Kagodu Thimmappa: ಸಾಗರ ಮಾರಿಕಾಂಬೆ ದರ್ಶನದ ವೇಳೆ ಕಾಗೋಡು ತಿಮ್ಮಪ್ಪ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ. ದೇವಸ್ಥಾನದಲ್ಲಿ ತೀವ್ರ ಜನಸಂದಣಿ ಇದ್ದಿದ್ದರಿಂದ ಉಸಿರಾಟ ಸಮಸ್ಯೆಯಾಗಿದ್ದು, ಚಿಕಿತ್ಸೆಯಿಂದಾಗಿ ಆರೋಗ್ಯ ಸುಧಾರಣೆಯಾಗಿದೆ.
ಕಾಗೋಡು ತಿಮ್ಮಪ್ಪ -
ಶಿವಮೊಗ್ಗ, ಫೆ.03: ಇಂದಿನಿಂದ ಆರಂಭವಾದ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ ಮಾರಿಕಾಂಬ ದೇವಿ ಜಾತ್ರೆಯ ಹಿನ್ನೆಲೆಯಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪ (Kagodu Thimmappa) ಅವರು ಕುಸಿದು ಬಿದ್ದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಮಾರಿಕಾಂಬ ದೇವಿಯ ದರ್ಶನಕ್ಕೆ ತೆರಳಿದ್ದರು. ಈ ವೇಳೆ ತೀವ್ರ ಉಸಿರಾಟ ಹಾಗೂ ಮಧುಮೇಹ ಸಮಸ್ಯೆಯಿಂದಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದು ಉಪ ವಿಭಾಗೀಯ ಆಸ್ಪತ್ರೆಯ ವೈದ್ಯ ವಿಕ್ರಂ ಚಿಕಿತ್ಸೆ ನೀಡುತ್ತಿದ್ದಾರೆ. ದೇವಸ್ಥಾನದಲ್ಲಿ ತೀವ್ರ ಜನಸಂದಣಿ ಇದ್ದಿದ್ದರಿಂದ ಉಸಿರಾಟ ಸಮಸ್ಯೆಯಾಗಿದ್ದು, ಚಿಕಿತ್ಸೆಯಿಂದಾಗಿ ಆರೋಗ್ಯ ಸುಧಾರಣೆಯಾಗಿದೆ. ಅರೋಗ್ಯ ಚೇತರಿಕೆ ಕಂಡು ಬರುತ್ತಿದೆ ಎಂದು ಮೂಲಗಳು ತಿಳಿಸಿವೆ.
ಶೀಘ್ರ 2 ಸಾವಿರ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭರ್ತಿ: ಸಚಿವ ಸುಧಾಕರ್
ಬೆಂಗಳೂರು : ರಾಜ್ಯದಲ್ಲಿ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳು ಸೇರಿ ಅಂದಾಜು 2 ಸಾವಿರ ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡುವುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ವಿಟಿಯು ಘಟಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ – 186, ಪಾಲಿಟೆಕ್ನಿಕ್‍ನಲ್ಲಿ 941, ಕಾಲೇಜು ಶಿಕ್ಷಣ ಇಲಾಖೆಯಲ್ಲಿ 826, ಯುವಿಸಿಇನಲ್ಲಿ 79 ಸೇರಿದಂತೆ ಅಂದಾಜು 2 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು. ಆ ಮೂಲಕ ಉನ್ನತ ಶಿಕ್ಷಣ ಇಲಾಖೆಯಲ್ಲಿರುವ ನೌಕರರ ಕೊರತೆಯನ್ನು ನೀಗಿಸಲಾಗುವುದು ಎಂದರು.
ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಅನುದಾನ ಕೇಳಿದ್ದೆವು ನಯಾಪೈಸೆ ಕೊಡಲಿಲ್ಲ: ಸಿಎಂ
ವಿಟಿಯು ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಇದಕ್ಕಾಗಿ ಏಷ್ಯನ್ ಡೆವಲೆಪ್‍ಮೆಂಟ್ ಬ್ಯಾಂಕ್‍ನಿಂದಾಗಿ ಸೆಂಟರ್ ಆಪ್ ಎಕ್ಸಲೆನ್ಸ್ ಆರಂಭಿಸುತ್ತಿದ್ದೇವೆ. ಇಂದು ಪದವಿ ಪಡೆದ ವಿದ್ಯಾರ್ಥಿಗಳ ಜೀವನ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದರು.