ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Suresh Kumar: ಮಹಿಳೆಯರಿಗೆ ಅವಮಾನ ಆರೋಪ, ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಮೇಲೆ ಎಫ್‌ಐಆರ್

ಭಾನುವಾರ ಕಾಂಗ್ರೆಸ್‌ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ನಿಂದನೆ ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಇದಕ್ಕೂ ಮೊದಲು ಶಾಸಕರ ಮನೆಯ ಬಳಿ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದ್ದರು.

ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಮೇಲೆ ಎಫ್‌ಐಆರ್

ಸುರೇಶ್‌ ಕುಮಾರ್ -

ಹರೀಶ್‌ ಕೇರ
ಹರೀಶ್‌ ಕೇರ Jan 26, 2026 12:43 PM

ಬೆಂಗಳೂರು‌, ಜ.26 : ವಿಧಾನಸಭೆಯಲ್ಲಿ (vidhana sabha) ಸಚಿವ ಬೈರತಿ ಸುರೇಶ್ (Byrati Suresh) ವಿರುದ್ಧ ಶಾಸಕ ಎಸ್.ಸುರೇಶ್ ಕುಮಾರ್ (Suresh Kumar) ನೀಡಿದ್ದ ವಿವಾದಾತ್ಮಕ ಹೇಳಿಕೆ ಪ್ರಕರಣದ ಸಂಬಂಧ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ಮುಖ್ಯಸ್ಥರಾದ ಜಿ.ಪ್ರಕಾಶ್‌ ಮತ್ತು ಮನೋಹರ್‌ ನೇತೃತ್ವದ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದೆ.

ಮಹಿಳೆಯರಿಗೆ ಅವಮಾನ ಮಾಡಿದ ಶಾಸಕರು ಕ್ಷಮೆಯಾಚಿಸಲಿ ಎಂಬ ಘೋಷಣೆಗಳುಳ್ಳ ಪೋಸ್ಟರ್‌ಗಳನ್ನು ಅಂಟಿಸುವ ಕಾಂಗ್ರೆಸ್‌ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದ್ದರು. ಬಳಿಕ ಈ ಸಂಬಂಧ ದೂರು ಕೊಡಲು ಬಸವೇಶ್ವರ ನಗರ ಠಾಣೆಗೆ ದೂರು ಕೊಡಲು ಹೋಗಿದ್ದರು. ಆದರೆ ಈ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಹಾಗಾಗಿ ಅಲ್ಲಿಗೆ ತೆರಳಿ ದೂರು ನೀಡಲು ಅಧಿಕಾರಿಗಳು ಸೂಚನೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಭಾನುವಾರ ಕಾಂಗ್ರೆಸ್‌ ನಿಯೋಗ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಮಹಿಳೆಯರ ಗೌರವಕ್ಕೆ ಧಕ್ಕೆ ತರುವ ನಿಂದನೆ ಹೇಳಿಕೆ ನೀಡಿರುವ ಶಾಸಕ ಸುರೇಶ್‌ ಕುಮಾರ್‌ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Suresh Kumar: ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ಗೆ ಮಾತೃ ವಿಯೋಗ