ಕಲಬುರಗಿಯಲ್ಲಿ ಸಿಸಿ ರಸ್ತೆ ಶಂಕುಸ್ಥಾಪನೆ ವೇಳೆ ಹೈಡ್ರಾಮಾ; ಶಾಸಕ ಅಲ್ಲಮಪ್ರಭು ಪಾಟೀಲ್- ಬಿಜೆಪಿ ಮುಖಂಡರ ನಡುವೆ ವಾಕ್ಸಮರ
ಬಸವ ಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ ಅವರ ಸಹೋದರ ಹಾಗೂ ಬಿಜೆಪಿ ಮುಖಂಡ ರೇಣುಕಾಚಾರ್ಯ ಅವರು ಶಾಸಕ ಅಲ್ಲಮಪ್ರಭು ಪಾಟೀಲ್ ವಿರುದ್ಧ ನೇರ ವಾಗ್ದಾಳಿ ನಡೆಸುವ ಮೂಲಕ ಅಭಿವೃದ್ಧಿ ಕಾರ್ಯಗಳ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲಬುರಗಿಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್ ಹಾಗೂ ಬಿಜೆಪಿ ಮುಖಂಡರ ನಡುವೆ ವಾಗ್ವಾದ. -
ಕಲಬುರಗಿ: ನಗರದ ಸಾವಿತ್ರಿಬಾಯಿ ಫುಲೆ ಬಡಾವಣೆಯಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಯ ಶಂಕುಸ್ಥಾಪನೆ ನೆರವೇರಿಸುವ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್ ಹಾಗೂ ಬಿಜೆಪಿ ಮುಖಂಡರ ನಡುವೆ ತೀವ್ರ ಮಾತಿನ ಚಕಮಕಿ ನಡೆದು, ಕೆಲಕಾಲ ಹೈಡ್ರಾಮಾ ಸೃಷ್ಟಿಯಾಯಿತು.
ಬಸವ ಕಲ್ಯಾಣದ ಬಿಜೆಪಿ ಶಾಸಕ ಶರಣು ಸಲಗಾರ ಅವರ ಸಹೋದರ ಹಾಗೂ ಬಿಜೆಪಿ ಮುಖಂಡ ರೇಣುಕಾಚಾರ್ಯ ಅವರು ಶಾಸಕರ ವಿರುದ್ಧ ನೇರ ವಾಗ್ದಾಳಿ ನಡೆಸುವ ಮೂಲಕ ಅಭಿವೃದ್ಧಿ ಕಾರ್ಯಗಳ ಕುರಿತು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸಾವಿತ್ರಿಬಾಯಿ ಫುಲೆ ಬಡಾವಣೆಯಲ್ಲಿ ಸಿಸಿ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಲು ಶಾಸಕ ಅಲ್ಲಮಪ್ರಭು ಪಾಟೀಲ್ ಆಗಮಿಸಿದ್ದರು. ಈ ವೇಳೆ ಹಿರಾಪುರ ಬಡಾವಣೆಯ ಮೂರು ರಸ್ತೆಗಳನ್ನು ನಿರ್ಮಾಣ ಮಾಡಬೇಕು ಎಂದು ಸ್ಥಳೀಯರು ಹಾಗೂ ಬಿಜೆಪಿ ಮುಖಂಡರು ಬೇಡಿಕೆ ಇಟ್ಟರು. ಆದರೆ, ಪ್ರಸ್ತುತ ಇರುವ ಅನುದಾನದಲ್ಲಿ ಒಂದು ರಸ್ತೆಯ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು, ಉಳಿದ ರಸ್ತೆಗಳನ್ನು ಅನುದಾನ ಬಂದ ನಂತರ ನಿರ್ಮಿಸುವುದಾಗಿ ಶಾಸಕರು ಭರವಸೆ ನೀಡಿದರು.

ಶಾಸಕರ ಹೇಳಿಕೆಯಿಂದ ಅಸಮಾಧಾನಗೊಂಡ ರೇಣುಕಾಚಾರ್ಯ, ನಿಮ್ಮ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಗ್ಯಾರಂಟಿ ಯೋಜನೆಗಳಿಗೆ ಹಣ ಸಾಲುತ್ತಿಲ್ಲ ಎಂದು ನೀವೇ ಹೇಳುತ್ತಿದ್ದೀರಿ. ರಾಜ್ಯ ಸರ್ಕಾರದ ವೈಫಲ್ಯದಿಂದಾಗಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಕಿಡಿಕಾರಿದರು.
ಬಾಗಲಕೋಟೆ ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿಗೆ ಡಿಕೆಶಿಯಿಂದ ಬಿ ಫಾರಂ
ಇದರಿಂದ ಶಾಸಕರು ಹಾಗೂ ಬಿಜೆಪಿ ಮುಖಂಡರ ಬೆಂಬಲಿಗರ ನಡುವೆ ಕೆಲಕಾಲ ವಾಗ್ವಾದ ಏರ್ಪಟ್ಟು ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.