ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕಲಬುರಗಿಯನ್ನ ಬರಪೀಡಿತ ಜಿಲ್ಲೆಯೆಂದು ಘೋಷಿಸಲು ಸಿಎಂಗೆ ಬಿಜೆಪಿ ನಿಯೋಗ ಮನವಿ

ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಡಾ. ಬಿ.ಜಿ ಪಾಟೀಲ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು, ಜಿಲ್ಲೆಯ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿತು.

ಕೃಷಿ ಸಾಲ ಮನ್ನಾ, ಎಕರೆಗೆ 50 ಸಾವಿರ ಪರಿಹಾರಕ್ಕೆ ಆಗ್ರಹ

-

Profile
Ashok Nayak Jul 7, 2026 1:23 PM

ಕಲಬುರಗಿ: ಜಿಲ್ಲೆಯಲ್ಲಿ ಮಳೆ ಅಭಾವದಿಂದ ಉಂಟಾಗಿರುವ ಭೀಕರ ಬರಗಾಲ ಪರಿಸ್ಥಿತಿಯನ್ನು ಹಿನ್ನೆಲೆಯಾಗಿಟ್ಟುಕೊಂಡು, ಕಲಬುರಗಿಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ(Drought-hit district)ಯೆಂದು ಘೋಷಿಸಬೇಕು ಎಂದು ಆಗ್ರಹಿಸಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ನಿಯೋಗವು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(Chief Minister D K Shivkumar) ಅವರಿಗೆ ಮನವಿ ಪತ್ರ ಸಲ್ಲಿಸಿತು.

ಇದನ್ನೂ ಓದಿ: CM DK Shivakumar: ಕಾನೂನು ಚೌಕಟ್ಟಿನಲ್ಲಿ ಬರಗಾಲ ಪರಿಸ್ಥಿತಿ ಪರಾಮರ್ಶೆ, ಬರ ಪರಿಹಾರಕ್ಕೆ ಚಿಂತನೆ: ಸಿಎಂ ಡಿಕೆ ಶಿವಕುಮಾರ್ ಭರವಸೆ

ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ. ನಮೋಶಿ, ಡಾ. ಬಿ.ಜಿ ಪಾಟೀಲ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು, ಜಿಲ್ಲೆಯ ರೈತರು ಎದುರಿಸು ತ್ತಿರುವ ಜ್ವಲಂತ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿತು. ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಸಂಪೂರ್ಣ ಕುಂಠಿತಗೊಂಡಿದ್ದು, ರೈತಾಪಿ ವರ್ಗ ಕಂಗಾಲಾಗಿದೆ. ಆದ್ದರಿಂದ ರೈತರ ಕೃಷಿ ಸಾಲ ವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು ಹಾಗೂ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಪ್ರತಿ ಎಕರೆಗೆ ₹50,000 ಪರಿಹಾರ ಧನ ವಿತರಿಸಬೇಕು ಎಂದು ಒತ್ತಾಯಿಸಿತು.

ಇದೇ ವೇಳೆ ಭೀಮಾ ನದಿಯು ಸಂಪೂರ್ಣವಾಗಿ ಬತ್ತಿ ಹೋಗಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದ್ದು, ಮಹಾರಾಷ್ಟ್ರದಿಂದ ತಕ್ಷಣವೇ 5 ಟಿ.ಎಂ.ಸಿ. ನೀರನ್ನು ಬಿಡುಗಡೆ ಮಾಡಿಸಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು. ಇದರೊಂದಿಗೆ, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೊಡಗಿರುವ ತಹಸೀಲ್ದಾರರ ವರ್ಗಾವಣೆ ಯನ್ನು ತಡೆ ಹಿಡಿಯಬೇಕು ಮತ್ತು ವಾಡಿ, ಶಹಾಬಾದ್ ಸೇರಿದಂತೆ ವಿವಿಧೆಡೆ ಮಸೀದಿ ಹಾಗೂ ಕಲ್ಯಾಣ ಮಂಟಪಗಳಲ್ಲಿ ಸಾಮೂಹಿಕವಾಗಿ ಎಸ್‌ಐಆರ್ ನಡೆಸುವ ಬದಲಿಗೆ, ಬಿಎಲ್‌ಒಗಳು ಮನೆ ಮನೆಗೆ ತೆರಳಿ ಪ್ರಕ್ರಿಯೆ ನಡೆಸುವಂತೆ ಸೂಚಿಸಬೇಕೆಂದು ಕೋರಿದರು.

ಇನ್ನು ಚಿತ್ತಾಪುರ ತಾಲೂಕಿನ ಡೋಣಗಾಂವ್ ಗ್ರಾಮದ ಬಳಿ ಖಾಸಗಿ ಸಿಮೆಂಟ್ ಕಂಪನಿಯ ಗಣಿಗಾರಿಕೆ ಬ್ಲಾಸ್ಟಿಂಗ್‌ನಿಂದಾಗಿ ಕುಡಿಯುವ ನೀರು ಕಲುಷಿತಗೊಂಡು ನಾಗರಿಕರ ಆರೋಗ್ಯ ಹದಗೆಡುತ್ತಿದ್ದು, ತಕ್ಷಣವೇ ಶುದ್ಧ ನೀರು ಪೂರೈಸಲು ಅಧಿಕಾರಿಗಳಿಗೆ ಆದೇಶಿಸಬೇಕೆಂದು ನಿಯೋಗ ಮನವಿಯಲ್ಲಿ ಪ್ರಸ್ತಾಪಿಸಿತು.

ಈ ನಿಯೋಗದಲ್ಲಿ ಶರಣಪ್ಪ ತಳವಾರ ಸೇರಿ ಪಕ್ಷದ ಪದಾಧಿಕಾರಿಗಳು ಉಪಸ್ಥಿತರಿದ್ದರು.