ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Congress: ಭಾರತ- ಪಾಕ್‌ ಯುದ್ಧ: ಕಾಂಗ್ರೆಸ್‌ ಸಾಧನಾ ಸಮಾವೇಶ ಅನಿರ್ದಿಷ್ಟ ಮುಂದೂಡಿಕೆ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಾಂಗ್ರೆಸ್ ಸರಕಾರ (Karnataka Congress) ದೊಡ್ಡ ಕಾರ್ಯಕ್ರಮವನ್ನು ಯೋಜಿಸಿತ್ತು. ಅಲ್ಲಿ ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಿ ಫಲಾನುಭವಿಗಳಿಗೆ ಒಂದು ಲಕ್ಷ ಹಕ್ಕುಪತ್ರಗಳನ್ನು ನೀಡಲು ಯೋಜನೆ ಹಮ್ಮಿಕೊಂಡಿತ್ತು. ಇದೀಗ ಆ ಕಾರ್ಯಕ್ರಮವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಭಾರತ- ಪಾಕ್‌ ಯುದ್ಧ: ಕಾಂಗ್ರೆಸ್‌ ಸಾಧನಾ ಸಮಾವೇಶ ಅನಿರ್ದಿಷ್ಟ ಮುಂದೂಡಿಕೆ

ಸಿಎಂ ಸಿದ್ದರಾಮಯ್ಯ

ಹರೀಶ್‌ ಕೇರ ಹರೀಶ್‌ ಕೇರ May 10, 2025 9:24 AM

ಬೆಂಗಳೂರು: ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ (India- Pak War) ಪರಿಸ್ಥಿತಿ ಉಲ್ಬಣಗೊಳ್ಳುತ್ತಿರುವುದರಿಂದಾಗಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ (Karnataka Congress government) ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 20ರಂದು ಹೊಸಪೇಟೆಯಲ್ಲಿ (Hosapete) ನಡೆಸಲು ಉದ್ದೇಶಿಸಿದ್ದ ಕಾಂಗ್ರೆಸ್ ಸರ್ಕಾರದ ʼಸಾಧನಾ ಸಮಾವೇಶʼ ಕಾರ್ಯಕ್ರಮವನ್ನು ಅನಿರ್ದಿಷ್ಟವಾಗಿ ಮುಂದೂಡಲು ಸಚಿವ ಸಂಪುಟ ಶುಕ್ರವಾರ ನಿರ್ಧರಿಸಿದೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸರ್ಕಾರವು ದೊಡ್ಡ ಕಾರ್ಯಕ್ರಮವನ್ನು ಯೋಜಿಸಿತ್ತು. ಅಲ್ಲಿ ದಾಖಲೆರಹಿತ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಘೋಷಿಸಿ ಫಲಾನುಭವಿಗಳಿಗೆ ಒಂದು ಲಕ್ಷ ಹಕ್ಕುಪತ್ರಗಳನ್ನು ನೀಡಲು ಯೋಜನೆ ಹಮ್ಮಿಕೊಂಡಿತ್ತು. ಇದೀಗ ಆ ಕಾರ್ಯಕ್ರಮವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಪಾಕ್‌ ಪಡೆಗಳಿಗೆ ಸೂಕ್ತ ಉತ್ತರ: ಎಚ್‌ಕೆ ಪಾಟೀಲ

ಪಾಕಿಸ್ತಾನಕ್ಕೆ ಸೂಕ್ತ ಉತ್ತರ ನೀಡಿದ ಭಾರತೀಯ ಸಶಸ್ತ್ರ ಪಡೆಗಳನ್ನು ಕ್ಯಾಬಿನೆಟ್ ಶ್ಲಾಘಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಹೇಳಿದ್ದಾರೆ. “ಕೇಂದ್ರ ಸರ್ಕಾರವು ರಾಜ್ಯಗಳಿಗೆ ಸಲಹೆಗಳನ್ನು ನೀಡಿದೆ. ಜಿಲ್ಲಾ ಮಟ್ಟದ ಸನ್ನದ್ಧತೆಗಾಗಿ ಮುಖ್ಯ ಕಾರ್ಯದರ್ಶಿಗಳು ಜಿಲ್ಲಾಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಿದ್ದಾರೆ. ನಾಗರಿಕ ರಕ್ಷಣೆ, ಪೊಲೀಸ್ ಮತ್ತು ಜವಾಬ್ದಾರಿಯುತ ಜನರಿಗೆ ಸಿದ್ಧತೆಗಳನ್ನು ಮುಂದುವರಿಸಲು ಸಲಹೆ ನೀಡಲಾಗುವುದು” ಎಂದು ಪಾಟೀಲ್ ಹೇಳಿದರು

ಜಾತಿಗಣತಿ ವರದಿ ನಿರ್ಣಯ ಮುಂದೂಡಿಕೆ

ನಿನ್ನೆಯ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಸಮಿಕ್ಷಾ ವರದಿ ನಿರ್ಣಯ ಮುಂದೂಡಿಕೆ ಮಾಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ. ದಿನಾಂಕ: 29.02.2024 ರಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ವರದಿಯನ್ನು 54 ಮಾನದಂಡಗಳಿಗೆ ಅನುಗುಣವಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ದತ್ತಾಂಶಗಳ ಅಧ್ಯಯನ 2024 ಮತ್ತು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015ರ ಅಂಕಿ-ಅಂಶಗಳನ್ನು ಒಳಗೊಂಡ ವರದಿಗಳನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲಾಗಿತ್ತು.

ಮುಚ್ಚಿದ ಲಕೋಟೆಯನ್ನು ಸಚಿವ ಸಂಪುಟದಲ್ಲಿ ತೆರೆಯಲಾಗಿತ್ತು. ದತ್ತಾಂಶ ಹಾಗೂ ಅಧ್ಯಯನ ವರದಿ ಬಗ್ಗೆ ಮುಂದಿನ ಕ್ರಮ ಕೈಗೊಳ್ಳಲು ಸಚಿವ ಸಂಪುಟದ ಮುಂದೆ ಮಂಡಿಸಲಾಗಿತ್ತು ಈ ವಿಷಯವನ್ನು ಮುಂದಿನ ಸಂಪುಟ ಸಭೆಗೆ ಮುಂದೂಡಲಾಯಿತು.

ಇದನ್ನೂ ಓದಿ: Operation Sindoor: ಭಾರತ-ಪಾಕ್‌ ಉದ್ವಿಗ್ನತೆ ಬೆನ್ನಲ್ಲೇ ಕರಾಚಿಯಿಂದ ದಾವೂದ್‌ ಪಲಾಯನ?