರ್ ಕೂಡ ಸಿಎಂ ಬದಲಾಗಲಿ ಅಂತ ಹೇಳಿಕೆ ಕೊಟ್ಟಿಲ್ಲ. ಡಿ ಕೆ ಶಿವಕುಮಾರ್ ಸಿಎಂ ಹುದ್ದೆ ಆಕಾಂಕ್ಷಿ ಆದರೆ ತಪ್ಪೇನಿಲ್ಲ. ಅವರು ಸಹ ಸದ್ಯ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಪಕ್ಷದಲ್ಲಿ ಯಾವುದೇ ಚರ್ಚೆ ಆಗಿಲ್ಲ. ಶಾಸಕರ ಜೊತೆಗೆ ರಣದೀಪ್ ಸಿಂಗ್ ಅವರು ಸಭೆ ಮಾಡಿರುವುದು ನಾಯಕತ್ವ ವಿಚಾರವಾಗಿ ಮಾಡಿದ ಸಭೆ ಅಲ್ಲ. ಹಾಗಂತ ಈಗಾಗಲೇ ರಣದೀಪ್ ಸಿಂಗ್ ಸುರ್ಜೆವಾಲಾ ತಿಳಿಸಿದ್ದಾರೆ. ಏನೇ ತೀರ್ಮಾನ ಮಾಡಿದರೂ ಒಪ್ಪಬೇಕು ಎಂದು ಹೈಕಮಾಂಡ್ ಹೇಳಿದೆ. ಸುಖಾಸುಮ್ಮನೆ ಉಹಾಪೋಹಗಳು ಹರಿದಾಡುತ್ತಿವೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ನಾವು ಹೇಳಿದ್ದೇವೆ ಎಂದರು.

ಸಿಎಂ ಕುರ್ಚಿ ಖಾಲಿ ಇಲ್ಲದಿದ್ದಾಗ ಆ ಕುರಿತು ಯಾಕೆ ಚರ್ಚೆ ಮಾಡುತ್ತಿದ್ದೀರಿ? ಕೆಲವು ಡಿಕೆ ಶಿವಕುಮಾರ್ ಬೆಂಬಲಿಗರು ಅಭಿಮಾನದಿಂದ ಹೇಳುತ್ತಾರೆ. ಹೈಕಮಾಂಡ್ ಏನೇ ನಿರ್ಧಾರ ಕೈಗೊಂಡರೂ ನಾನು ಮತ್ತು ಡಿಕೆಶಿ ಅದಕ್ಕೆ ಬದ್ಧರಾಗಿದ್ದೇವೆ. ಸರ್ಕಾರ ಎರಡೂವರೆ ವರ್ಷ ಪೂರೈಸಿದ್ದಕ್ಕೆ ಸ್ವಾಭಾವಿಕವಾಗಿ ಚರ್ಚೆ ನಡೆದಿದೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: CM Siddaramaiah: ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಸಿಎಂ ಸಿದ್ದರಾಮಯ್ಯ