ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Census: ಕರ್ನಾಟಕದಲ್ಲಿ ಇಂದಿನಿಂದ ಜನಗಣತಿ ಆರಂಭ, ಸಕ್ರಿಯವಾಗಿ ಪಾಲ್ಗೊಳ್ಳಲು ಗಣ್ಯರ ಕರೆ

ದೇಶಾದ್ಯಂತ ಮಹತ್ವದ ಜನಗಣತಿ ಇಂದಿನಿಂದ ಆರಂಭವಾಗಲಿದೆ. ಏಪ್ರಿಲ್ 1 ರಿಂದ ಏಪ್ರಿಲ್ 15ರವರೆಗೆ ನಾಗರಿಕರು ಹೊಸದಾಗಿ ಪರಿಚಯಿಸಲಾದ ‘ಸ್ವಯಂ ಗಣತಿ ಪೋರ್ಟಲ್’ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ವಿವರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಏಪ್ರಿಲ್ 16 ರಿಂದ ಮೇ 15ರವರೆಗೆ ಎರಡನೇ ಹಂತ ನಡೆಯಲಿದ್ದು, ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಪಟ್ಟಿ ತಯಾರಿಕೆ ಮತ್ತು ವಸತಿ ಗಣತಿ ನಡೆಸಲಿದ್ದಾರೆ

ಕರ್ನಾಟಕದಲ್ಲಿ ಇಂದಿನಿಂದ ಜನಗಣತಿ ಆರಂಭ, ಪಾಲ್ಗೊಳ್ಳಲು ಗಣ್ಯರ ಕರೆ

ಪ್ರಾತಿನಿಧಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Apr 1, 2026 8:44 AM

ಬೆಂಗಳೂರು, ಏ.1: ದೇಶದ ಬೃಹತ್ ಅಭಿಯಾನವಾದ 2027ರ ಜನಗಣತಿ ಪ್ರಕ್ರಿಯೆ (India Census) ಇಂದಿನಿಂದ (ಏಪ್ರಿಲ್ 1, 2026) ಆರಂಭವಾಗಿದ್ದು, ಕರ್ನಾಟಕದಾದ್ಯಂತ (Karnataka) ಮೊದಲ ಹಂತದ ಚಟುವಟಿಕೆಗಳಿಗೆ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನತೆ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Governor Thawar Chad Gehlot), ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DCM DK Shivakumar) ಮನವಿ ಮಾಡಿದ್ದಾರೆ.

ಆನ್‌ಲೈನ್ ಸ್ವಯಂ ಗಣತಿ

ಏಪ್ರಿಲ್ 1 ರಿಂದ ಏಪ್ರಿಲ್ 15ರವರೆಗೆ ನಾಗರಿಕರು ಹೊಸದಾಗಿ ಪರಿಚಯಿಸಲಾದ ‘ಸ್ವಯಂ ಗಣತಿ ಪೋರ್ಟಲ್’ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ವಿವರಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಸಂಖ್ಯೆ ಮತ್ತು ಒಟಿಪಿ (OTP) ಬಳಸಿ ಈ ಪ್ರಕ್ರಿಯೆಯನ್ನು ಸುಲಭವಾಗಿ ಪೂರ್ಣಗೊಳಿಸಬಹುದು.

ಎರಡನೇ ಹಂತ

ಏಪ್ರಿಲ್ 16 ರಿಂದ ಮೇ 15ರವರೆಗೆ ಗಣತಿದಾರರು ಮನೆ-ಮನೆಗೆ ಭೇಟಿ ನೀಡಿ ಪಟ್ಟಿ ತಯಾರಿಕೆ ಮತ್ತು ವಸತಿ ಗಣತಿ ನಡೆಸಲಿದ್ದಾರೆ. ವ್ಯಾಪ್ತಿ ಮೊದಲ ಹಂತದಲ್ಲಿ ಕರ್ನಾಟಕ ಸೇರಿದಂತೆ ದೆಹಲಿ, ಗೋವಾ, ಮಿಜೋರಾಂ, ಒಡಿಶಾ, ಸಿಕ್ಕಿಂ ರಾಜ್ಯಗಳು ಹಾಗೂ ಅಂಡಮಾನ್-ನಿಕೋಬಾರ್, ಲಕ್ಷದ್ವೀಪ ಕೇಂದ್ರಾಡಳಿತ ಪ್ರದೇಶಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಿದೆ.

ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಜನಗಣತಿ 2027ರ ಅಂಗವಾಗಿ ನಾವು ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದ್ದೇವೆ. 2026ರ ಏಪ್ರಿಲ್‌ 1 ರಿಂದ 15ರ ವರೆಗೆ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ (https://se.census.gov.in) ನಲ್ಲಿ ಭರ್ತಿ ಮಾಡಬಹುದು. ಮೊಬೈಲ್‌ ಫೋನ್‌ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು.

2026, ಏಪ್ರಿಲ್‌ 16ರಿಂದ ಮೇ 15ರ ವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ಈ ಗಣತಿಯಲ್ಲಿ ಯಾರೂ ಬಿಟ್ಟು ಹೋಗದಂತೆ ನಾವು ಖಚಿತಪಡಿಸುತ್ತೇವೆ. ಇದರಲ್ಲಿ ನಿಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೇಳಿದ್ದಾರೆ.



ಸಿಎಂ ಸಿದ್ದರಾಮಯ್ಯ

ಜನಗಣತಿ ನಮ್ಮ ರಾಜ್ಯ ಮತ್ತು ದೇಶದ ಭವಿಷ್ಯ ರೂಪಿಸುವ ಮಹತ್ವದ ಕಾರ್ಯ. ಇದು ದತ್ತಾಂಶ ಆಧಾರಿತ ನಿರ್ಧಾರಗಳಿಗೆ ಸಹಾಯ ಮಾಡುತ್ತದೆ. ಆರೋಗ್ಯ, ಶಿಕ್ಷಣ, ವಸತಿ ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಂಪನ್ಮೂಲದ ಸಮರ್ಪಕ ಹಂಚಿಕೆಗೆ ದಾರಿ ತೋರುತ್ತದೆ. ಜನಗಣತಿ 2027ರ ಅಂಗವಾಗಿ ನಾವು ಸ್ವಯಂ ಗಣತಿ ವ್ಯವಸ್ಥೆಯನ್ನು ಪರಿಚಯಿಸಿದ್ದೇವೆ.

2026ರ ಏಪ್ರಿಲ್‌ 1 ರಿಂದ 15ರ ವರೆಗೆ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ (https://se.census.gov.in) ನಲ್ಲಿ ಭರ್ತಿ ಮಾಡಬಹುದು. ಈ ಪ್ರಕ್ರಿಯೆ ಸರಳ ಮತ್ತು ಸುರಕ್ಷಿತವಾಗಿದೆ. ಮೊಬೈಲ್‌ ಫೋನ್‌ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು.

ಇದರಲ್ಲಿ ನಿಮ್ಮ ಭಾಗವಹಿಸುವಿಕೆ ಅತ್ಯಂತ ಮುಖ್ಯ. ಇದು ಕೇವಲ ಕರ್ತವ್ಯವಲ್ಲ, ಕರ್ನಾಟಕದ ಅಭಿವೃದ್ಧಿಗೆ ನಿಮ್ಮ ಕೊಡುಗೆ. ಇಂದು ನೀವು ನೀಡುವ ನಿಖರ ಮಾಹಿತಿ, ನಾಳೆಯ ಉತ್ತಮ ನೀತಿಗಳು, ಸೇವೆಗಳಿಗೆ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಲು ಆಧಾರವಾಗುತ್ತದೆ. 2026, ಏಪ್ರಿಲ್‌ 16ರಿಂದ ಮೇ 15ರ ವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.

ಈ ಗಣತಿಯಲ್ಲಿ ಯಾರೂ ಬಿಟ್ಟು ಹೋಗದಂತೆ ನಾವು ಖಚಿತಪಡಿಸುತ್ತೇವೆ. ಆದ್ದರಿಂದ ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ನಾವೆಲ್ಲರೂ ಕೈಜೋಡಿಸೋಣ ಎಂದು ಸಿಎಂ ಸಿದ್ದರಾಮಯ್ಯ ಸಂದೇಶ ನೀಡಿದ್ದಾರೆ.



ಡಿಸಿಎಂ ಡಿ.ಕೆ. ಶಿವಕುಮಾರ್

ಏಪ್ರಿಲ್‌ 1ರಿಂದ ರಾಷ್ಟ್ರೀಯ ಜನಗಣತಿ– 2027 ಪ್ರಕ್ರಿಯೆ ಆರಂಭವಾಗಲಿದ್ದು, ಮೊದಲ 15 ದಿನ ನಾಗರಿಕರಿಗೆ ವೆಬ್‌ ಪೋರ್ಟಲ್‌ನಲ್ಲಿ ‘ಸ್ವಯಂ–ಗಣತಿ’ಗೆ ಅವಕಾಶ ಕಲ್ಪಿಸಲಾಗಿದೆ. ಏಪ್ರಿಲ್‌ 1 ರಿಂದ 15ರ ವರೆಗೆ ಪ್ರತಿ ಕುಟುಂಬವು ತಮ್ಮ ಮಾಹಿತಿಯನ್ನು ವೆಬ್ ಪೋರ್ಟಲ್ (https://se.census.gov.in) ನಲ್ಲಿ ಭರ್ತಿ ಮಾಡಬಹುದು. ಮೊಬೈಲ್‌ ಫೋನ್‌ ಸಂಖ್ಯೆ ಮತ್ತು ಒಟಿಪಿ ಮೂಲಕ ಈ ಪ್ರಕ್ರಿಯೆ ಪೂರ್ಣಗೊಳಿಸಬಹುದು.

ಏಪ್ರಿಲ್‌ 16ರಿಂದ ಮೇ 15ರ ವರೆಗೆ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ. ನಿಗದಿತ ಅವಧಿಯಲ್ಲಿ ಸ್ವಯಂ ಗಣತಿಯನ್ನು ಪೂರ್ಣಗೊಳಿಸಿ ಜನಗಣತಿ 2027 ಅನ್ನು ಯಶಸ್ವಿಗೊಳಿಸಲು ತಾವೆಲ್ಲರೂ ನಮ್ಮೊಂದಿಗೆ ಕೈಜೋಡಿಸಬೇಕಾಗಿ ಮನವಿ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ.