DK Shivakumar: ಡಿಸಿಎಂ ಡಿಕೆ ಶಿವಕುಮಾರ್‌ಗೆ ಶಾಕ್, ಅಕ್ರಮ ಆಸ್ತಿ ಪ್ರಕರಣ ಸುಪ್ರೀಂ ಮುಂದೆ ವಿಚಾರಣೆಗೆ
supreme court: ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವರು ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ನೇತೃತ್ವದ ಪೀಠವು ಇವುಗಳ ವಿಚಾರಣೆ ನಡೆಸಿತು.

-

ನವದೆಹಲಿ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DCM DK Shivakumar) ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (CBI) ತನಿಖೆ ವಾಪಸ್ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂ ಕೋರ್ಟ್ (Supreme court) ಸೋಮವಾರ ತಿಳಿಸಿದೆ.
ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವರು ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಕೆ.ವಿನೋದ್ ಚಂದ್ರನ್ ಅವರ ನೇತೃತ್ವದ ಪೀಠವು ಇಂದು ಇವುಗಳ ವಿಚಾರಣೆ ನಡೆಸಿತು.
ಇದೇ ಪ್ರಕರಣವನ್ನು ಈ ಹಿಂದೆ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ನೇತೃತ್ವದ ಪೀಠವು ವಿಚಾರಣೆ ನಡೆಸಿತ್ತು. ಈಗ ಅವರ ಪೀಠಕ್ಕೆ ವಿಚಾರಣೆ ನಡೆಸುವಂತೆ ಅರ್ಜಿಗಳನ್ನು ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್ ತಿಳಿಸಿತು. ಈ ವೇಳೆ ಡಿ.ಕೆ.ಶಿವಕುಮಾರ್ ಅವರ ಪರ ಹಿರಿಯ ವಕೀಲರಾದ ಅಭಿಷೇಕ್ ಎಂ. ಸಿಂಘ್ವಿ ಅವರು, ರಾಜಕೀಯ ವಿಷಯಗಳು ಕೋರ್ಟಿನ ಆಚೆಗೆ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಎಂದು ಸಿಜೆಐ ಈ ಹಿಂದೆ ಹೇಳಿದ್ದರು ಎಂದು ಪೀಠದ ಗಮನಕ್ಕೆ ತಂದರು.
ಡಿ.ಕೆ.ಶಿವಕುಮಾರ್ ಅವರು ಆದಾಯಕ್ಕಿಂತ ಅಧಿಕ ಅಕ್ರಮ ಆಸ್ತಿ ಗಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಹಿಂದಿನ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 2019ರ ಸೆಪ್ಟೆಂಬರ್ 25 ರಂದು ಸಿಬಿಐ ತನಿಖೆಗೆ ವಹಿಸಿತ್ತು. ಕೇಂದ್ರ ತನಿಖಾ ಸಂಸ್ಥೆಯು ಶಿವಕುಮಾರ್ ವಿರುದ್ಧ ಅಕ್ಟೋಬರ್ 3, 2020 ರಂದು ಪ್ರಕರಣ ದಾಖಲಿಸಿ ವಿಚಾರಣೆ ನಡೆಸುತ್ತಿದೆ.
ಇದನ್ನೂ ಓದಿ: Caste Census: ಇದು ಜಾತಿಗಣತಿಯಲ್ಲ, ಸಾಮಾಜಿಕ ನ್ಯಾಯ ಒದಗಿಸುವ ಸಮೀಕ್ಷೆ: ಡಿಸಿಎಂ ಡಿಕೆಶಿ