ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka Rains: ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಅಬ್ಬರಿಸಲಿದೆ ಮಳೆ; ಯೆಲ್ಲೋ ಅಲರ್ಟ್‌ ಘೋಷಣೆ

Karnataka Weather: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಜೋರಾಗುವ ಮುನ್ಸೂಚನೆ ಸಿಕ್ಕಿದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಬಿರುಸಿನ ಮಳೆಯಾಗುವ ಸಂಭವವಿದೆ. ಹೀಗಾಗಿ ಭಾರತ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

Yellow Alert: ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಅಬ್ಬರಿಸಲಿದೆ ಮಳೆ!

Profile Prabhakara R Jun 23, 2025 3:36 PM

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಭಾನುವಾರ ಉತ್ತಮ ಮಳೆಯಾಗಿದೆ. ಅದೇ ರೀತಿ ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ವರುಣ (Karnataka Rains) ಅಬ್ಬರಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇದರಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಜೂನ್‌ 29ರವರೆಗೆ ಗುಡುಗು ಸಹಿತ ಬಿರುಸಿನ ಮಳೆಯಾಗುವ ಸಂಭವವಿದೆ.

ಜೂನ್‌ 24ರಂದು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಹಗುರ ಮಳೆ/ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ರಾಮನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ದಾವಣಗೆರೆ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಜೂನ್‌ 25ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಹಾಸನ, ಚಾಮರಾಜನಗರ, ಕೊಡಗು, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ವಿಜಯನಗರ, ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.



ಜೂನ್‌ 26ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಮೈಸೂರು, ಹಾಸನ, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ವಿಜಯನಗರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನೂ ಓದಿ | Health Tips: ಫಲವಂತಿಕೆ ಹೆಚ್ಚಿಸಲು ಯೋಗ ನೆರವಾಗಬಲ್ಲದು; ಗೊತ್ತೇ?

ಜೂನ್‌ 27 ಮತ್ತು 28ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಹಾವೇರಿ, ಕೊಪ್ಪಳ, ಬೀದರ್, ರಾಯಚೂರು, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಮೈಸೂರು, ಹಾಸನ, ಚಾಮರಾಜನಗರ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಮಂಡ್ಯ, ವಿಜಯನಗರ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.