Kalaburagi Rains: ಯಡ್ರಾಮಿಯಲ್ಲಿ ಮಳೆಗೆ ಗೋಡೆ ಕುಸಿದು ಬಾಲಕಿ ಸಾವು: ನಾಲ್ವರು ಮಕ್ಕಳಿಗೆ ಗಂಭೀರ ಗಾಯ
Yedrami News: ಕಲಬುರಗಿ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಭಾನುವಾರ ತಡರಾತ್ರಿ 2.30ರ ಸುಮಾರಿಗೆ ಹಳೆಯ ಮನೆಗೋಡೆ ಕುಸಿದ ಹಿನ್ನೆಲೆಯಲ್ಲಿ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಮೃತಳ ತಂದೆ-ತಾಯಿ ಸಂಘದ ಸಾಲ ತೀರಿಸಲು ಹಣ ಒದಗಿಸಲು ಬೇರೆ ಊರಿಗೆ ತೆರಳಿದ್ದ ಸಂದರ್ಭದಲ್ಲಿಯೇ ಈ ದುರಂತ ಸಂಭವಿಸಿದೆ.

-

ಕಲಬುರಗಿ: ನಿರಂತರ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯ (Kalaburagi Rains) ಹಲವೆಡೆ ಅವಘಡಗಳು ಸಂಭವಿಸುತ್ತಿವೆ. ಯಡ್ರಾಮಿ ಪಟ್ಟಣದಲ್ಲಿ ಭಾನುವಾರ ತಡರಾತ್ರಿ 2.30ರ ಸುಮಾರಿಗೆ ಹಳೆಯ ಮನೆಗೋಡೆ ಕುಸಿದ ಪರಿಣಾಮ 17 ವರ್ಷದ ಸಾನಿಯಾ ಸೈಪನಸಾಬ್ ತಾಂಬೋಳಿ ದುರ್ಮರಣ ಹೊಂದಿದ್ದಾಳೆ.
ಗಂಭೀರ ಗಾಯಗೊಂಡಿದ್ದ ಬಾಲಕಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ. ಈಕೆಯ ಸಹೋದರ-ಸಹೋದರಿಯರಾದ ಮಹಿಬೂಬ್ ತಾಂಬೋಳಿ, ನಿಶಾದ್ ತಾಂಬೋಳಿ, ಆಯಿಷಾ ತಾಂಬೋಳಿ ಮತ್ತು ರಮಜಾನಬಿ ತಾಂಬೋಳಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತಳ ತಂದೆ-ತಾಯಿ ಸಂಘದ ಸಾಲ ತೀರಿಸಲು ಹಣ ಒದಗಿಸಲು ಬೇರೆ ಊರಿಗೆ ತೆರಳಿದ್ದ ಸಂದರ್ಭದಲ್ಲಿಯೇ ಈ ದುರಂತ ಸಂಭವಿಸಿದ್ದು, ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಮಳೆಯಿಂದ ಹಳೆಯ ಕಟ್ಟಡಗಳು ಅಪಾಯಕರ ಸ್ಥಿತಿಗೆ ತಲುಪಿರುವ ಹಿನ್ನೆಲೆಯಲ್ಲಿ ಪಟ್ಟಣದ ಜನರಲ್ಲಿ ಆತಂಕ ವ್ಯಕ್ತವಾಗಿದೆ.
ಈ ಸುದ್ದಿಯನ್ನೂ ಓದಿ | Karnataka Weather: ಇಂದಿನ ಹವಾಮಾನ; ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ!
ನೆಲಮಂಗಲದಲ್ಲಿ 2ನೇ ಮಹಡಿಯಿಂದ ಬಿದ್ದು ಕಾರ್ಮಿಕ ಸಾವು
ಬೆಂಗಳೂರು: 2ನೇ ಮಹಡಿಯಿಂದ ಬಿದ್ದು ಕಾರ್ಮಿಕ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಗೆಜ್ಜೆಗದಹಳ್ಳಿಯಲ್ಲಿ ನಡೆದಿದೆ. ನಿರ್ಮಾಣ ಹಂತದ ಕಟ್ಟಡದಿಂದ ಆಯತಪ್ಪಿ ಬಿದ್ದು ಕಾರ್ಮಿಕ ಸಾವನ್ನಪ್ಪಿದ್ದಾನೆ.
ಮೃತ ಕಾರ್ಮಿಕನನ್ನು ಯಾದಗಿರಿ ಜಿಲ್ಲೆಯ ಗೋಪಾಲಪುರ ಗ್ರಾಮದ ಬೀರಪ್ಪ (38) ಎಂದು ತಿಳಿದುಬಂದಿದೆ. ಕಳೆದ ಎಂಟು ವರ್ಷಗಳಿಂದ ಬೀರಪ್ಪ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಇದೀಗ ಎರಡನೇ ಮಹಡಿಯಿಂದ ಆಯತಪ್ಪಿ ಬಿದ್ದು ಬೀರಪ್ಪ ಸಾವನಪ್ಪಿದ್ದಾನೆ. ಘಟನೆ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.