ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Parishad Election: ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾನ ಚುರುಕು: ನಮೋಶಿ, ಮಟ್ಟೂರು ಸೇರಿ ಅಭ್ಯರ್ಥಿಗಳಿಂದ ಮತಗಟ್ಟೆ ವೀಕ್ಷಣೆ

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಆರಂಭವಾಗಿದ್ದು, ಶಿಕ್ಷಕರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಕಲಬುರಗಿ ನಗರದ ವಿವಿಧ ಮತಗಟ್ಟೆಗಳಲ್ಲಿ ಬೆಳಗ್ಗೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ನಮೋಶಿ, ಮಟ್ಟೂರು ಸೇರಿ ಅಭ್ಯರ್ಥಿಗಳಿಂದ ಮತಗಟ್ಟೆ ವೀಕ್ಷಣೆ

-

Profile
Ashok Nayak Oct 23, 2026 10:42 AM

ಕಲಬುರಗಿ: ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತದಾನ ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಆರಂಭವಾಗಿದ್ದು, ಶಿಕ್ಷಕರು ಉತ್ಸಾಹದಿಂದ ಮತ ಚಲಾಯಿಸುತ್ತಿದ್ದಾರೆ. ಕಲಬುರಗಿ ನಗರದ ವಿವಿಧ ಮತಗಟ್ಟೆಗಳಲ್ಲಿ ಬೆಳಗ್ಗೆಯಿಂದಲೇ ಮತದಾರರು ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಕಲಬುರಗಿ ನಗರದ ನೂತನ ವಿದ್ಯಾಲಯ ಸೇರಿದಂತೆ ವಿವಿಧ ಮತಗಟ್ಟೆಗಳಿಗೆ ಬಿಜೆಪಿ ಅಭ್ಯರ್ಥಿ ಶಶೀಲ್ ಗ. ನಮೋಶಿ, ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಹಾಗೂ ಪಕ್ಷೇತರ ಅಭ್ಯರ್ಥಿಗಳು ಭೇಟಿ ನೀಡಿ ಮತದಾನ ಪ್ರಕ್ರಿಯೆಯನ್ನು ವೀಕ್ಷಿಸಿದರು. ಮತಗಟ್ಟೆಗಳಲ್ಲಿ ಚುನಾವಣಾ ಸಿಬ್ಬಂದಿ ಕೈಗೊಂಡಿರುವ ವ್ಯವಸ್ಥೆಗಳ ಕುರಿತು ಪರಿಶೀಲಿಸಿದರು.

ಇದನ್ನೂ ಓದಿ: Kalaburagi News: ಮಕ್ಕಳಾಗದ ವಿಚಾರಕ್ಕೆ ಗಲಾಟೆ; ಹೆಂಡತಿಯ ಕತ್ತು ಹಿಸುಕಿ ಕೊಲೆಗೈದ ಗಂಡ!

ಮತದಾನಕ್ಕೆ ಆಗಮಿಸಿದ ಶಿಕ್ಷಕರಿಗೆ ಅಗತ್ಯ ಮಾಹಿತಿ ನೀಡಲು ವಿವಿಧ ಅಭ್ಯರ್ಥಿಗಳ ಬೆಂಬಲಿಗರು ಮತಗಟ್ಟೆಗಳ ಸಮೀಪ ಮಾಹಿತಿ ಕೇಂದ್ರಗಳನ್ನು ತೆರೆದಿದ್ದರು. ಮತದಾರರ ಹೆಸರು, ಮತಗಟ್ಟೆ ವಿವರ ಸೇರಿದಂತೆ ಅಗತ್ಯ ಮಾಹಿತಿ ಒದಗಿಸುವ ಮೂಲಕ ಅಂತಿಮ ಹಂತದ ಪ್ರಚಾರ ನಡೆಸಿದರು.

kalaburagi parishad election

ಈಶಾನ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ. ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶವಿದ್ದು, ಮತದಾರರು ನಿಗದಿತ ಅವಧಿಯೊಳಗೆ ತಮ್ಮ ಹಕ್ಕು ಚಲಾಯಿಸ‌ ಲಿದ್ದಾರೆ.

ಮತದಾನ ಪೂರ್ಣಗೊಂಡ ಬಳಿಕ ಮತಪೆಟ್ಟಿಗೆಗಳನ್ನು ಭದ್ರತಾ ವ್ಯವಸ್ಥೆಯಲ್ಲಿ ಕಲಬುರಗಿ ಗುಲ್ಬರ್ಗ ವಿಶ್ವವಿದ್ಯಾಲಯದ ಭಾಸ್ಕರ ಸಭಾಂಗಣದಲ್ಲಿ ಇರಿಸಲಾಗುವುದು. ಅ.27ರಂದು ಮತ ಎಣಿಕೆ ನಡೆಯಲಿದ್ದು, ಅಭ್ಯರ್ಥಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.