ಯುಗಾದಿ ಹಬ್ಬ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

CM Siddaramaiah: 40% ಕಮಿಷನ್‌ ಆರೋಪದ ಕುರಿತು ವಿಚಾರಣಾ ಆಯೋಗ ವರದಿ ಮುಖ್ಯಮಂತ್ರಿಗೆ ಸಲ್ಲಿಕೆ

ಸರ್ಕಾರದ ಟೆಂಡರ್ ಕಾಮಗಾರಿಗಳಲ್ಲಿ ಶೇ.40ಕ್ಕಿಂತ ಹೆಚ್ಚಿನ ಕಮಿಷನ್ ಚಾಲ್ತಿಯಲ್ಲಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘ ದೂರು ಸಲ್ಲಿಸಿತ್ತು. ಇದಲ್ಲದೆ, ಪ್ಯಾಕೇಜ್ ಪದ್ದತಿ ಕೈ ಬಿಡುವುದು, ಎಸ್‌.ಆರ್ ದರಪಟ್ಟಿ ನಿಗದಿ, ಸ್ಟಾರ್ ರೇಟ್‌ ಪದ್ದತಿ ಜಾರಿ, ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಿಕೆ, ಸೀನಿಯಾರಿಟಿ ಮೇಲೆ ಬಿಲ್ ಪಾವತಿ, ಕೆಆರ್‌ಐಡಿಎಲ್‌ನಿಂದ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳ ನೀಡಿಕೆ ತಪ್ಪಿಸುವುದು ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಲು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿತ್ತು.

40% ಕಮಿಷನ್‌ ಆರೋಪದ ಕುರಿತು ವಿಚಾರಣಾ ಆಯೋಗ ವರದಿ ಮುಖ್ಯಮಂತ್ರಿಗೆ ಸಲ್ಲಿಕೆ

ನ್ಯಾ. ಹೆಚ್‌.ಎನ್‌ ನಾಗಮೋಹನ್‌ದಾಸ್ ಆಯೋಗದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿ ಸಲ್ಲಿಕೆ

ಹರೀಶ್‌ ಕೇರ ಹರೀಶ್‌ ಕೇರ Mar 13, 2025 12:07 PM

ಬೆಂಗಳೂರು: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (Contractors association) ಈ ಹಿಂದಿನ ಬಿಜೆಪಿ ಸರ್ಕಾರದ (BJP Government) ಮೇಲೆ ಮಾಡಿದ 40 ಶೇಕಡ ಕಮಿಷನ್‌ ಆರೋಪದ ಕುರಿತು ತನಿಖೆ ನಡೆಸಲು ನೇಮಿಸಲಾಗಿದ್ದ ನ್ಯಾಯಮೂರ್ತಿ ಹೆಚ್‌.ಎನ್‌ ನಾಗಮೋಹನ್‌ದಾಸ್ ವಿಚಾರಣಾ ಆಯೋಗ, ತನ್ನ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಬುಧವಾರ ಸಲ್ಲಿಸಿದೆ. ಜೊತೆಗೆ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 1ರಿಂದ 18ರವರೆಗಿನ ಉಪ ಸೀಳು ಕಾಲುವೆಗಳ ಅಧುನೀಕರಣ ಅಂದಾಜು ಪಟ್ಟಿಯ ತನಿಖಾ ವರದಿಯನ್ನೂ ಸಲ್ಲಿಸಲಾಗಿದೆ.

ಸರ್ಕಾರದ ಟೆಂಡರ್ ಕಾಮಗಾರಿಗಳಲ್ಲಿ ಶೇ.40ಕ್ಕಿಂತ ಹೆಚ್ಚಿನ ಕಮಿಷನ್ ಚಾಲ್ತಿಯಲ್ಲಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘ ದೂರು ಸಲ್ಲಿಸಿತ್ತು. ಇದಲ್ಲದೆ, ಪ್ಯಾಕೇಜ್ ಪದ್ದತಿ ಕೈ ಬಿಡುವುದು, ಎಸ್‌.ಆರ್ ದರಪಟ್ಟಿ ನಿಗದಿ, ಸ್ಟಾರ್ ರೇಟ್‌ ಪದ್ದತಿ ಜಾರಿ, ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಿಕೆ, ಸೀನಿಯಾರಿಟಿ ಮೇಲೆ ಬಿಲ್ ಪಾವತಿ, ಕೆಆರ್‌ಐಡಿಎಲ್‌ನಿಂದ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳ ನೀಡಿಕೆ ತಪ್ಪಿಸುವುದು ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಲು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿತ್ತು.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಸಿಎಂ ಕಚೇರಿ ಮಾಹಿತಿ ನೀಡಿದೆ. ವಿಚಾರಣಾ ಆಯೋಗ ಈ ಮೇಲಿನ ಎಲ್ಲಾ ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ವಿವರವಾದ ಅಧ್ಯಯನ ನಡೆಸಿ ವರದಿ ಸಲ್ಲಿಸಿದೆ. ಸಾರ್ವಜನಿಕರಿಂದ ಬಂದ ದೂರುಗಳ ಬಗ್ಗೆಯೂ ಆಯೋಗ ಕೂಲಂಕಷವಾಗಿ ತನಿಖೆ ನಡೆಸಿ ಸಲಹೆ ಮತ್ತು ಅಭಿಪ್ರಾಯಗಳೊಂದಿಗೆ ವರದಿ ತಯಾರಿಸಿದೆ. ಎರಡು ಪ್ರತ್ಯೇಕ ತನಿಖಾ ವರದಿಗಳನ್ನು ಸಲ್ಲಿಸಿದೆ ಎಂದಿದೆ.

1) ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಮಾಡಿದ ಆರೋಪಗಳ ತನಿಖಾ ವರದಿ

2) ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 01 ರಿಂದ 18 ರವರೆಗಿನ ಉಪ/ಸೀಳು ಕಾಲುವೆಗಳ ಆಧುನೀಕರಣ ಅಂದಾಜು ಪಟ್ಟಿ – ತನಿಖಾ ವರದಿ

ಮೊದಲ ತನಿಖಾ ವರದಿಯಲ್ಲಿ ಏನಿದೆ?

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘವು ಸರ್ಕಾರದ ಟೆಂಡರ್ ಕಾಮಗಾರಿಗಳಲ್ಲಿ ಶೇಕಡ 40 ಕ್ಕಿಂತ ಹೆಚ್ಚಿನ ಕಮಿಷನ್ ಚಾಲ್ತಿಯಲ್ಲಿದೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿತ್ತು. ಇದಲ್ಲದೆ ಪ್ಯಾಕೇಜ್ ಪದ್ಧತಿ ಕೈಬಿಡುವುದು, ಎಸ್.ಆರ್. ದರಪಟ್ಟಿ ನಿಗದಿ, ಸ್ಟಾರ್ ರೇಟ್ ಪದ್ಧತಿಯ ಜಾರಿ, ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವಿಕೆ, ಸೀನಿಯಾರಿಟಿ ಮೇಲೆ ಬಿಲ್ ಪಾವತಿ, ಕೆ.ಆರ್.ಐ.ಡಿ.ಎಲ್. ನಿಂದ ಗುತ್ತಿಗೆದಾರರಿಗೆ ನೇರವಾಗಿ ಕಾಮಗಾರಿಗಳ ನೀಡಿಕೆ ತಪ್ಪಿಸುವುದು ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆಯೂ ತನಿಖೆ ನಡೆಸಲು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು. ಈ ಸಂಬಂಧ ವಿಚಾರಣಾ ಆಯೋಗವು ಈ ಎಲ್ಲಾ ಆರೋಪಗಳ ಸತ್ಯಾಸತ್ಯತೆಯ ಬಗ್ಗೆ ವಿವರವಾದ ಅಧ್ಯಯನ ಮಾಡಿ ತನಿಖೆ ನಡೆಸಿ ಪ್ರಸ್ತುತ ವರದಿಯನ್ನು ಸಲ್ಲಿಸಿದೆ.

ಇದೊಂದು ಸಾರ್ವಜನಿಕ ಕಾಮಗಾರಿಗಳಿಗೆ ಸಂಬಂಧಿಸಿದ ಆರೋಪವಾಗಿರುವುದರಿಂದ ಸಾರ್ವಜನಿಕರ ಹೇಳಿಕೆಗಳು ಮತ್ತು ವಿವರಗಳು ಬಹು ಮುಖ್ಯ ಎಂಬುದನ್ನು ಮನಗಂಡು ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬಂದ ದೂರುಗಳ ಬಗ್ಗೆಯೂ ಆಯೋಗವು ಕೂಲಂಕಷವಾಗಿ ತನಿಖೆ ನಡೆಸಿ ಸಲಹೆ ಮತ್ತು ಅಭಿಪ್ರಾಯಗಳೊಂದಿಗೆ ವರದಿ ತಯಾರಿಸಲಾಗಿದೆ.

ಗುತ್ತಿಗೆದಾರರ ಸಂಘದ ಆರೋಪಗಳ ತನಿಖೆ ನಡೆಸುತ್ತಿದ್ದ ಜೊತೆ ಜೊತೆಯಲ್ಲಿಯೇ ಸರ್ಕಾರವು ರಾಜ್ಯದ ಪ್ರಮುಖ ಐದು ಇಲಾಖೆಗಳಲ್ಲಿ ದಿನಾಂಕ:26.07.2019 ರಿಂದ 31.03.2023ರ ಅವಧಿಯಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳ ತನಿಖೆ ನಡೆಸಿ ವರದಿಯನ್ನು ನೀಡಬೇಕೆಂದು ತಿಳಿಸಿತು. ಇದನ್ನು ಗಮನದಲ್ಲಿಟ್ಟುಕೊಂಡು ಆಯೋಗವು ವೈಜ್ಞಾನಿಕವಾಗಿ ರಾಂಡಮ್ ಮಾದರಿಯಲ್ಲಿ ಪೂರ್ಣಗೊಂಡ ಕಾಮಗಾರಿಗಳನ್ನು ತನಿಖೆಗೆ ಆಯ್ಕೆ ಮಾಡಿಕೊಂಡಿದೆ. ಈ ಆಯ್ಕೆಯಲ್ಲಿ ಎಲ್ಲಾ ಇಲಾಖೆಗಳು, ಎಲ್ಲಾ ಜಿಲ್ಲೆಗಳು, ಎಲ್ಲಾ ಮಾದರಿಯ ಕಾಮಗಾರಿಗಳು ಮತ್ತು ಎಲ್ಲಾ ಮೊತ್ತದ ಕಾಮಗಾರಿಗಳನ್ನು ಪರಿಗಣಿಸಲಾಗಿದೆ.

ಕಾಮಗಾರಿಗಳ ತನಿಖೆಯು ಕಡತಗಳ ಪರಿಶೀಲನೆ, ಸ್ಥಳ ಪರಿಶೀಲನೆ ಮತ್ತು ಲೆಕ್ಕಪತ್ರಗಳ ಪರಿಶೀಲನೆ ಅಂಶಗಳನ್ನು ಒಳಗೊಂಡಿರುತ್ತದೆ. ತನಿಖಾ ವರದಿಯು ಅನುಬಂಧಗಳೊಂದಿಗೆ ಸುಮಾರು ಇಪ್ಪತ್ತು ಸಾವಿರ ಪುಟಗಳನ್ನು ಹೊಂದಿದೆ.

2ನೇ ತನಿಖಾ ವರದಿಯಲ್ಲಿ ಏನಿದೆ?

ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪುರ ಬಲದಂಡೆ ಮುಖ್ಯ ಕಾಲುವೆಗೆ ಅಡ್ಡಲಾಗಿ ನಿರ್ಮಿಸಲಾಗಿರುವ 01 ರಿಂದ 18 ರವರೆಗಿನ ಉಪ/ಸೀಳು ಕಾಲುವೆಯ ಆಧುನೀಕರಣ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪ್ಯಾಕೇಜ್ ಮಂಜೂರಾದ ಅಂದಾಜು ಪತ್ರಿಕೆಗಳಲ್ಲಿ ಅಳವಡಿಸಿಕೊಂಡಿರುವ ಹಾಗೂ ಸದರಿ ಅಂದಾಜು ಪತ್ರಿಕೆಗಳನ್ನು ಪರಿಶೀಲಿಸಿ ಪ್ರಸಕ್ತ ನಿಗಮದ ಅಂದಾಜು ಪರಿಶೀಲನಾ ಸಮಿತಿಯು ಗಮನಿಸಿರುವ ತಾಂತ್ರಿಕ ನ್ಯೂನತೆಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸಲು ನಿವೃತ್ತ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀ ಸಿದ್ದಗಂಗಪ್ಪರವರ ಅಧ್ಯಕ್ಷತೆಯಲ್ಲಿ ರಚಿಸಿದ ತಾಂತ್ರಿಕ ತಜ್ಞರ ಸಮಿತಿಯನ್ನು ವಿಸರ್ಜಿಸಿ ವಿಚಾರಣಾ ಆಯೋಗಕ್ಕೆ ಹೆಚ್ಚುವರಿಯಾಗಿ ವಹಿಸಿರುವ ತನಿಖೆಯನ್ನು ಆಯೋಗವು ನಡೆಸಿ ತನಿಖಾ ವರದಿಯನ್ನು ಸಲ್ಲಿಸಿದೆ. ವರದಿಯು ಅನುಬಂಧಗಳೊಂದಿಗೆ ಸುಮಾರು ಸಾವಿರದ ಎಂಟುನೂರು ಪುಟಗಳನ್ನು ಹೊಂದಿದೆ.

ಇದನ್ನೂ ಓದಿ: H D Kumaraswamy: ಸಿಎಂ ಅನುಕೂಲಕ್ಕೆ ತಕ್ಕಂತೆ ಲೋಕಾಯುಕ್ತ ವರದಿ; ಹೆಚ್.ಡಿ.ಕುಮಾರಸ್ವಾಮಿ ಟೀಕೆ