ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Dr Mallikarjuna Kharge: ಎಸ್‌ಐಆರ್‌ ವಿರುದ್ಧ ಕಾಂಗ್ರೆಸ್‌ ಹೋರಾಟ ತೀವ್ರ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆಗೆ ಖರ್ಗೆ ಆಗ್ರಹ

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಫಾರಂ-6 ಮತ್ತು ಫಾರಂ-7 ಮೂಲಕ ನಡೆಯುವ ಪ್ರಕ್ರಿಯೆ ಗಳನ್ನು ಚುನಾವಣಾ ಆಯೋಗ(Election Commision) ಸೂಕ್ತವಾಗಿ ಪರಿಶೀಲಿಸಬೇಕು. ಹೆಸರು ಕೈ ಬಿಡುವ ಮುನ್ನ ಸಂಬಂಧಪಟ್ಟವರಿಗೆ ಅವಕಾಶ ಕಲ್ಪಿಸುವುದು ಸೇರಿದಂತೆ ಎಲ್ಲ ಹಂತದಲ್ಲೂ ನಿಯಮಬದ್ಧತೆ ಮತ್ತು ಪಾರದರ್ಶಕತೆ ಇರಬೇಕು ಎಂದು ಒತ್ತಾಯಿಸಿದರು.

ಕಲಬುರಗಿ: ಮತದಾರರ ಹಕ್ಕುಗಳ ರಕ್ಷಣೆ ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡುವಂತೆ ಆಗ್ರಹಿಸಿ ಕಾಂಗ್ರೆಸ್‌ ಹಂತ ಹಂತವಾಗಿ ಹೋರಾಟ ನಡೆಸಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Dr Mallikarjuna Kharge) ಹೇಳಿದರು.

ನಗರದ ಸ್ವಗೃಹದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಸಂದರ್ಭದಲ್ಲಿ ಮತದಾರರ ಹೆಸರು ಸೇರ್ಪಡೆ, ತೆಗೆದುಹಾಕುವಿಕೆ ಸೇರಿದಂತೆ ನಡೆಯುವ ಪ್ರಕ್ರಿಯೆಗಳಲ್ಲಿ ಯಾವುದೇ ಅರ್ಹ ಮತದಾರರಿಗೆ ಅನ್ಯಾಯವಾಗಬಾರದು ಎಂದರು.

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಫಾರಂ-6 ಮತ್ತು ಫಾರಂ-7 ಮೂಲಕ ನಡೆಯುವ ಪ್ರಕ್ರಿಯೆ ಗಳನ್ನು ಚುನಾವಣಾ ಆಯೋಗ(Election Commision) ಸೂಕ್ತವಾಗಿ ಪರಿಶೀಲಿಸಬೇಕು. ಹೆಸರು ಕೈಬಿಡುವ ಮುನ್ನ ಸಂಬಂಧಪಟ್ಟವರಿಗೆ ಅವಕಾಶ ಕಲ್ಪಿಸುವುದು ಸೇರಿದಂತೆ ಎಲ್ಲ ಹಂತದಲ್ಲೂ ನಿಯಮಬದ್ಧತೆ ಮತ್ತು ಪಾರದರ್ಶಕತೆ ಇರಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Mallikarjuna Kharge: ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’: ಮುನೀಂದ್ರ ಆಕ್ರೋಶ

ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಕಾನೂನು ತಿದ್ದುಪಡಿ ಹಾಗೂ ಆಯುಕ್ತರ ನೇಮಕಾತಿ ವ್ಯವಸ್ಥೆಯ ಬದಲಾವಣೆಗಳ ಬಗ್ಗೆಯೂ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಹಿಂದಿನ ನೇಮಕಾತಿ ವ್ಯವಸ್ಥೆಯನ್ನು ಮರುಸ್ಥಾಪಿಸುವಂತೆ ಆಗ್ರಹಿಸಿದರು.

ಇವಿಎಂ(EVM) ಬದಲಿಗೆ ಬ್ಯಾಲೆಟ್‌ ಪೇಪರ್‌(Ballot paper) ಮೂಲಕ ಚುನಾವಣೆ ನಡೆಸಬೇಕು ಎಂಬುದು ಕಾಂಗ್ರೆಸ್‌ನ ನಿಲುವಾಗಿದೆ. ಈ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ಚರ್ಚಿಸಿ ಮುಂದಿನ ಹೋರಾಟದ ರೂಪುರೇಷೆ ಸಿದ್ಧಪಡಿಸಲಾಗುವುದು ಎಂದರು.

ಅ.2ರಿಂದ ಆರಂಭಿಸಿರುವ ಹೋರಾಟವನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಅಗತ್ಯವಿದ್ದಲ್ಲಿ ಕಾನೂನು ಹೋರಾಟಕ್ಕೂ ಪಕ್ಷ ಮುಂದಾಗಲಿದೆ. ಮತದಾನದ ಹಕ್ಕಿಗೆ ಧಕ್ಕೆಯಾಗದಂತೆ ಚುನಾವಣಾ ವ್ಯವಸ್ಥೆ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

6 ಹಂತದ ಹೋರಾಟ:

ಅ.2ರಿಂದ ಪ್ರತಿಭಟನೆ ಆರಂಭ

ರಾಜ್ಯವ್ಯಾಪಿ ಹೋರಾಟ

ಎಸ್‌ಐಆರ್‌ಗೆ ವಿರೋಧ

ಮತದಾರರ ಹಕ್ಕು ರಕ್ಷಣೆ

ಕಾನೂನು ಹೋರಾಟ ಬ್ಯಾಲೆಟ್‌ ಪೇಪರ್‌ಗೆ ಒತ್ತಾಯ