ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Kalaburagi News: ಕಲಬುರಗಿಯಲ್ಲಿ ತಪ್ಪಿದ ಭಾರಿ ದುರಂತ; ತಾಂತ್ರಿಕ ದೋಷದಿಂದ ತೊಗರಿ ಹೊಲದಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ!

Plane emergency landing in Kalaburagi: ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಮಾಹಿತಿ ತಿಳಿಯುತ್ತಿದ್ದಂತೆ ಕಲಬುರಗಿಯ ಮಾಡಬೂಳ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿಗೂ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ.

ತಾಂತ್ರಿಕ ದೋಷ: ರೈತರ ಜಮೀನಿನಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ

-

Prabhakara R
Prabhakara R Oct 6, 2026 7:50 PM

ಕಲಬುರಗಿ: ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ವಿಮಾನವೊಂದು ರೈತರ ಜಮೀನಿನಲ್ಲಿರುವ ತೊಗರಿ ಹೊಲದಲ್ಲಿ ತುರ್ತು ಭೂಸ್ಪರ್ಶ (Plane emergency landing) ಮಾಡಿದ್ದು, ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಅಪಾಯದಿಂದ ಪಾರಾದ ಘಟನೆ ಮಂಗಳವಾರ ಕಲಬುರಗಿ ವಿಮಾನ ನಿಲ್ದಾಣ (Kalaburagi Airport) ಸಮೀಪದ ಮಾಡಬೂಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ವಿಮಾನವನ್ನು ಸುರಕ್ಷಿತವಾಗಿ ತೊಗರಿ ಹೊಲದಲ್ಲಿ ಇಳಿಸಿದ್ದಾರೆ. ಇದರಿಂದ ಸಂಭವಿಸಬಹುದಾಗಿದ್ದ ಭಾರಿ ದುರಂತ ತಪ್ಪಿದೆ. ಘಟನೆಯಲ್ಲಿ ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿಗೂ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ.

Vande Bharat Train: ಕಲಬುರಗಿಗೆ ಬೆಂಗಳೂರು-ಮುಂಬೈ ಸಂಚಾರ ಸುಗಮ: ರಾಜ್ಯದಲ್ಲಿ ಕಲಬುರಗಿ, ರಾಯಚೂರಲ್ಲಿ ನಿಲುಗಡೆ

ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಮಾಹಿತಿ ತಿಳಿಯುತ್ತಿದ್ದಂತೆ ಮಾಡಬೂಳ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ವಿಮಾನದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷವೇ ಘಟನೆಗೆ ಕಾರಣವಾಗಿರುವ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ವಿಮಾನ ನಿಲ್ದಾಣದ ಸಮೀಪವೇ ಘಟನೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.