ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kalaburagi Murder: ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಕೊಲೆ

Kalaburagi News: ಕಲಬುರಗಿ ನಗರದ ಮಿಲ್ಲತ್ ನಗರ ಬಡಾವಣೆಯಲ್ಲಿ ಘಟನೆ ನಡೆದಿದೆ. ಹಳೇ ವೈಷಮ್ಯದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ಪರಿಶೀಲಿಸಿದ್ದು, ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯ ಬರ್ಬರ ಕೊಲೆ

-

Prabhakara R Prabhakara R Sep 7, 2025 2:00 PM

ಕಲಬುರಗಿ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ (Kalaburagi Murder) ನಗರದ ಮಿಲ್ಲತ್ ನಗರ ಬಡಾವಣೆಯಲ್ಲಿ ನಡೆದಿದೆ. ಬಿಲಾಲ್ ಅಹ್ಮದ್ (50) ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯದಿಂದ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಭೇಟಿ ಪರಿಶೀಲಿಸಿದ್ದು, ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ ವಿಸರ್ಜನೆ ವೇಳೆ ವ್ಯಕ್ತಿಗೆ ಚಾಕು ಇರಿತ; ಗಂಭೀರ ಗಾಯ

ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಅಹಿತಕರ ಘಟನೆ ನಡೆದಿದ್ದು ಇಡೀ (Stabbed Case) ಹುಬ್ಬಳ್ಳಿ ನಗರವನ್ನೇ ಬೆಚ್ಚಿ ಬೀಳಿಸಿದೆ. ಹುಬ್ಬಳ್ಳಿಯ ಕೊಪ್ಪೀಕರ ರಸ್ತೆಯಲ್ಲಿ ನಿನ್ನೆ ರಾತ್ರಿ ಒಂದು ಘಟನೆ ನಡೆದಿದ್ದು ಪ್ರತಾಪ್ ಅಲಿಯಾಸ್ ಚೇತನ ಗೌಡರ (32) ಗೆ ಚಾಕು ಇರಿಲಾಗಿದೆ. ಹುಬ್ಬಳ್ಳಿ ತಾಲೂಕಿನ ಬಿಡನಾಳ ಮಾರುತಿ ನಗರದ ನಿವಾಸಿ ಪ್ರತಾಪ್ ಗೌಡ ಎಂದು ತಿಳಿದು ಬಂದಿದ್ದು, ಸೋನಿಯಾ ಗಾಂಧಿನಗರದ ಶಿರಿ ಹಾಗೂ ಇನ್ನಿಬ್ಬರಿಂದ ಕೃತ್ಯ ಎಸಗಿರುವ ಆರೋಪ ಕೇಳಿ ಬಂದಿದೆ.

ಗಣೇಶ ಮೆರವಣಿಗೆಯಲ್ಲಿ ಭಾಗಿಯಾಗಿದ್ದ ಪ್ರತಾಪ್ ಗೆ ಚಾಕು ಇರಿದಿದ್ದಾರೆ. ಮೂತ್ರ ವಿಸರ್ಜನೆಗೆ ಎಂದು ಹೋಗುತ್ತಿದ್ದಾಗ ಏಕಾಏಕಿ ಚಾಕು ಇರಿಯಲಾಗಿದೆ. ಟ್ರಾನ್ಸ್ಪೋರ್ಟ್ ಕಂಪನಿ ಒಂದರಲ್ಲಿ ಪ್ರತಾಪ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಕಳೆದ ಒಂದು ತಿಂಗಳ ಹಿಂದೆ ಅಷ್ಟೇ ಪ್ರತಾಪ್ ಮದುವೆಯಾಗಿದ್ದಾನೆ. ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರತಾಪ್ ಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದಾರೆ ಹುಬ್ಬಳ್ಳಿಯ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ಸುದ್ದಿಯನ್ನೂ ಓದಿ | Road Accident: ಲಾರಿ, ಕಾರು, ಮೊಪೆಡ್ ಮಧ್ಯ ಸರಣಿ ಅಪಘಾತ : ನಾಲ್ವರು ಬಾಲಕರು ಸಾವು

ಹುಬ್ಬಳ್ಳಿಯ ಗಣೇಶ ವಿಸರ್ಜನೆ ಸಾಕಷ್ಟು ಇತಿಹಾಸ ಹೊಂದಿದೆ. ಮೆರವಣಿಗೆಯಲ್ಲಿ ಸುಮಾರು 4 ಲಕ್ಷ ಜನ ಸೇರಿದ್ದರು. ಇದೇ ಸಮಯದಲ್ಲಿಯೇ ಯುವಕನಿಗೆ ಚಾಕು ಇರಿಯಲಾಗಿದೆ. ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.