ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಹೊಸ ವರ್ಷಾಚರಣೆಗೆ ಪೊಲೀಸ್ ಹದ್ದಿನ ಕಣ್ಣು; ಕಲಬುರಗಿ ನಗರದಾದ್ಯಂತ 850 ಸಿಬ್ಬಂದಿ ನಿಯೋಜನೆ

Kalaburagi News: ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಕಲಬುರಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ತಿಳಿಸಿದ್ದಾರೆ.

ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ

ಕಲಬುರಗಿ, ಡಿ.31: ಹೊಸ ವರ್ಷದ ಸಂಭ್ರಮಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಕಲಬುರಗಿ ನಗರದಾದ್ಯಂತ (Kalaburagi News) ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ ಹೇಳಿದ್ದಾರೆ. ನಗರದಲ್ಲಿ ಶಾಂತಿ ಕಾಪಾಡಲು ಒಟ್ಟು 850 ಪೊಲೀಸ್ ಸಿಬ್ಬಂದಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಇದರಲ್ಲಿ 2 ಡಿಸಿಪಿ, 8 ಎಸಿಪಿ, 16 ಪಿಐ ಹಾಗೂ 18 ಪಿಎಸ್‌ಐಗಳನ್ನು ನಿಯೋಜಿಸಲಾಗಿದೆ. ಅಲ್ಲದೇ, 300 ಹೋಂ ಗಾರ್ಡ್ಸ್, 10 ಸಿಎಆರ್ (CAR) ತುಕಡಿಗಳು ಹಾಗೂ 3 ಕೆಎಸ್‌ಆರ್‌ಪಿ (KSRP) ತುಕಡಿಗಳನ್ನು ಹೆಚ್ಚುವರಿಯಾಗಿ ಬಂದೋಬಸ್ತ್‌ಗಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಹದ್ದಿನ ಕಣ್ಣು ಮತ್ತು ನಾಕಾಬಂಧಿ

ನಗರದಾದ್ಯಂತ ಒಟ್ಟು 30 ಪ್ರಮುಖ ಸ್ಥಳಗಳಲ್ಲಿ ನಾಕಾಬಂಧಿ ಸ್ಥಾಪಿಸಲಾಗಿದ್ದು, ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ವಿಶೇಷವಾಗಿ ನಗರದ ಪ್ರಮುಖ ಕೇಂದ್ರಗಳಾದ ಎಸ್‌ವಿಪಿ ಸರ್ಕಲ್, ಜಗತ್ ವೃತ್ತ, ಸೂಪರ್ ಮಾರ್ಕೆಟ್ ಮತ್ತು ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ.

Kalaburagi News: ಜನರ ಸಹಕಾರದಿಂದ ಆಳಂದ ಸೌಂದರ್ಯೀಕರಣಕ್ಕೆ ಹೊಸ ಮೆರುಗು: ಎಸಿ ಸಾಹಿತ್ಯ ಆಲದಕಟ್ಟಿ

ಸಾರ್ವಜನಿಕರಿಗೆ ಖಡಕ್ ಎಚ್ಚರಿಕೆ

ಹೊಸ ವರ್ಷದ ಆಚರಣೆಯ ನೆಪದಲ್ಲಿ ಕಾನೂನು ಮೀರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ. ಮದ್ಯ ಸೇವಿಸಿ ವಾಹನ ಚಾಲನೆ ಮಾಡುವುದು ಮತ್ತು ರಸ್ತೆಗಳಲ್ಲಿ ಅಪಾಯಕಾರಿ ವೀಲಿಂಗ್ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ರಸ್ತೆ ಬದಿಗಳಲ್ಲಿ ಮದ್ಯ ಸೇವನೆ ಮಾಡುವುದು ಅಥವಾ ಮಾದಕ ವಸ್ತುಗಳ ಬಳಕೆ ಕಂಡುಬಂದಲ್ಲಿ ತಕ್ಷಣವೇ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.‌ ಸಾರ್ವಜನಿಕರು ಸಂಭ್ರಮಾಚರಣೆಯನ್ನು ನಿಯಮಗಳ ಚೌಕಟ್ಟಿನಲ್ಲಿ ಆಚರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಮನವಿ ಮಾಡಲಾಗಿದೆ.