ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mahantesh Bilagi: ಆಕ್ಸಿಡೆಂಟ್‌ನಲ್ಲಿ ಮೃತರಾದ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಪುತ್ರಿಗೆ ನೌಕರಿ, ಯಾವ ಹುದ್ದೆ?

ನಿನ್ನೆ ನಡೆದ ಕರ್ನಾಟಕ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಅನುಕಂಪದ ಹುದ್ದೆ ನೀಡುವ ಬಗ್ಗೆ ಚರ್ಚೆಯಾಗಿದ್ದು, ಅಂತಿಮವಾಗಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ಅನುಕಂಪದ ಆಧಾರದ ಮೇಲೆ ಗ್ರೂಪ್ ಸಿ ಹುದ್ದೆ ನೀಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. 2025ರ ನವೆಂಬರ್ 25ರಂದು ಜೇವರ್ಗಿ ಸಮೀಪ ಬೀಳಗಿ ಅಪಘಾತದಲ್ಲಿ ಮೃತರಾಗಿದ್ದರು.

ಮಹಾಂತೇಶ ಬೀಳಗಿ

ಬೆಂಗಳೂರು, ಜ.03: ರಸ್ತೆ ಅಪಘಾತದಲ್ಲಿ (Road Accident) ಮೃತಪಟ್ಟಿದ್ದ ಕರ್ನಾಟಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ (Mahantesh Bilagi) ಅವರ ಪುತ್ರಿಗೆ ಅನುಕಂಪದ ಆಧಾರದ ಮೇಲೆ ಸರ್ಕಾರಿ ನೌಕರಿ ನೀಡಲು ಸಚಿವ ಸಂಪುಟ (Karnataka Cabinet) ಒಪ್ಪಿಗೆ ಸೂಚಿಸಿದೆ. ನಿನ್ನೆ (ಜನವರಿ 02) ಸಿಎಂ ಸಿದ್ದರಾಮಯ್ಯ (CM Siddaramaiah) ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಅನುಕಂಪದ ಹುದ್ದೆ ನೀಡುವ ಬಗ್ಗೆ ಚರ್ಚೆಯಾಗಿದ್ದು, ಅಂತಿಮವಾಗಿ ಮಹಾಂತೇಶ್ ಬೀಳಗಿ ಅವರ ಪುತ್ರಿ ಚೈತನ್ಯ ಅವರಿಗೆ ಅನುಕಂಪದ ಆಧಾರದ ಮೇಲೆ ಗ್ರೂಪ್ ಸಿ ಹುದ್ದೆ ನೀಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಪ್ರೀತಿಯ ಮಾತು, ಪ್ರಾಮಾಣಿಕ ಕೆಲಸಗಳಿಂದ ಕರ್ನಾಟಕ ತುಂಬ ಗುರುತಿಸಿಕೊಂಡಿದ್ದ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ, ವಿದ್ಯಾರ್ಥಿಗಳು ಸಿಕ್ಕರೆ ಉತ್ಸಾಹ ತುಂಬಿಸುವ ಮಾತುಗಳನ್ನು ಆಡುತ್ತಿದ್ದರು. ಸ್ವತಃ ಬಡತನದ ಬೇಗೆಯಲ್ಲಿ ಬೆಂದು, ಅಪಾರ ಅನುಭವಗಳನ್ನು ಬೆಳೆಸಿಕೊಂಡು ಉನ್ನತ ಸ್ಥಾನಕ್ಕೆ ಏರಿದ್ದ ಅಪರೂಪದ ವ್ಯಕ್ತಿ ಮಹಾಂತೇಶ್‌. ಈ ಜನಸ್ನೇಹಿ ಅಧಿಕಾರಿ ಇತ್ತೀಚೆಗೆ ಕಲಬುರಗಿ ಸಮೀಪ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು.

2025ರ ನವೆಂಬರ್ 25ರಂದು ಜೇವರ್ಗಿ ಸಮೀಪ ಮಹಾಂತೇಶ್ ಬೀಳಗಿ ಸೇರಿ ನಾಲ್ವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ನಿಯಂತ್ರ ತಪ್ಪಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿತ್ತು. ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಲೆ ಈ ದುರ್ಘಟನೆ ಸಂಭವಿಸಿತ್ತು. ಈ ಘಟನೆಯಲ್ಲಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್ ಬೀಳಗಿ ಅವರು ಚಿಕಿತ್ಸೆ ಫಲಕಾರಿಯಾಗದೇ ಕಲಬುರಗಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

Mahantesh Bilagi: ಬಡತನ, ಕಿರಾಣಿ ಅಂಗಡಿಯಲ್ಲಿ ಕೆಲಸ, ಲಂಚ ಮುಟ್ಟದ ಶಪಥ: ಹೀಗಿತ್ತು ಮಹಾಂತೇಶ ಬೀಳಗಿ ಬದುಕು

ಮಹಾಂತೇಶ್ ಬೀಳಗಿ ಸಂಬಂಧಿ ಬಸವರಾಜ್ ಕಮರಟಗಿ ಎಂಬವರು ದೂರು ದಾಖಲಿಸಿದ್ದು, ಈ ದೂರಿನ ಅನ್ವಯ ಜೇವರ್ಗಿ ಠಾಣೆಯ ಪೊಲೀಸರು ಚಾಲಕ ಆರೋಕಿಯಾ ಆಂಥೋನಿ ರಾಜ ವಿರುದ್ದ 281 , 125(A)125(B)106 ಬಿಎನ್‌ಎಸ್‌ ಅಡಿ ಎಫ್ಐಆರ್ ದಾಖಲಾಗಿದೆ. ಚಾಲಕನ ಅತಿವೇಗ ಅಜಾಗರೂಕತೆಯಿಂದ ಅಪಘಾತ ಸಂಭವಿಸಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖವಾಗಿದೆ. ರಸ್ತೆ ಬದಿಯ ಬ್ರಿಡ್ಜ್ ಗೆ ಕಾರು ಡಿಕ್ಕಿಯಾಗಿ ನಾಲ್ಕೈದು ಬಾರಿ ಕಾರ್ ಪಲ್ಟಿಯಾಗಿದೆ. ಕಾರ್ ಪಲ್ಟಿಯಾದ ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿದ್ರೆ, ಆಸ್ಪತ್ರೆಯಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ ಬೀಳಗಿ ಸಾವನ್ನಪ್ಪಿದ್ದರು. ಕಾರ್ ಚಾಲಕ ಆಂಥೋನಿ ರಾಜ್‌ಗೆ ಸಹ ಗಂಭೀರ ಗಾಯಗಳಾಗಿದ್ದವು.

Mahantesh Bilagi: ಪ್ರಾಮಾಣಿಕ ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ಬದುಕಿನ ಹೃದಯಸ್ಪರ್ಶಿ ಕತೆ

ಹರೀಶ್‌ ಕೇರ

View all posts by this author