ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Auto-rickshaw fares: ಆಟೋ ಚಾಲಕರು ನಿಗದಿಗಿಂತ ಹೆಚ್ಚು ಹಣ ವಸೂಲಿ ಮಾಡಿದ್ರೆ ಬೀಳುತ್ತೆ ಕೇಸ್‌; ರಾಜ್ಯ ಸರ್ಕಾರ ಎಚ್ಚರಿಕೆ

Auto ride: ಪ್ರಯಾಣಿಕರಿಂದ ನಿಗದಿಕ್ಕಿಂತ ದರಕ್ಕಿಂತ ಹೆಚ್ಚಿನ ದರ ಬೇಡಿಕೆ, ಹೆಚ್ಚಿನ ದರ ನೀಡದಿದ್ದಲ್ಲಿ ಪ್ರಯಾಣವನ್ನು ರದ್ದುಗೊಳಿಸುವುದು ಹಾಗೂ ಅತಿ ಹೆಚ್ಚಿನ ದರ ವಸೂಲು ಮಾಡುತ್ತಿರುವ ಪ್ರಕರಣಗಳ ಬಗ್ಗೆ ದೂರು ಬಂದಲ್ಲಿ ತ್ವರಿತಗತಿಯಲ್ಲಿ ಕ್ರಮಕೈಗೊಳ್ಳಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಆಟೋ ಚಾಲಕರು ನಿಗದಿಗಿಂತ ಹೆಚ್ಚು ಹಣ ವಸೂಲಿ ಮಾಡಿದ್ರೆ ಬೀಳುತ್ತೆ ಕೇಸ್‌!

Profile Prabhakara R Jun 29, 2025 7:10 PM

ಬೆಂಗಳೂರು: ನಗರದಲ್ಲಿ ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡುತ್ತಿರುವ ಆ್ಯಪ್ (APP) ಆಧಾರಿತ ಆಟೋಗಳಾಗಲಿ ಅಥವಾ ಇನ್ನಾವುದೇ ಮಾದರಿಯ ಆಟೋಗಳಾಗಲಿ (Auto-rickshaw fares) ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು. ಪ್ರಯಾಣಿಕರಿಂದ ನಿಗದಿಕ್ಕಿಂತ ದರಕ್ಕಿಂತ ಹೆಚ್ಚಿನ ದರ ಬೇಡಿಕೆ, ಹೆಚ್ಚಿನ ದರ ನೀಡದಿದ್ದಲ್ಲಿ ಪ್ರಯಾಣವನ್ನು ರದ್ದುಗೊಳಿಸುವುದು ಹಾಗೂ ಅತಿ ಹೆಚ್ಚಿನ ದರ ವಸೂಲು ಮಾಡುತ್ತಿರುವ ಪ್ರಕರಣಗಳ ಬಗ್ಗೆ ದೂರು ಬಂದಲ್ಲಿ ತ್ವರಿತಗತಿಯಲ್ಲಿ ಕ್ರಮಕೈಗೊಂಡು ಅಂತಹ ಆಟೋಗಳ ಪರ್ಮಿಟ್ ರದ್ದು ಮಾಡುವುದರ ಜತೆಗೆ ಪ್ರಕರಣ ದಾಖಲಿಸಬೇಕು ಅಧಿಕಾರಿಗಳಿಗೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಆಟೋ ಚಾಲಕರು ಹೆಚ್ಚು ದರ ವಸೂಲಿ ಮಾಡುತ್ತಿರುವ ಬಗ್ಗೆ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ಸಚಿವರು ಕ್ರಮಕ್ಕೆ ಸೂಚಿಸಿದ್ದಾರೆ. ಜೂನ್ 18 ರಂದು ರ‍್ಯಾಪಿಡೋ ಆಟೋ ಆ್ಯಪ್ ಪ್ರತಿ ಕಿ.ಮೀ 100.89 ರೂ., ಅದೇ ಆಟೋ ಓಲಾ ಆ್ಯಪ್ ಅವರು 4 ಕಿ.ಮೀ ದೂರದ ಪ್ರಯಾಣಕ್ಕೆ ರೂ. 184.19 ತೆಗೆದುಕೊಂಡಿದ್ದಾರೆ. ಈ ರೀತಿಯ ಹಗಲು ದರೋಡೆ ಅಕ್ಷಮ್ಯ. ಹೀಗಾಗಿ ಕಠಿಣ ಕ್ರಮ ಜರುಗಿಸಬೇಕು.

Auto ride  (1)

ಈಗಾಗಲೇ ಬಾಡಿಗೆಗೆ ನಿರಾಕರಣೆ, ಅಧಿಕ ಬಾಡಿಗೆಗೆ ಒತ್ತಾಯಿಸಿದ ಆಟೋ ಚಾಲಕರ ವಿರುದ್ಧ ಪ್ರಕರಣಗಳನ್ನು ಸಾರಿಗೆ ಇಲಾಖೆಯು ದಾಖಲಿಸುತ್ತಿದ್ದರೂ, ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಆದ್ದರಿಂದ ನಿಗದಿತ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿರುವ ದೂರುಗಳಿಗೆ ಸಂಬಂಧಪಟ್ಟಂತೆ ಕೂಡಲೇ ಪರಿಣಾಮಕಾರಿಯಾದ ಕಾರ್ಯ ಯೋಜನೆ ರೂಪಿಸಿ ತಪ್ಪಿತಸ್ಥ ಆಟೋ ಚಾಲಕರ, ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರಿಗೆ ಸೂಚಿಸಿದೆ.

ಹಳ್ಳಿಗಳಲ್ಲೂ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯ; ಬೆಸ್ಕಾಂ ಆದೇಶ

_Smart Meters

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಜುಲೈ 1ರಿಂದ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಸ್ಮಾರ್ಟ್ ಮೀಟ‌ರ್ (Smart Meters) ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗದ (ಕೆಇಆರ್‌ಸಿ) ಮಾರ್ಗಸೂಚಿ ಅನ್ವಯ ಬೆಸ್ಕಾಂ ಆದೇಶ ಹೊರಡಿಸಿದೆ. 2025ರ ಫೆ.15ರಿಂದ ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ಸೇರಿ ಎಲ್ಲಾ ನಗರ ಪ್ರದೇಶಗಳಲ್ಲಿ ಸ್ಮಾರ್ಟ್ ಮೀಟ‌ರ್ ಅಳವಡಿಕೆ ಆರಂಭಗೊಂಡಿದೆ. ಇದೀಗ ಗ್ರಾಮೀಣ ಪ್ರದೇಶಗಳಿಗೂ ಯೋಜನೆ ವಿಸ್ತರಿಸಲಾಗಿದೆ.

ಹೊಸ ಹಾಗೂ ತಾತ್ಕಾಲಿಕ ವಿದ್ಯುತ್‌ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸಿ, ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಸ್ಮಾರ್ಟ್ ಮೀಟರ್‌ಗಳನ್ನು ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬಹುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಸ್ಮಾರ್ಟ್ ಮೀಟ‌ರ್ ಅಳವಡಿಕೆ ಕುರಿತು 2024ರ ಮಾರ್ಚ್ 6ರಂದು ಕೆಇಆರ್‌ಸಿ ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ, ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ಬದಲಾವಣೆ ಕಾರ್ಯ ಕೈಗೊಳ್ಳಲಾಗಿದೆ.

ಸ್ಮಾರ್ಟ್ ಮೀಟ‌ರ್ ವೈಶಿಷ್ಟ್ಯಗಳೇನು?

  • ಸ್ಮಾರ್ಟ್ ಮೀಟರ್‌ಗಳು ಜಿಪಿಆರ್‌ಎಸ್/ ಆರ್‌ಎಫ್ ಆಧಾರಿತ ಸಂವಹನ ಡೇಟಾ ಸಂಗ್ರಹಣೆಗೆ ಸರ್ವರ್ ಹಾಗೂ ಕ್ಲೌಡ್ ಸಂಪರ್ಕ ಹೊಂದಿರುತ್ತವೆ.
  • ಅಡ್ವಾನ್ಸ್ ಮೀಟರಿಂಗ್ ಇನ್ಫ್ರಾಸ್ಟ್ರಕ್ಟರ್ (ಎಎಂಐ) ತಂತ್ರಜ್ಞಾನದ ಸ್ಮಾರ್ಟ್ ಮೀಟರ್‌ಗಳು, ವಿದ್ಯುತ್ ಬಳಕೆ ಮಾಹಿತಿಯನ್ನು ಸಂಗ್ರಹಿಸುವ ಮೂಲಕ ಗ್ರಾಹಕರು ಹಾಗೂ ಬೆಸ್ಕಾಂ ನಡುವೆ ನೇರ ಸಂಪರ್ಕ ಕಲ್ಪಿಸಲಿವೆ.
  • ಮೊಬೈಲ್ ಅಪ್ಲಿಕೇಷನ್ ಮೂಲಕ ನೈಜ ಸಮಯದ ವಿದ್ಯುತ್ ಬಳಕೆ, ವೊಲ್ವೇಜ್, ಪವರ್ ಫ್ಯಾಕ್ಟರ್ ಮಾಹಿತಿ ಹಾಗೂ ರೀಚಾರ್ಜ್ ಸೌಲಭ್ಯ ಪಡೆಯಬಹುದಾಗಿದೆ.
  • ಮುಂಚಿತವಾಗಿ ಹಣ ಪಾವತಿಸಿ ತಮ್ಮ ಆಯ್ಕೆಯ ದಿನಗಳ ಅವಧಿಗೆ ರೀಜಾರ್ಜ್ ಮಾಡಿಕೊಳ್ಳಬಹುದು.
  • ಒಂದು ವೇಳೆ ವಿದ್ಯುತ್ ಕಡಿತಗೊಂಡರೆ ಗ್ರಾಹಕರು ಬಿಲ್ ಪಾವತಿಸಿದ ತಕ್ಷಣ ವಿದ್ಯುತ್ ಸಂಪರ್ಕ ಪಡೆದುಕೊಳ್ಳಬಹುದು.

ಈ ಎಲ್ಲಾ ಕಾರಣಗಳಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Police Recruitment: ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಶೇ.15.64 ಹುದ್ದೆಗಳು ಶೀಘ್ರದಲ್ಲೇ ಭರ್ತಿ: ಸಿಎಂ ಸಿದ್ದರಾಮಯ್ಯ