ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kalaburagi News: ಜನರ ಸಹಕಾರದಿಂದ ಆಳಂದ ಸೌಂದರ್ಯೀಕರಣಕ್ಕೆ ಹೊಸ ಮೆರುಗು: ಎಸಿ ಸಾಹಿತ್ಯ ಆಲದಕಟ್ಟಿ

ಪುರಸಭೆ ಆಡಳಿತಾಧಿಕಾರಿ ಹಾಗೂ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ಆಳಂದ ಪಟ್ಟಣದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯವನ್ನು ಶುಕ್ರವಾರ ಸಂಜೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಕಾಮಗಾರಿ ಸ್ಥಳ ವೀಕ್ಷಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಕುರಿತ ವಿವರ ಇಲ್ಲಿದೆ.

ಆಳಂದ ಪಟ್ಟಣದ ಜನತೆ ತೋರುತ್ತಿರುವ ಸಹಕಾರ ಶ್ಲಾಘನೀಯ: ಸಾಹಿತ್ಯ ಆಲದಕಟ್ಟಿ

ಆಳಂದ ಪಟ್ಟಣದಲ್ಲಿ ರಸ್ತೆ ಕಾಮಗಾರಿ ವೀಕ್ಷಿಸಿದ ಎಸಿ ಸಾಹಿತ್ಯ ಆಲದಕಟ್ಟಿ. -

Profile
Siddalinga Swamy Dec 26, 2025 9:14 PM

ಆಳಂದ, ಡಿ.26: ಯಾವುದೇ ನಗರ ಅಥವಾ ಪಟ್ಟಣ ಅಭಿವೃದ್ಧಿ ಹೊಂದಲು ರಸ್ತೆ ಅಗಲೀಕರಣ ಅತ್ಯಗತ್ಯ. ಈ ನಿಟ್ಟಿನಲ್ಲಿ ಆಳಂದ ಪಟ್ಟಣದ ಜನತೆ ತೋರುತ್ತಿರುವ ಸಹಕಾರ ಶ್ಲಾಘನೀಯ ಎಂದು ಪುರಸಭೆ ಆಡಳಿತಾಧಿಕಾರಿ ಹಾಗೂ ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ ಹೇಳಿದರು. ಕಲಬುರಗಿ ಜಿಲ್ಲೆಯ (Kalaburagi News) ಆಳಂದ ಪಟ್ಟಣದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯವನ್ನು ಶುಕ್ರವಾರ ಸಂಜೆ ದಿಢೀರ್ ಭೇಟಿ ನೀಡಿ ಪರಿಶೀಲಿಸಿದ ಅವರು, ಕಾಮಗಾರಿ ಸ್ಥಳ ವೀಕ್ಷಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಸಾಮಾನ್ಯವಾಗಿ ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಪೊಲೀಸ್ ಬಲದ ಅವಶ್ಯಕತೆ ಇರುತ್ತದೆ. ಆದರೆ, ಆಳಂದದಲ್ಲಿ ಕಟ್ಟಡ ಮಾಲೀಕರು ಮತ್ತು ವ್ಯಾಪಾರಸ್ಥರು ತಾವಾಗಿಯೇ ಮುಂದೆ ಬಂದು ಸಹಕರಿಸುತ್ತಿರುವುದು ಪಟ್ಟಣದ ಪ್ರಗತಿಗೆ ಸಾಕ್ಷಿಯಾಗಿದೆ. ಹಳೆ ತಹಸೀಲ್ದಾರ್ ಕಚೇರಿಯಿಂದ ದರ್ಗಾ ಬೇಸ್ ವರೆಗಿನ ರಸ್ತೆ, ಚರಂಡಿ ಹಾಗೂ ವಿದ್ಯುತ್ ದೀಪಗಳ ಅಳವಡಿಕೆ ಕಾಮಗಾರಿ ಅತ್ಯಂತ ಗುಣಮಟ್ಟದಿಂದ ಕೂಡಿರಬೇಕು. ಕಳಪೆ ಕಾಮಗಾರಿ ಕಂಡುಬಂದರೆ ಗುತ್ತಿಗೆದಾರರು ಅಥವಾ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೆಲವರ ಮನೆಗಳಲ್ಲಿ ಮದುವೆ ಹಾಗೂ ಇತರ ಸಮಾರಂಭಗಳಿರುವ ಬಗ್ಗೆ ಮನವಿಗಳು ಬಂದಿವೆ. ಅಂತಹವರಿಗೆ ಮಾನವೀಯ ನೆಲೆಯಲ್ಲಿ ಕಾಲಾವಕಾಶ ನೀಡಲಾಗುವುದು. ಇನ್ನು ಅಗಲೀಕರಣದಿಂದ ಸಂತ್ರಸ್ತರಾದ ವ್ಯಾಪಾರಸ್ಥರಿಗೆ ಪುರಸಭೆಯ ಖಾಲಿ ಮಳಿಗೆಗಳಲ್ಲಿ ಅಥವಾ ತಾತ್ಕಾಲಿಕ ಶೆಡ್‌ ನಿರ್ಮಿಸಿ ವ್ಯಾಪಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು. ನ್ಯಾಯಾಲಯದ ಮೊರೆ ಹೋದವರು ನಮ್ಮ ಗಮನಕ್ಕೆ ತಂದರೆ ನಿಯಮಾನುಸಾರ ಸಿಗಬೇಕಾದ ಪರಿಹಾರ ಕೊಡಿಸಲು ಕ್ರಮ ವಹಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ಅಣ್ಣಾರಾವ ಪಾಟೀಲ್, ಮುಖ್ಯಾಧಿಕಾರಿ ಸಂಗಮೇಶ ಪನಶಟ್ಟಿ, ಡಿವೈಎಸ್‌ಪಿ ತಮ್ಮರಾಯ ಪಾಟೀಲ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.‌

ಅಕ್ಷರದೊಂದಿಗೆ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು: ಡಾ. ಮಹಾಂತ ಪ್ರಭು ಸ್ವಾಮೀಜಿ

ಮಾಹಿತಿ ನೀಡಲು ಹಿಂದೇಟು ಹಾಕಿದರೆ ಶಿಸ್ತು ಕ್ರಮ: ಮುಖ್ಯಾಧಿಕಾರಿಗೆ ಎಚ್ಚರಿಕೆ

ರಸ್ತೆ ಅಗಲೀಕರಣದ ಬಗ್ಗೆ ಪುರಸಭೆ ಮುಖ್ಯಾಧಿಕಾರಿಗಳು ಸರಿಯಾದ ಮಾಹಿತಿ ನೀಡುತ್ತಿಲ್ಲ ಎಂದು ಪತ್ರಕರ್ತರು ಆಕ್ಷೇಪಿಸಿದಾಗ, ಸ್ಥಳದಲ್ಲೇ ಇದ್ದ ಮುಖ್ಯಾಧಿಕಾರಿ ಸಂಗಮೇಶ ಪನಶಟ್ಟಿ ಅವರಿಗೆ ಎಸಿ ಸಾಹಿತ್ಯ ಆಲದಕಟ್ಟಿ ತಾಕೀತು ಮಾಡಿದರು. ʼಅಗಲೀಕರಣಕ್ಕೆ ಒಳಪಡುವ ಮಂದಿರ, ಮಸೀದಿ ಹಾಗೂ ಮಳಿಗೆಗಳ ಬಗ್ಗೆ ಯಾವುದೇ ಮುಚ್ಚುಮರೆಯಿಲ್ಲದೆ ಪಾರದರ್ಶಕವಾಗಿ ಮಾಹಿತಿ ನೀಡಬೇಕು. ಆಡಳಿತದಲ್ಲಿ ಗೊಂದಲಕ್ಕೆ ಆಸ್ಪದ ನೀಡಬೇಡಿ. ಒಂದು ವೇಳೆ ಮಾಹಿತಿ ನೀಡಲು ನಿರಾಕರಿಸಿದರೆ ನೇರವಾಗಿ ನನ್ನ ಗಮನಕ್ಕೆ ತನ್ನಿ ಎಂದು ಮಾಧ್ಯಮದವರಿಗೆ ತಿಳಿಸಿದರು.