ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Accident at Kalaburagi: ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ಐವರ ಭೀಕರ ದುರ್ಮರಣ

ಮೃತರೆಲ್ಲರೂ ಕ್ರೂಸರ್ ವಾಹನದಲ್ಲಿ ವೈಯಕ್ತಿಕ ಕೆಲಸದ ನಿಮಿತ್ತ ಯಾದಗಿರಿಗೆ ತೆರಳಿದ್ದರು. ಕಾರ್ಯ ಕ್ರಮ ಮುಗಿಸಿಕೊಂಡು ಮರಳುತ್ತಿದ್ದಾಗ, ಶುಕ್ರವಾರ ಮಧ್ಯರಾತ್ರಿ ಸುಮಾರು 12 ಗಂಟೆಯ ಅಸುಪಾಸಿ ನಲ್ಲಿ ಲಾಡ್ಲಾಪುರ ಹತ್ತಿರ ಎದುರುಗಡೆಯಿಂದ ಬಂದ ಲಾರಿ ಇವರ ವಾಹನಕ್ಕೆ ಭೀಕರವಾಗಿ ಅಪ್ಪಳಿಸಿದೆ. ಪರಿಣಾಮ, ವಾಹನದಲ್ಲಿದ್ದ ಐವರಿಗೂ ಗಂಭೀರ ಸ್ವರೂಪದ ಗಾಯಗಳಾಗಿ, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಯಾದಗಿರಿಯಿಂದ ಕಲಬುರಗಿ ಕಡೆಗೆ ಪ್ರಯಾಣಿಸುತ್ತಿದ್ದ ಕ್ರೂಸರ್ ವಾಹನ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ದುರಂತ ಸಂಭವಿಸಿದ್ದು, ಅಪಘಾತದ ಭೀಕರತೆಗೆ ಕ್ರೂಸರ್ ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಐವರೂ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತರನ್ನು ಒಂದೇ ಕುಟುಂಬದ ತೋಲಾ ಸಾಬ್ ಕಾಶ್ವಾರ್ (27 ವರ್ಷ), ಹುಸೇನ್ ಷಾ (48 ವರ್ಷ), ಮೆಹಬೂಬ್ ಅಲಿ (45 ವರ್ಷ), ರಸೂಲ್ ಬೀ (42 ವರ್ಷ), ಫಾತಿಮಾ ಅಲಿ (38 ವರ್ಷ) ಸದಸ್ಯ ರೆಂದು ಗುರುತಿಸಲಾಗಿದೆ.

ಇದನ್ನೂ ಓದಿ: Kalaburagi News: ಕರೆಂಟ್‌ ಹರಿಸಿ ಕಾಡು ಪ್ರಾಣಿಗಳ ಬಲಿ ಪಡೆಯುತ್ತಿದ್ದ ಇಬ್ಬರ ಬಂಧನ

ಮೃತರೆಲ್ಲರೂ ಕ್ರೂಸರ್ ವಾಹನದಲ್ಲಿ ವೈಯಕ್ತಿಕ ಕೆಲಸದ ನಿಮಿತ್ತ ಯಾದಗಿರಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಮರಳುತ್ತಿದ್ದಾಗ, ಶುಕ್ರವಾರ ಮಧ್ಯರಾತ್ರಿ ಸುಮಾರು 12 ಗಂಟೆಯ ಅಸುಪಾಸಿನಲ್ಲಿ ಲಾಡ್ಲಾಪುರ ಹತ್ತಿರ ಎದುರುಗಡೆಯಿಂದ ಬಂದ ಲಾರಿ ಇವರ ವಾಹನಕ್ಕೆ ಭೀಕರ ವಾಗಿ ಅಪ್ಪಳಿಸಿದೆ. ಪರಿಣಾಮ, ವಾಹನದಲ್ಲಿದ್ದ ಐವರಿಗೂ ಗಂಭೀರ ಸ್ವರೂಪದ ಗಾಯಗಳಾಗಿ, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Kalaburagi Accident

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನಜ್ಜುಗುಜ್ಜಾಗಿದ್ದ ವಾಹನದಿಂದ ಮೃತದೇಹ ಗಳನ್ನು ಹೊರತೆಗೆದು, ಶವಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸ ಲಾಗಿದೆ. ಅಪಘಾತದ ಬಳಿಕ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು.

ಸದ್ಯಕ್ಕೆ ಪೊಲೀಸರು ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಿ ದ್ದಾರೆ. ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.