HD Kumaraswamy: ಭೂ ಒತ್ತುವರಿ ಪ್ರಕರಣ; ಎಚ್.ಡಿ. ಕುಮಾರಸ್ವಾಮಿಗೆ ಮಧ್ಯಂತರ ರಿಲೀಫ್ ವಿಸ್ತರಣೆ
HD Kumaraswamy: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಸಂಬಂಧಿ ಡಿ.ಸಿ.ತಮ್ಮಣ್ಣ ಮತ್ತಿತರರು 2014ರಲ್ಲಿ ರಾಮನಗರದ ಬಿಡಿದಿ ಬಳಿಯ ಕೇತಗಾನಹಳ್ಳಿಯಲ್ಲಿ ವಿವಿಧ ಎಂಟು ಸರ್ವೆ ನಂಬರ್ಗಳ ಒಟ್ಟು 14 ಎಕರೆ ಭೂಮಿ ಒತ್ತುವರಿ ಮಾಡಿದ್ದಾರೆಂಬ ಆರೋಪವಿದೆ. ಇದಕ್ಕೆ ಸಂಬಂಧಿಸಿ ಬಲವಂತದ ಕ್ರಮಕ್ಕೆ ಮುಂದಾಗಬಾರದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿತ್ತು. ಇದೀಗ ಈ ಆದೇಶವನ್ನು ವಿಸ್ತರಣೆ ಮಾಡಿದೆ.


ಬೆಂಗಳೂರು: ರಾಮನಗರದ ಬಿಡದಿ ಬಳಿಯ ಕೇತಗಾನಹಳ್ಳಿ ಬಳಿ 6 ಎಕರೆ ಒತ್ತುವರಿ ಸಂಬಂಧ ಸ್ಥಳೀಯ ತಹಸೀಲ್ದಾರ್ ನೀಡಿರುವ ನೋಟಿಸ್ ಪ್ರಶ್ನಿಸಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು (HD Kumaraswamy) ಹೈ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ಪೀಠದಲ್ಲಿ ಶುಕ್ರವಾರ ವಿಚಾರಣೆ ನಡೆಯಿತು. ಇತ್ತೀಚೆಗೆ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮಕ್ಕೆ ಮುಂದಾಗಬಾರದೆಂದು ಮಧ್ಯಂತರ ಆದೇಶ ನೀಡಲಾಗಿತ್ತು. ಇದೀಗ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿ, ಅಲ್ಲಿವರೆಗೂ ಮಧ್ಯಂತರ ಆದೇಶವನ್ನು ನ್ಯಾಯಾಲಯ ವಿಸ್ತರಿಸಿದೆ.
ನ್ಯಾ.ಎನ್ ಎಸ್ ಸಂಜಯ್ ಗೌಡ ಅವರಿದ್ದ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಿತು. ಈ ವೇಳೆ ಜಡ್ಜ್ ವಿಚಾರಣೆಯನ್ನು ಏಪ್ರಿಲ್ 8ಕ್ಕೆ ಮುಂದೂಡಿ, ಅಲ್ಲಿವರೆಗೂ ಮಧ್ಯಂತರ ರಿಲೀಫ್ ವಿಸ್ತರಿಸಿ ಆದೇಶಿಸಿತು.
ಎಚ್.ಡಿ. ಕುಮಾರಸ್ವಾಮಿ ಪರವಾಗಿ ಉದಯ ಹೊಳ್ಳ ಮತ್ತು ಎಂ.ವಿ ನಿಶಾಂತ್ ವಾದ ಮಂಡಿಸಿದರು. 1986 ರಲ್ಲಿ ಖರೀದಿಸಿದ ಜಮೀನನ್ನು ಈಗ ಒತ್ತುವರಿ ಎನ್ನುತ್ತಿದ್ದಾರೆ. ಭೂ ಕಂದಾಯ ಕಾಯ್ದೆಯ ತಿದ್ದುಪಡಿ ಪ್ರಶ್ನಿಸುತ್ತೇವೆ ಎಂದು ವಾದಿಸಿದರು. ಈ ವೇಳೆ ನ್ಯಾಯಧೀಶರು ಅರ್ಜಿ ವಿಚಾರಣೆ ಏಪ್ರಿಲ್ 8ಕ್ಕೆ ಹೈಕೋರ್ಟ್ ಮುಂದೂಡಿತು. ಅಲ್ಲಿಯವರೆಗೂ ಮಧ್ಯಂತರ ರಿಲೀಫ್ ವಿಸ್ತರಿಸಿ ಹೈ ಕೋರ್ಟ್ ಆದೇಶ ಹೊರಡಿಸಿದೆ.
ಎಚ್.ಡಿ. ಕುಮಾರಸ್ವಾಮಿ ಮತ್ತು ಅವರ ಸಂಬಂಧಿ ಡಿ.ಸಿ.ತಮ್ಮಣ್ಣ ಮತ್ತಿತರರು 2014ರಲ್ಲಿ ರಾಮನಗರದ ಬಿಡಿದಿ ಬಳಿಯ ಕೇತಗಾನಹಳ್ಳಿಯಲ್ಲಿ ವಿವಿಧ ಎಂಟು ಸರ್ವೆ ನಂಬರ್ಗಳ ಒಟ್ಟು 14 ಎಕರೆ ಭೂಮಿ ಒತ್ತುವರಿ ಮಾಡಿದ್ದಾರೆಂಬ ಆರೋಪವಿದೆ. ಈ ಸಂಬಂಧ ಲೋಕಾಯುಕ್ತ ನೀಡಿದ್ದ ವರದಿ ಜಾರಿಗೊಳಿಸಲು ಹೈಕೋರ್ಟ್ ಆದೇಶ ನೀಡಿದ್ದರೂ ಅದನ್ನು ಪಾಲನೆ ಮಾಡಿಲ್ಲ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯದ ಎಸ್.ಆರ್.ಹಿರೇಮಠ ಅವರು ನ್ಯಾಯಾಂಗ ನಿಂದನೆ ಅರ್ಜಿ ದಾಖಲಿಸಿದ್ದರು.
ಈ ಅರ್ಜಿ ಪರಿಶೀಲಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠ ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು. ಆನಂತರ ಜಮೀನಿನ ಸರ್ವೆ ಕಾರ್ಯ ನಡೆಸಿದ ಸ್ಥಳೀಯ ತಹಸೀಲ್ದಾರ್, ಎಚ್‌ಡಿಕೆ ಮತ್ತಿತರರಿಗೆ ಕಾನೂನಿನ್ವಯ ನೋಟಿಸ್ ಜಾರಿಗೊಳಿಸಿದ್ದರು. ಅದನ್ನು ಪ್ರಶ್ನಿಸಿ ಎಚ್‌ಡಿಕೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.ಇದೀಗ ಹೈಕೋರ್ಟ್ ವಿಚಾರಣೆ ನಡೆಸಿ ಏಪ್ರಿಲ್ 8ಕ್ಕೆ ವಿಚಾರಣೆ ಮುಂದೂಡಿದೆ.
ಈ ಸುದ್ದಿಯನ್ನೂ ಓದಿ | Theft Case: ನ್ಯಾಯಾಧೀಶರ ಮನೆಯಲ್ಲಿಯೇ ಚಿನ್ನಾಭರಣ ಕಳವು!
ಆಲಮಟ್ಟಿ ಅಣೆಕಟ್ಟು ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಡಿಕೆಶಿ
ನವದೆಹಲಿ: ಆಲಮಟ್ಟಿ ಅಣೆಕಟ್ಟು ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ ಜಲಾನಯನ ಪ್ರದೇಶದ ರಾಜ್ಯಗಳ ಪ್ರತಿನಿಧಿಗಳನ್ನು ಕರೆಸಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ ಮುಂದಿನ 15 ದಿನಗಳಲ್ಲಿ ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಹೇಳಿದರು. ನವದೆಹಲಿಯ ಕರ್ನಾಟಕ ಭವನ-1 ‘ಕಾವೇರಿ’ಯಲ್ಲಿ ಶುಕ್ರವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್.ಪಾಟೀಲ್ ಅವರನ್ನು ರಾಜ್ಯಖಾತೆ ಸಚಿವರಾದ ಸೋಮಣ್ಣ ಅವರ ಜತೆ ಭೇಟಿ ಮಾಡಲಾಗಿತ್ತು. ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಮತ್ತು ನಮಗೆ ಎಷ್ಟು ನೀರು ಸಿಗಬೇಕು ಹಾಗೂ ಅಣೆಕಟ್ಟು ಎಷ್ಟು ಎತ್ತರ ಮಾಡಬೇಕು ಎಂದು ಹಿಂದೆಯೇ ತೀರ್ಮಾನವಾಗಿದೆ. 524 ಅಡಿ ಎತ್ತರಕ್ಕೆ ಎಷ್ಟು ಭೂಮಿ ಬೇಕಾಬಹುದು ಎಂದು ಅಂದಾಜಿಸಿ ಭೂಸ್ವಾಧೀನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕೆಲಸವನ್ನು ಬೇಗ ಮುಗಿಸುವ ಬದ್ಧತೆ ನಮ್ಮ ಸರ್ಕಾರಕ್ಕಿದೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಬಗ್ಗೆಯೂ ಮನವಿ ಮಾಡಿದ್ದೇವೆ ಎಂದರು.
ʼಭದ್ರಾ ಮೇಲ್ದಂಡೆ ವಿಚಾರವಾಗಿ ಕೇಂದ್ರ ಸರ್ಕಾರ ಕೆಲಸ ಮಾಡುತ್ತಿದೆ. ಕೇಂದ್ರದ ಕ್ಯಾಬಿನೆಟ್ ಮುಂದೆ ಈ ವಿಚಾರ ತೆಗೆದುಕೊಂಡು ಹೋಗಲಾಗಿದೆ ಎಂದು ಹೇಳಿದ್ದಾರೆ. ಮೇಕೆದಾಟು ವಿಚಾರದಲ್ಲಿ 15 ದಿನಗಳಲ್ಲಿ ಸುಪ್ರೀಂ ಕೋರ್ಟ್ ಕರ್ನಾಟಕದ ವಾದ ಆಲಿಸುವುದಾಗಿ ಹೇಳಿತ್ತು. ಆದರೆ ದಿನಾಂಕ ನಿಗದಿ ಮಾಡಿಲ್ಲ. ತಮಿಳುನಾಡಿನವರು ರಾಜಕೀಯವಾಗಿ ಸಹಕಾರ ನೀಡುವುದಿಲ್ಲ ಎನ್ನುವುದು ನಮಗೆ ಅರಿವಿದೆ. ಅವರು ಸಣ್ಣಪುಟ್ಟ ಅಣೆಕಟ್ಟುಗಳನ್ನು ಅವರ ವಲಯದಲ್ಲಿ ಕಟ್ಟಿಕೊಳ್ಳುತ್ತಿದ್ದಾರೆ. ಇದರ ಬಗ್ಗೆ ನಾವು ತೊಂದರೆ ಕೊಡಲು ಹೋಗುವುದಿಲ್ಲ. ಈ ವಿಚಾರವನ್ನೂ ಸಚಿವರ ಗಮನಕ್ಕೆ ತರಲಾಗಿದೆ ಎಂದರು.
ಕಳಸಾ ಬಂಡೂರಿ ಕಾಮಗಾರಿಗೆ ಪರಿಸರ ಇಲಾಖೆಯ ಅನುಮತಿ ಸಿಗದಿರುವ ಬಗ್ಗೆ ಗಮನಕ್ಕೆ ತರಲಾಗಿದೆ. ಈಗಾಗಲೇ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಈ ಹಿಂದೆ ಪ್ರಹ್ಲಾದ್ ಜೋಶಿ ಹಾಗೂ ಕೇಂದ್ರ ಅರಣ್ಯ ಸಚಿವರನ್ನೂ ಸಹ ಭೇಟಿ ಮಾಡಲಾಗಿತ್ತು. ಎತ್ತಿನಹೊಳೆ ಕಾಮಗಾರಿ ಕುಡಿಯುವ ನೀರಿನ ಯೋಜನೆಯಾದ ಕಾರಣ ಒಂದಷ್ಟು ಅನುದಾನ ನೀಡಬೇಕು ಎಂದು ಮನವಿ ಮಾಡಲಾಗಿದೆ. ಜತೆಗೆ ಅರಣ್ಯ ಭೂಮಿ ಬಳಕೆ, ಬದಲಿ ಭೂಮಿ ನೀಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ಇದರ ಡಿಪಿಆರ್ ಅನ್ನು ನೋಡುವುದಾಗಿ ಭರವಸೆ ನೀಡಿದ್ದಾರೆ ಎಂದರು.