Karnataka Budget 2025: ಸಿಎಂ ಸಿದ್ದರಾಮಯ್ಯ ಮಂಡಿಸಿದ 16ನೇ ಬಜೆಟ್‌ನ ಮುಖ್ಯಾಂಶಗಳು ಹೀಗಿವೆ
ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿ ರೂ.ಗಳು. ವಿತ್ತೀಯ ಕೊರತೆ 90,428 ಕೋಟಿ ಟಿ ರೂ.ಗಳು. ಇದುಜಿಎಸ್‌ಡಿಪಿಯ ಶೇ.2.95ರಷ್ಟು ಇದೆ. ಗ್ಯಾರಂಟಿ ಯೋಜನೆಗಳಿಗಾಗಿ 51,034 ಕೋಟಿ ರೂಪಾಯಿ ಮೀಸಲು ಇಡಲಾಗಿದೆ. ಮೂರುಕಾಲು ಗಂಟೆಗಳ ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಹಲವಾರು ಯೋಜನೆಗಳನ್ನು ಪ್ರಸ್ತಾಪಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸುದೀರ್ಘ ಮೂರುಕಾಲು ಗಂಟೆಗಳ ಕಾಲ 2025-26ನೇ ಸಾಲಿನ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ಮಂಡಿಸಿದರು. ನಿಂತುಕೊಂಡು ಭಾಷಣ ಆರಂಭಿಸಿದ ಅವರು ನಂತರ ಕಾಲುನೋವಿನ ಕಾರಣದಿಂದ ಕುಳಿತುಕೊಂಡೇ ಬಜೆಟ್ ಮಂಡಿಸಿದರು. ನಾಡಿನ ಹಲವಾರು ಕವಿಗಳ ಸಾಲುಗಳ ಉಲ್ಲೇಖಗಳು ಹಾಗೂ ಕೇಂದ್ರ ಸರಕಾರದ ತೆರಿಗೆ ನೀತಿಯ ಕುರಿತ ಟೀಕೆಯೊಂದಿಗೆ ಕೂಡಿದ್ದ ಈ ಬಜೆಟ್‌ನ ಮುಖ್ಯಾಂಶಗಳು ಹೀಗಿವೆ:
- ಈ ಬಾರಿಯ ಬಜೆಟ್ ಗಾತ್ರ 4,09,549 ಕೋಟಿ ರೂ.ಗಳು. ವಿತ್ತೀಯ ಕೊರತೆ 90,428 ಕೋಟಿ ಟಿ ರೂ.ಗಳು. ಇದುಜಿಎಸ್‌ಡಿಪಿಯ ಶೇ.2.95ರಷ್ಟು.
- ಗ್ಯಾರಂಟಿ ಯೋಜನೆಗಳಿಗಾಗಿ 51,034 ಕೋಟಿ ರೂಪಾಯಿ ಮೀಸಲು ಇಡಲಾಗಿದೆ.
- ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ‘ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ’ ಎಂಬ ಹೊಸ ಯೋಜನೆ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ ರೂಪಾಯಿ ಅನುದಾನ.
- ಬೆಂಗಳೂರು ಮಹಾನಗರದ ಮೂಲಸೌಕರ್ಯ, ಸೇವಾಪೂರೈಕೆ ಹಾಗೂ ಸಂಚಾರ ಸುವ್ಯವಸ್ಥೆಗಳಿಗಾಗಿ ‘ಬ್ರ್ಯಾಂಡ್ ಬೆಂಗಳೂರು’ ಎಂಬ ಪರಿಕಲ್ಪನೆಯಡಿ ಮಹತ್ವಾಕಾಂಕ್ಷಿ ಯೋಜನೆಗಳ ಜಾರಿ. 3000 ಕೋಟಿ ರೂ.ಗಳ ಅನುದಾನ 7000 ಕೋಟಿ ರೂ.ಗೆ ಹೆಚ್ಚಳ.
- ರೈತ ಕಲ್ಯಾಣದ ಉದ್ದೇಶಿತ ಯೋಜನೆಗಳಿಗೆ ವಿವಿಧ ಇಲಾಖೆಗಳಿಗೆ ಒಟ್ಟು 51,339 ಕೋಟಿ ರೂಪಾಯಿ ಅನುದಾನ.
- 2030ರ ವೇಳೆಗೆ ಉತ್ಪಾದನಾ ವಲಯದಲ್ಲಿ ಶೇ.12ರಷ್ಟು ವಾರ್ಷಿಕ ಬೆಳವಣಿಗೆಯನ್ನು ಸಾಧಿಸುವುದರೊಂದಿಗೆ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ. ಅತಿಹೆಚ್ಚು ಉದ್ಯೋಗ ಸೃಷ್ಟಿಯಾಗುವ ಎಂ.ಎಸ್.ಎಂ.ಇ, ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ ನೀತಿ.
- ರಾಜ್ಯಕ್ಕೆ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಒಟ್ಟು 13,692 ಕೋಟಿ ಆರ್ಥಿಕ ನೆರವು ಮತ್ತು ಸಹಾಯಧನ
- ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ‘ಬಿ’ ಮತ್ತು ‘ಸಿ’ ವೃಂದಗಳಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ
- 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ
- 1,080 ಕೋಟಿ ವೆಚ್ಚದಲ್ಲಿ ವೃಷಭಾವತಿ ವ್ಯಾಲಿ ಯೋಜನೆ
- ಎತ್ತಿನಹೊಳೆ ಯೋಜನೆಗೆ 553 ಕೋಟಿ ರೂಪಾಯಿ ಮೀಸಲು
- ಎಸ್, ಎಸ್‌ಟಿ ವಸತಿ ನಿಲಯದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ವೆಚ್ಚವಾಗಿ ಪ್ರತಿ ತಿಂಗಳು 3,500 ರೂ.
- ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂಪಾಯಿ ಅನುದಾನ.
- ಸಾಮಾಜಿಕ, ಚಾರಿತ್ರಿಕ ಹಾಗೂ ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಕನ್ನಡ ಚಲನಚಿತ್ರಗಳನ್ನು ಡಿಜಿಟಲ್ ಹಾಗೂ ನಾನ್‌ಡಿಜಿಟಲ್ ಮಾದರಿಯಲ್ಲಿ ಸಂರಕ್ಷಿಸಲು 3 ಕೋಟಿ ರೂ. ವೆಚ್ಚದಲ್ಲಿ ಚಲನಚಿತ್ರ ಭಂಡಾರ ಸ್ಥಾಪನೆ.
- ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ. ಕೈಗಾರಿಕಾ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1, 2ಎ ಮತ್ತು 2ಬಿ (ಮುಸ್ಲಿಂ) ಗೆ ಶೇಕಡಾ 20 ಮೀಸಲಾತಿ.
- ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ.
- ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು.
- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ.
- ಅತ್ಯಂತ ಹಿಂದುಳಿದ 46 ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.
- ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ. ಮೀಸಲು.
- IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ.
- ಧಾರ್ಮಿಕ ದತ್ತಿ ಇಲಾಖೆ ಅರ್ಚಕರಿಗೆ ತಸ್ತೀಕ್ ಮೊತ್ತದ ಏರಿಕೆ ಮಾಡಲು ನಿರ್ಧರಿಸಲಾಗಿದ್ದು, 60 ಸಾವಿರ ರೂ.ನಿಂದ 72 ಸಾವಿರಕ್ಕೆ ತಸ್ತೀಕ್ ಮೊತ್ತ ಏರಿಕೆ.
- ಜೈನ, ಬೌದ್ಧ ಹಾಗೂ ಸಿಖ್ಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ., ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲು
ಇದನ್ನೂ ಓದಿ: Karnataka Budget 2025: ಸದನದಲ್ಲಿ ವಚನ, ಕವನಗಳ ಕಲರವ...! ಸಿದ್ದು ಬಜೆಟ್ ವಿಶೇಷತೆಯೇ ಇದು
- ನಕ್ಸಲ್ ಪೀಡಿತ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಕ್ಸಲ್ ಪ್ಯಾಕೇಜ್, 10 ಕೋಟಿ ರೂ. ಅನುದಾನ ಘೋಷಣೆ.
- ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1,000 ರೂ., ಸಹಾಯಕಿಯರಿಗೆ 750 ರೂ. ಗೌರವಧನ ಹೆಚ್ಚಳ
- ಕನ್ನಡ ಸಿನಿಮಾಗಳಿಗೆ OTT ವೇದಿಕೆ ಸೃಷ್ಟಿಗೆ ನಿರ್ಧಾರ, ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್ ದರಕ್ಕೆ 200 ರೂ.ಗೆ ಕ್ಯಾಪ್.
- ಬೆಂಗಳೂರಿನಲ್ಲಿ ಉತ್ತರ-ದಕ್ಷಿಣ ಮತ್ತು ಪೂರ್ವ-ಪಶ್ಚಿಮ ಸುರಂಗ ಮಾರ್ಗದ ಕಾರಿಡಾರ್‌ಗಳಿಗೆ 19,000 ಕೋಟಿ ರೂ. ಮೀಸಲು. ಹೊರ ವರ್ತುಲ ರಸ್ತೆಗೆ ಬೆಂಗಳೂರು ಬಿಸ್ನೆಸ್ ಕಾರಿಡಾರ್ ಎಂದು ಮರುನಾಮಕರಣಗೊಳಿಸಿ 27,000 ಕೋಟಿ ರೂ. ಯೋಜನೆ.