ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Kalaburagi News: ಮದುವೆ ಬಳಿಕ ಗಂಡನೊಂದಿಗೆ ಹಳ್ಳಿಯಲ್ಲಿ ನೆಲೆಸಲು ಇಷ್ಟವಿಲ್ಲದೆ ನವವಿವಾಹಿತೆ ಆತ್ಮಹತ್ಯೆ

ಕಲಬುರಗಿ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮದುವೆಯ ನಂತರ ಗಂಡನೊಂದಿಗೆ ಹಳ್ಳಿಯಲ್ಲಿ ವಾಸಿಸುವುದಕ್ಕೆ ಯುವತಿಗೆ ಇಷ್ಟವಿರಲಿಲ್ಲ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ಶಂಕೆ ವ್ಯಕ್ತವಾಗಿದೆ.

ಗಂಡನೊಂದಿಗೆ ಹಳ್ಳಿಯಲ್ಲಿ ನೆಲೆಸಲು ಇಷ್ಟವಿಲ್ಲದೆ ನವವಿವಾಹಿತೆ ಆತ್ಮಹತ್ಯೆ

ಮೃತ ನವವಿವಾಹಿತೆ ಅನಸೂಯಾ. -

Profile
Siddalinga Swamy Jan 23, 2026 3:06 PM

ಕಲಬುರಗಿ, ಜ.23: ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ
(Self Harming) ಮಾಡಿಕೊಂಡಿರುವ ಘಟನೆ ನಗರದ (Kalaburagi News) ಸಿದ್ದೇಶ್ವರ ಕಾಲೋನಿಯಲ್ಲಿ ನಡೆದಿದೆ. ಮೃತಳನ್ನು ಅನಸೂಯಾ ಅವಿನಾಶ್ ಆಕಡೆ (26) ಎಂದು ಗುರುತಿಸಲಾಗಿದೆ. ಅನಸೂಯಾ ತನ್ನ ಅತ್ತೆ ಮಗ ಅವಿನಾಶ್ ಅವರನ್ನು ಪ್ರೀತಿಸಿ, ಎರಡು ತಿಂಗಳ ಹಿಂದೆ ಕುಟುಂಬಸ್ಥರ ಸಮ್ಮುಖದಲ್ಲಿ ವಿವಾಹವಾಗಿದ್ದರು.

ಮದುವೆಯ ನಂತರ ಗಂಡನೊಂದಿಗೆ ಹಳ್ಳಿಯಲ್ಲಿ ವಾಸಿಸುವುದಕ್ಕೆ ಅನಸೂಯಾಗೆ ಇಷ್ಟವಿರಲಿಲ್ಲ. ಆಕೆಯ ಮೂವರು ಸಹೋದರಿಯರು ಮದುವೆ ಬಳಿಕ ಬೆಂಗಳೂರು ಹಾಗೂ ಮುಂಬೈ ಮುಂತಾದ ಮಹಾನಗರಗಳಲ್ಲಿ ವಾಸವಾಗಿದ್ದರೆ, ತಾನು ಚಿಕ್ಕಹಳ್ಳಿಯಲ್ಲಿ ಜೀವನ ನಡೆಸಬೇಕಾಗಿದೆಯಲ್ಲ ಎಂದು ಬೇಸರಗೊಂಡಿದ್ದಳು ಎನ್ನಲಾಗಿದೆ.

ಹಳ್ಳಿಯಲ್ಲಿ ಇರಲು ಇಷ್ಟವಿಲ್ಲದೆ ಯುವತಿ ಮಾನಸಿಕವಾಗಿ ನೊಂದಿದ್ದಳು. ಈ ಒತ್ತಡದಿಂದಲೇ ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಬಳಿಕ ಸಾವಿನ ನಿಖರ ಕಾರಣ ತಿಳಿದುಬರಲಿದೆ.

ಮಗಳು ಪ್ರಿಯಕರನೊಟ್ಟಿಗೆ ಎಸ್ಕೇಪ್‌; ಇತ್ತ ಪತಿಗೇ ಚಾಕು ಇರಿದು ಕೊಲೆ ಮಾಡಿದ ಪತ್ನಿ

ಬೆಂಗಳೂರು: ಮಗಳು ಪ್ರಿಯಕರನ ಜತೆ ಓಡಿ ಹೋದ ವಿಚಾರವಾಗಿ ದಿನೇ ದಿನೇ ಕಿರುಕುಳ ನೀಡುತ್ತಿದ್ದ ಹಿನ್ನೆಲೆ ಆಕ್ರೋಶಕೊಂಡ ಪತ್ನಿಯು ಪತಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವುದು ಬೆಂಗಳೂರಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಮೃತನನ್ನು ಮುರುಗೇಶ್​​ ಎಂದು ಗುರುತಿಸಲಾಗಿದೆ. ಕೊಲೆ ಪ್ರಕರಣ ಸಂಬಂಧ ಆರೋಪಿ ಪತ್ನಿ ಲಕ್ಷ್ಮೀಯನ್ನು ಪೊಲೀಸರು ಬಂಧಿಸಿದ್ದಾರೆ.

ಪತ್ನಿ ಕತ್ತು ಹಿಸುಕಿ ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದ ಪತಿರಾಯ ಅರೆಸ್ಟ್‌

ಮುರುಗೇಶ್ ಮತ್ತು ಲಕ್ಷ್ಮೀ ದಂಪತಿಗೆ ಮೂವರು ಹೆಣ್ಣುಮಕ್ಕಳಿದ್ದರು. ಈ ಪೈಕಿ ಮೊದಲ ಮಗಳಿಗೆ ಮದುವೆಯಾಗಿತ್ತು. ಎರಡನೇ ಮಗಳು ಪ್ರೀತಿಸಿದ ಯುವಕನ ಜತೆ ಓಡಿಹೋಗಿದ್ದಾಳೆ. ಈ ವಿಚಾರ ದಂಪತಿ ನಡುವೆ ಜಗಳಕ್ಕೆ ಕಾರಣವಾಗುತ್ತಿತ್ತು. ಪತಿಯ ಕಿರುಕುಳದಿಂದ ತೀವ್ರವಾಗಿ ನೊಂದಿದ್ದ ಲಕ್ಷ್ಮೀ ಚಾಕುವಿನಿಂದ ಮುರುಗೇಶ್​​ ಎದೆಗೆ ಇರಿದಿದ್ದು, ತೀವ್ರ ರಕ್ತಸ್ರಾವದಿಂದ ಮುರುಗೇಶ್ ಮೃತಪಟ್ಟಿದ್ದಾನೆ. ಕೊಲೆ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಶುರು ಮಾಡಿದ್ದಾರೆ.