ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Just Married Movie: ‘ಜಸ್ಟ್ ಮ್ಯಾರೀಡ್’ ಚಿತ್ರದ ‘ಶಿಶುಪಾಲ’ ಪಾತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟ ಶ್ರೀಮನ್

Just Married Movie: ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್‌ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ ʼಜಸ್ಟ್ ಮ್ಯಾರೀಡ್ʼ ಚಿತ್ರದಲ್ಲಿ ದಕ್ಷಿಣ ಭಾರತದ ಖ್ಯಾತ ನಟ ಶ್ರೀಮನ್ ಅವರು ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ.

‘ಜಸ್ಟ್ ಮ್ಯಾರೀಡ್’ ಚಿತ್ರದ ‘ಶಿಶುಪಾಲ’ ಪಾತ್ರದಲ್ಲಿ ನಟ ಶ್ರೀಮನ್

Profile Siddalinga Swamy Jun 23, 2025 9:41 PM

ಬೆಂಗಳೂರು: ಭಾರತದ ಜನಪ್ರಿಯ ಸಂಗೀತ ಸಂಯೋಜಕ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್. ಬಾಬಿ ಅವರು abbs studios ಲಾಂಛನದಲ್ಲಿ ನಿರ್ಮಿಸಿರುವ, ಸಿ.ಆರ್. ಬಾಬಿ ಅವರೇ ಮೊದಲ ಬಾರಿಗೆ ನಿರ್ದೇಶಿಸಿರುವ ಹಾಗೂ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ ʼಜಸ್ಟ್ ಮ್ಯಾರೀಡ್ʼ ಚಿತ್ರದಲ್ಲಿ ಕನ್ನಡ ಹಾಗೂ ಭಾರತೀಯ ಚಿತ್ರರಂಗದ ಹೆಸರಾಂತ ಕಲಾವಿದರು ಅಭಿನಯಿಸಿದ್ದಾರೆ. ತೆಲುಗು, ತಮಿಳು ಭಾಷೆಗಳ ಅನೇಕ ಜನಪ್ರಿಯ ಚಿತ್ರಗಳಲ್ಲಿ ನಟಿಸಿ ಜನಮನಸೂರೆಗೊಂಡಿರುವ ದಕ್ಷಿಣ ಭಾರತದ ಖ್ಯಾತ ನಟ ಶ್ರೀಮನ್ ಅವರು ಸಹ ʼಜಸ್ಟ್ ಮ್ಯಾರೀಡ್ʼ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. "ಶಿಶುಪಾಲ" ಪಾತ್ರದಲ್ಲಿ ಶ್ರೀಮನ್ ಅವರು ಅಭಿನಯಿಸಿದ್ದು, ಅವರ ಪಾತ್ರ ಪರಿಚಯದ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ಇತ್ತೀಚೆಗಷ್ಟೇ ಡೈನಾಮಿಕ್ ಸ್ಟಾರ್ ದೇವರಾಜ್ ಅವರ ಪಾತ್ರದ ಕುರಿತು ಸಹ ಚಿತ್ರತಂಡ ಮಾಹಿತಿ ನೀಡಿತ್ತು. ಭಾರತೀಯ ಚಿತ್ರರಂಗದ ಜನಪ್ರಿಯ ಹಾಗೂ ಅನುಭವಿ ಕಲಾವಿದರು ಸಂಗಮದಲ್ಲಿ ಮೂಡಿಬಂದಿರುವ ʼಜಸ್ಟ್ ಮ್ಯಾರೀಡ್ʼ ಚಿತ್ರವನ್ನು ಆದಷ್ಟು ಬೇಗ ತೆರೆಯ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ʼಜಸ್ಟ್ ಮ್ಯಾರೀಡ್ʼ ಚಿತ್ರದ ಪ್ರಮುಖ ಪಾತ್ರದಲ್ಲಿ ಡೈನಾಮಿಕ್ ಸ್ಟಾರ್ ದೇವರಾಜ್

ಬೆಂಗಳೂರು: abbs studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್. ಬಾಬಿ ಅವರು ನಿರ್ಮಿಸಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್‌ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ ʼಜಸ್ಟ್ ಮ್ಯಾರೀಡ್ʼ ಚಿತ್ರ (Just Married Movie) ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ‌. ಕನ್ನಡ ಚಿತ್ರರಂಗದ ಸಾಕಷ್ಟು ಅನುಭವಿ ಹಾಗೂ ಹಿರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಆ ಪೈಕಿ ತಮ್ಮ ಅಮೋಘ ಅಭಿನಯದಿಂದ ಅಭಿಮಾನಿಗಳ ಮನ ಗೆದ್ದಿರುವ ಡೈನಾಮಿಕ್ ಸ್ಟಾರ್ ದೇವರಾಜ್ ಅವರು ಸಹ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ.

ದೇವರಾಜ್ ಅವರು ನಿವೃತ್ತ ನ್ಯಾಯಾಧೀಶರ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಪೂರ್ಣಚಂದ್ರ ಇವರ ಪಾತ್ರದ ಹೆಸರು. ʼಕರ್ತವ್ಯದಲ್ಲಿ ನ್ಯಾಯಾಧೀಶ, ಸ್ವಭಾವದಲ್ಲಿ ರಕ್ಷಕ ನ್ಯಾಯಾಲಯದಲ್ಲಾದರೂ ಮನೆಯಲ್ಲಾದರೂ ಕಾನೂನು ಸದಾ ಪಾಲನೆ ಆಗುತ್ತದೆ. ನ್ಯಾಯವು ಕೇವಲ ಉದ್ಯೋಗವಲ್ಲ, ಅದು ಬದುಕಿನ ಶೈಲಿʼ ಎಂಬ ವಾಕ್ಯಗಳೊಂದಿಗೆ ದೇವರಾಜ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಅನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

ʼಜಸ್ಟ್ ಮ್ಯಾರೀಡ್ʼ ಪ್ರೇಮಕಥೆಯ ಚಿತ್ರವಾಗಿದ್ದರೂ, ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಇದೆ. ಸಿ.ಆರ್. ಬಾಬಿ ಅವರೆ ಕಥೆ ಬರೆದಿದ್ದಾರೆ‌. ಚಿತ್ರಕಥೆ ಸಿ.ಆರ್. ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು.

ಅಜನೀಶ್ ಲೀಕನಾಥ್, ಸಂಗೀತ ನಿರ್ದೇಶನ. ಪಿ ಜಿ ಛಾಯಾಗ್ರಹಣ. ಶ್ರೀಕಾಂತ್ ಮತ್ತು ಪ್ರತೀಕ್, ಸಂಕಲನ. ಅಮರ್, ಕಲಾ ನಿರ್ದೇಶನ. ವಿಕ್ರಮ್ ಮೋರ್, ಸಾಹಸ ನಿರ್ದೇಶನ. ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ ʼಜಸ್ಟ್ ಮ್ಯಾರಿಡ್ʼ ಚಿತ್ರದ ಹಾಡುಗಳನ್ನು ಕೆ. ಕಲ್ಯಾಣ್, ಡಾ. ವಿ. ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ನಾಗರ್ಜುನ ಶರ್ಮ ಮತ್ತು ಧನಂಜಯ್ ರಂಜನ್ ಬರೆದಿದ್ದಾರೆ.

ಈ ಸುದ್ದಿಯನ್ನೂ ಓದಿ | Jumka Fashion 2025: ಮಾನಿನಿಯರ ಮನ ಗೆದ್ದ ಬ್ಲ್ಯಾಕ್ ಮೆಟಲ್ ಜುಮಕಿಗಳು