Weather forecast: ಇಂದಿನ ಹವಾಮಾನ; ಕರಾವಳಿ ಜಿಲ್ಲೆಗಳಿಗೆ ಬಿಸಿ ಗಾಳಿ ಎಚ್ಚರಿಕೆ!
Weather forecast: ಫೆ. 26ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಮಾರ್ಚ್ 3ರ ವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬೆಂಗಳೂರು: ರಾಜ್ಯಾದ್ಯಂತ ಒಣೆ ಹವೆಯ ವಾತಾವರಣ ( Karnataka Weather) ಮುಂದುವರಿದಿದ್ದು, ಮುಂದಿನ 6 ದಿನಗಳ ಕಾಲ ಇದೇ ರೀತಿಯ ಸ್ಥಿತಿ ಇರಲಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಮುಖ್ಯವಾಗಿ ಶುಭ್ರ ಆಕಾಶವಿರಲಿದ್ದು, ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಮಂಜು ಕವಿಯುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 33°C ಮತ್ತು 18°C ಇರಲಿದೆ. ಇನ್ನು ಮುಂದಿನ 3 ದಿನಗಳವರೆಗೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ (Heat wave) ಬೀಸುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಇನ್ನು ರಾಜ್ಯದ ಸಮತಟ್ಟಾದ ಪ್ರದೇಶಗಳಲ್ಲಿ ಸೋಮವಾರ ಚಾಮರಾಜನಗರದಲ್ಲಿ ಅತೀ ಕಡಿಮೆ ಉಷ್ಣಾಂಶ 13.5 ಡಿ.ಸೆ. ದಾಖಲಾಗಿದ್ದು, ಹೊನ್ನಾವರದಲ್ಲಿ ಅತೀ ಹೆಚ್ಚು ಉಷ್ಣಾಂಶ 38.5 ಡಿ.ಸೆ ದಾಖಲಾಗಿದೆ. ಫೆ. 26ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಮಾರ್ಚ್ 3ರ ವರೆಗೆ ಇದೇ ರೀತಿಯ ಹವಾಮಾನ ಮುಂದುವರಿಯಲಿದೆ. ಮುಂದಿನ 5 ದಿನಗಳವರೆಗೆ ಕರ್ನಾಟಕದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಗಳಿಲ್ಲ.
#ರಣಬಿಸಿಲು #ಶಾಖತರಂಗ #ಬಿಸಿಗಾಳಿ #ಸುರಕ್ಷಿತವಾಗಿರಿ #BeatTheHeat #HeatWave #StaySafe #StayHydrated #Precautions #StayIndoorsStayCool @KarnatakaVarthe #KSNDMC pic.twitter.com/vsO5pUj8w0
— Karnataka State Natural Disaster Monitoring Centre (@KarnatakaSNDMC) February 25, 2025
ಬಿಸಿ ಗಾಳಿಯಿಂದ ರಕ್ಷಣೆಗೆ ಮುನ್ನೆಚ್ಚರಿಕಾ ಕ್ರಮ ಪಾಲಿಸಿ
ಹೆಚ್ಚಿನ ತಾಪಮಾನದಿಂದ ದೀರ್ಘಕಾಲದವರೆಗೆ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವ ಅಥವಾ ಬಿಸಿಲಲ್ಲಿ ಕೆಲಸ ಮಾಡುವ ಜನರಿಗೆ ಆರೋಗ್ಯ ಸಮಸ್ಯೆಗಳು ಕಾಡುವ ಸಾಧ್ಯತೆ ಇದೆ. ಮಕ್ಕಳು, ವೃದ್ಧರು ಮತ್ತು ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ಜನರು ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಬಿಸಿಲಿನಿಂದ ರಕ್ಷಣೆ ಪಡೆಯಲು ಈ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಹವಾಮಾನ ಇಲಾಖೆ ಸಲಹೆ ನೀಡಿದೆ.
(ಎ) ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸಿ, ವಿಶೇಷವಾಗಿ ಮಧ್ಯಾಹ್ನ 12 ರಿಂದ 3ರವರೆಗೆ
(ಬಿ) ಸಾಕಷ್ಟು ನೀರು ಕುಡಿಯಿರಿ ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ, ಬಾಯಾರಿಕೆ ಇಲ್ಲದಿದ್ದರೂ ಸಹ
(ಸಿ) ಹಗುರವಾದ, ತಿಳಿ ಬಣ್ಣದ, ಸಡಿಲವಾದ, ಹತ್ತಿ ಬಟ್ಟೆಗಳನ್ನು ಧರಿಸಿ.
(ಡಿ) ನಿಮ್ಮ ತಲೆಯನ್ನು ಮುಚ್ಚಿಕೊಳ್ಳಿ: ಬಟ್ಟೆ, ಟೋಪಿ ಅಥವಾ ಛತ್ರಿ ಬಳಸಿ.
(ಇ) ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ನೀಡಿ.
(ಎಫ್) ದೇಹದಲ್ಲಿ ನಿರ್ಜಲೀಕರಣ ತಪ್ಪಿಸಲು ORS, ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ನಿಂಬೆ ನೀರು, ಮಜ್ಜಿಗೆ ಇತ್ಯಾದಿಗಳನ್ನು ಬಳಸಿ.
#LightAndCool #HeatwaveAttire #StayCoolDressLight #BeatTheHeatWearLight #StaySafeStayCool #HeatwavePrecautions pic.twitter.com/18hs5pqrTn
— Karnataka State Natural Disaster Monitoring Centre (@KarnatakaSNDMC) February 25, 2025