BJP Janakrosh Yatra: ಇಂದು ಮಂಡ್ಯದಲ್ಲಿ ಎರಡನೇ ದಿನದ ಬಿಜೆಪಿ ಜನಾಕ್ರೋಶ ಯಾತ್ರೆ
ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್ ಅಶೋಕ, ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ಸಿಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಸಹ ಇಂದು ಮಂಡ್ಯದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ.

ಜನಾಕ್ರೋಶ ಯಾತ್ರೆ

ಮಂಡ್ಯ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಲೆ ಏರಿಕೆ (Price hikes) ಖಂಡಿಸಿ, ಬಿಜೆಪಿಯಿಂದ ಜನಾಕ್ರೋಶ ಯಾತ್ರೆ (BJP janakrosh yatra) ಆರಂಭವಾಗಿದ್ದು, ನಿನ್ನೆ ಮೈಸೂರಲ್ಲಿ ಈ ಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad joshi) ಚಾಲನೆ ನೀಡಿದ್ದರು. ಇದೀಗ ಈ ಜನಾಕ್ರೋಶ ಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಮಂಡ್ಯದಲ್ಲಿ (Mandya news) ಯಾತ್ರೆ ಆರಂಭವಾಗಲಿದೆ. ಬೆಳಿಗ್ಗೆ 10:30ಕ್ಕೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯ ಬಳಿಯಿಂದ ಜನಾಕ್ರೋಶ ಯಾತ್ರೆ ಆರಂಭವಾಗಿ, ಸಿಲ್ವರ್ ಜೂಬ್ಲಿ ಪಾರ್ಕ್‌ವರೆಗೆ ಸಾಗಲಿದೆ.
ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್ ಅಶೋಕ, ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ಸಿಟಿ ರವಿ ಸೇರಿದಂತೆ ಹಲವು ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಸಾವಿರಾರು ಕಾರ್ಯಕರ್ತರು ಸಹ ಇಂದು ಮಂಡ್ಯದಲ್ಲಿ ಭಾಗಿ ಆಗುವ ಸಾಧ್ಯತೆ ಇದೆ.
ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಲ್ಹಾದ್ ಜೋಶಿ, ದರಗಳು ವಿಪರೀತವಾಗಿ ಏರಿಕೆಯಾಗಿದೆ. ಮತ್ತೊಂದೆಡೆ ಧರ್ಮಾಧಾರಿತ ಮೀಸಲಾತಿಗೆ ಕಾನೂನಿನಲ್ಲಿ ಅವಕಾಶ ಇಲ್ಲದಿದ್ದರೂ ಸರ್ಕಾರ ಮುಸಲ್ಮಾನರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ.4ರಷ್ಟು ಮೀಸಲಾತಿ ನೀಡಿರುವುದು ತುಷ್ಟೀಕರಣದ ಪರಮಾವಧಿಯಾಗಿದೆ ಎಂದರು. ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳ ವಿರುದ್ಧ ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಪಿ) ಮತ್ತು ಬುಡಕಟ್ಟು ಉಪ ಯೋಜನೆ (ಟಿಎಸ್‌ಪಿ) ಅಡಿಯಲ್ಲಿ ದಲಿತರಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.
ಏಪ್ರಿಲ್ 7 ರಂದು ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಜನಾಕ್ರೋಶ ಯಾತ್ರೆ ನಡೆಯಿತು. ಏಪ್ರಿಲ್ 8 ರಂದು ಬೆಳಿಗ್ಗೆ ಮಂಡ್ಯ ಮತ್ತು ಮಧ್ಯಾಹ್ನ ಹಾಸನದಲ್ಲಿ, ಏಪ್ರಿಲ್ 9 ರಂದು ಕೊಡಗು ಮತ್ತು ಮಂಗಳೂರು, ಏಪ್ರಿಲ್ 10 ರಂದು ಉಡುಪಿ ಮತ್ತು ಚಿಕ್ಕಮಗಳೂರು ಮೊದಲ ಹಂತದ ಪ್ರತಿಭಟನೆಗೆ ಸಾಕ್ಷಿಯಾಗಲಿದೆ.
ಇದನ್ನೂ ಓದಿ: CM Siddaramaiah: ಬಿಜೆಪಿ ಜನಾಕ್ರೋಶ ಯಾತ್ರೆಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ