ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Kalaburagi News: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಶಾಸಕರು, ಮುಖಂಡರ ಬಂಧನ

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿ, ಬಳಿಕ ಕಾಂಗ್ರೆಸ್ ಕಚೇರಿಯತ್ತ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ತಡೆದರು. ನಂತರ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿ ಪೊಲೀಸ್ ವಾಹನಗಳಲ್ಲಿ ಕರೆದೊಯ್ದರು.

ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಶಾಸಕರು, ಮುಖಂಡರ ಬಂಧನ

-

Profile
Ashok Nayak Jul 24, 2026 12:35 PM

ಕಲಬುರಗಿ: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವೇಳೆ ಬಿಜೆಪಿ ಶಾಸಕ ಡಾ.ಅವಿನಾಶ್ ಜಾಧವ್(Dr Avinash jadhav), ಮಾಜಿ ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ್(Ex MLA dattatreya Revura), ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಅಮರನಾಥ್ ಪಾಟೀಲ್, ಶರಣಪ್ಪ ತಳವಾರ ಸೇರಿದಂತೆ ಹಲವು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಸ್ಟೇಷನ್ ಬಜಾರ್ ಪೊಲೀಸರು ಶುಕ್ರವಾರ ವಶಕ್ಕೆ ಪಡೆದು ಬಂಧಿಸಿದರು.

ಇದನ್ನೂ ಓದಿ: Kalaburagi Central Jail: ಕಲಬುರಗಿ ಕೇಂದ್ರ ಕಾರಾಗೃಹದಿಂದ ಸಜಾ ಅಪರಾಧಿಗಳು ಎಸ್ಕೇಪ್ ಪ್ರಕರಣ: ಬಸ್‌ನಲ್ಲಿ ಪರಾರಿಯಾಗುತ್ತಿದ್ದ ಕೈದಿ ಹುಮನಾಬಾದ್‌ನಲ್ಲಿ ವಶಕ್ಕೆ!

ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿ, ಬಳಿಕ ಕಾಂಗ್ರೆಸ್ ಕಚೇರಿಯತ್ತ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿ ಪ್ರತಿಭಟನಾಕಾರರನ್ನು ತಡೆದರು. ನಂತರ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರನ್ನು ಬಂಧಿಸಿ ಪೊಲೀಸ್ ವಾಹನಗಳಲ್ಲಿ ಕರೆದೊಯ್ದರು.

kalaburagi 24 2

ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ತಮ್ಮ ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕಿನ ಭಾಗವಾಗಿದ್ದು, ಸರ್ಕಾರ ವಿರೋಧದ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಆರೋಪಿಸಿ ದರು.

ಪ್ರತಿಭಟನೆಯ ಹಿನ್ನೆಲೆ ಕಾಂಗ್ರೆಸ್ ಕಚೇರಿ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸ ಲಾಗಿತ್ತು. ಕೆಲಕಾಲ ಆ ಪ್ರದೇಶದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದರೂ, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಟ್ಟರು.