ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Balraj Guttedar: ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಎಳೆದ ಕಾಂಗ್ರೆಸ್ ಸರ್ಕಾರ: ಬಾಲರಾಜ್ ಗುತ್ತೇದಾರ

ಹಾಲಿನ ಬೆಲೆಯನ್ನು ಲೀಟರ್ಗೆ 8 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇದರ ನೈಜ ಹೊರೆ ಗ್ರಾಹಕರಿಗೆ ಇನ್ನಷ್ಟು ಹೆಚ್ಚಾಗಲಿದೆ. ಮೊಸರಿನ ದರವನ್ನೂ ಏರಿಕೆ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಬಸ್ ಪ್ರಯಾಣ ದರ ಹೆಚ್ಚಳಕ್ಕೂ ಸರ್ಕಾರ ಮುಂದಾಗಿದೆ. ಬರಗಾಲದ ಸಂಕಷ್ಟದಲ್ಲಿರುವ ಜನರ ಮೇಲೆ ಇಂತಹ ಹೊರೆ ಹಾಕುವ ಅಗತ್ಯ ವೇನಿತ್ತು

ಕಲಬುರಗಿ: ರಾಜ್ಯದ ಜನತೆಗೆ ದೀಪಾವಳಿ(Deepavali) ಹಾಗೂ ಕನ್ನಡ ರಾಜ್ಯೋತ್ಸವ(Kannada Rajyotsava)ದ ಉಡುಗೊರೆಯಾಗಿ ಹಾಲು ಮತ್ತು ಮೊಸರಿನ ಬೆಲೆ ಏರಿಕೆ(Increase in the price of milk and curd) ಜೊತೆಗೆ ಸಾರಿಗೆ ಬಸ್ ದರ ಹೆಚ್ಚು ಮಾಡುವ ಮೂಲಕ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ ಎಳೆದಿದೆ ಎಂದು ಕಲಬುರಗಿ ಜಿಲ್ಲಾ ಜೆಡಿಎಸ್(JDS) ಪಕ್ಷದ ಅಧ್ಯಕ್ಷ ಬಾಲರಾಜ್ ಗುತ್ತೇದಾರ(Balraj Guttedar) ಅವರು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಹಾಲಿನ ಬೆಲೆಯನ್ನು ಲೀಟರ್ಗೆ 8 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇದರ ನೈಜ ಹೊರೆ ಗ್ರಾಹಕರಿಗೆ ಇನ್ನಷ್ಟು ಹೆಚ್ಚಾಗಲಿದೆ. ಮೊಸರಿನ ದರವನ್ನೂ ಏರಿಕೆ ಮಾಡಲಾಗಿದೆ. ಕೆಲವೇ ದಿನಗಳಲ್ಲಿ ಬಸ್ ಪ್ರಯಾಣ ದರ ಹೆಚ್ಚಳಕ್ಕೂ ಸರ್ಕಾರ ಮುಂದಾಗಿದೆ. ಬರಗಾಲದ ಸಂಕಷ್ಟದಲ್ಲಿರುವ ಜನರ ಮೇಲೆ ಇಂತಹ ಹೊರೆ ಹಾಕುವ ಅಗತ್ಯ ವೇನಿತ್ತು ಎಂದು ಪ್ರಶ್ನಿಸಿದರು.

ಹಾಲಿನ ದರ ಹೆಚ್ಚಳದಿಂದ ರೈತರಿಗೆ ಅನುಕೂಲವಾಗುತ್ತದೆ ಎಂಬುದನ್ನು ಒಪ್ಪುತ್ತೇವೆ. ಆದರೆ ರೈತರಿಗೆ ಅನುಕೂಲ ಕಲ್ಪಿಸುವ ಹೆಸರಿನಲ್ಲಿ ಗ್ರಾಹಕರ ಮೇಲೆ ಹೊರೆ ಹಾಕುವುದು ಸರಿಯಲ್ಲ. ಹಾಲಿನ ಮೇಲಿನ ಸಹಾಯಧನವನ್ನು ಹೆಚ್ಚಿಸುವ ಮೂಲಕ ಸರ್ಕಾರವೇ ಹೆಚ್ಚುವರಿ ಹೊರೆ ಭರಿಸಬೇಕಿತ್ತು ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: Kalaburagi Breaking: ಶಂಕಿತ ಉಗ್ರನ ಸಂಪರ್ಕ ಜಾಲದ ತನಿಖೆ: ಶಂಕಿತ ಉಗ್ರನ ವಿರುದ್ಧ ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲು

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪೆಟ್ರೋಲ್, ಮದ್ಯ, ಸ್ಟಾಂಪ್ ಡ್ಯೂಟಿ, ಹಾಲು ಸೇರಿದಂತೆ ಒಂದರ ಹಿಂದೆ ಒಂದರಂತೆ ಬೆಲೆ ಏರಿಕೆ ಮಾಡಲಾಗುತ್ತಿದೆ. ಆಸ್ಪತ್ರೆಗಳಿಗೆ ಹೋದರೂ ಜನರಿಗೆ ಹೊರೆ, ಬೈಕ್ ಟ್ಯಾಕ್ಸಿ, ಪಾರ್ಕಿಂಗ್ ಎಲ್ಲದರಲ್ಲೂ ಹೆಚ್ಚುವರಿ ಹಣ ಪಾವತಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಗಾಳಿ ಒಂದನ್ನು ಬಿಟ್ಟು ಉಳಿದೆಲ್ಲದರ ಮೇಲೂ ಹೊರೆ ಹಾಕುವ ಪರಿಸ್ಥಿತಿ ಬಂದಿದೆ ಎಂದು ಟೀಕಿಸಿದರು.

ಬೆಲೆ ಏರಿಕೆಯನ್ನು ಹಿಂಪಡೆಯಬೇಕು ಹಾಗೂ ಗ್ರಾಹಕರ ಮೇಲಿನ ಹೊರೆ ತಪ್ಪಿಸಿ ಸರ್ಕಾರವೇ ಹೆಚ್ಚುವರಿ ವೆಚ್ಚ ಭರಿಸಬೇಕು. ಇಲ್ಲದಿದ್ದರೆ ಕಲಬುರಗಿ ಜಿಲ್ಲಾದ್ಯಂತ ಜೆಡಿಎಸ ವತಿಯಿಂದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ವಿಫಲ

ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಹಾಸ್ಯಾಸ್ಪದ ವಾಗಿದೆ. ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಿದ ಮುಖ್ಯಮಂತ್ರಿಗಳು ರೈತರಿಗೆ ಸಿಹಿಸುದ್ದಿ ನೀಡು ತ್ತಾರೆ ಎಂಬ ನಿರೀಕ್ಷೆಯಿತ್ತು. ಆದರೆ ಕೊನೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇವೆ ಎಂದು ಹೇಳಿ ವಾಪಸ್ಸಾಗಿದ್ದಾರೆ.

ಇಷ್ಟೊಂದು ವೇಗವಾಗಿ ದೆಹಲಿಗೆ ತೆರಳಿದವರು ರೈತರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲರಾಗಿದ್ದಾರೆ. ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವ ಬದಲು ಕೇಂದ್ರದತ್ತ ಬೆರಳು ತೋರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಹರಿಯಾಣದಲ್ಲಿ ರೈತರಿಗೆ ವಿಶೇಷ ಪ್ಯಾಕೇಜ್ ನೀಡಲಾಗುತ್ತಿದೆ. ರಾಜ್ಯದಲ್ಲಿ ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಒತ್ತಾಯಿಸಿದರು.

ನಾಲ್ಕು ಎಂ.ಎಲ್.ಸಿ ಸ್ಥಾನಗಳ ಗೆಲುವು ಕಾಂಗ್ರೆಸ್ ಗೆ ಜನರ ತೀರ್ಪು

ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಎನ್.ಡಿ.ಎ(NDA) ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಕಾಂಗ್ರೆಸ್ ಸರ್ಕಾರಕ್ಕೆ ಜನರು ನೀಡಿರುವ ತಕ್ಕ ಉತ್ತರವಾಗಿದೆ. ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯಕ್ಕೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಬೆಳಗಾವಿಯಲ್ಲಿ ಸಿಹಿಸುದ್ದಿ ನೀಡುತ್ತೇವೆ ಎಂದು ಹೇಳುವ ಕಾಂಗ್ರೆಸ್ ನಾಯಕರು ರಾಜ್ಯದ ಜನರ ಸಮಸ್ಯೆಗಳಿಗೆ ಯಾವ ಪರಿಹಾರ ನೀಡಿದ್ದಾರೆ? ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಾ ಆಡಳಿತದ ಮೂಲಭೂತ ಜವಾಬ್ದಾರಿಗಳನ್ನು ಮರೆತಿದ್ದಾರೆ ಎಂದು ಟೀಕಿಸಿದರು.