ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Jewargi MLA Dr. Ajay Singh: ಪಕ್ಷ ನಿಷ್ಠೆಗೆ ಫಲವಾಗಿ ಡಾ.ಅಜಯಸಿಂಗ್‌ಗೆ ಸಚಿವ ಸಂಪುಟ ಪ್ರವೇಶ

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಾ. ಅಜಯಸಿಂಗ್ ಅವರು ಶಾಂತ, ಸಮತೋಲನದ ಹಾಗೂ ಅಭಿವೃದ್ಧಿ ಪರ ರಾಜಕಾರಣದ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಪಕ್ಷದ ಏಳು-ಬೀಳುಗಳ ನಡುವೆಯೂ ಕಾಂಗ್ರೆಸ್ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿದ ಅವರ ನಿಷ್ಠೆಗೆ ಇದೀಗ ಸಚಿವ ಸ್ಥಾನ ರೂಪದಲ್ಲಿ ಮನ್ನಣೆ ದೊರೆತಿದೆ ಎನ್ನಲಾಗುತ್ತಿದೆ.

ಕಲಬುರಗಿಗೆ ಮತ್ತೊಂದು ಸಚಿವ ಸ್ಥಾನ

ದೀರ್ಘಕಾಲದ ಪಕ್ಷ ನಿಷ್ಠೆ, ಜನಪರ ರಾಜಕಾರಣಕ್ಕೆ ಸಿಕ್ಕ ಮನ್ನಣೆ

ಜೇವರ್ಗಿ ಶಾಸಕನಿಗೆ ಸಚಿವ ಸ್ಥಾನ ನೀಡಿ ಕಾಂಗ್ರೆಸ್ ಹೈಕಮಾಂಡ್ ವಿಶ್ವಾಸ

ಕಲಬುರಗಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್(Chief Minister D.K. Shivakumar) ನೇತೃತ್ವದ ಕಾಂಗ್ರೆಸ್ ಸರ್ಕಾರದ ನೂತನ ಸಚಿವ ಸಂಪುಟದಲ್ಲಿ ಕಲಬುರಗಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಲಭಿಸಿದ್ದು, ಜೇವರ್ಗಿ ಶಾಸಕ ಡಾ. ಅಜಯಸಿಂಗ್(Jewargi MLA Dr. Ajay Singh) ಅವರಿಗೆ ಸಚಿವರಾಗಿ ಅವಕಾಶ ದೊರೆತಿದೆ. ಜಿಲ್ಲೆಯ ರಾಜಕೀಯ ವಲಯದಲ್ಲಿ ಈ ಬೆಳವಣಿಗೆಗೆ ಸಂತಸ ವ್ಯಕ್ತವಾಗಿದ್ದು, ಕಾಂಗ್ರೆಸ್ ಕಾರ್ಯ ಕರ್ತರು ಇದನ್ನು ಪಕ್ಷ ನಿಷ್ಠೆಗೆ ದೊರೆತ ಗೌರವ ಎಂದು ಬಣ್ಣಿಸಿದ್ದಾರೆ.

ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಡಾ. ಅಜಯಸಿಂಗ್ ಅವರು ಶಾಂತ, ಸಮತೋಲನದ ಹಾಗೂ ಅಭಿವೃದ್ಧಿ ಪರ ರಾಜಕಾರಣದ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಪಕ್ಷದ ಏಳು-ಬೀಳುಗಳ ನಡುವೆಯೂ ಕಾಂಗ್ರೆಸ್ ತತ್ವ-ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಿದ ಅವರ ನಿಷ್ಠೆಗೆ ಇದೀಗ ಸಚಿವ ಸ್ಥಾನ ರೂಪದಲ್ಲಿ ಮನ್ನಣೆ ದೊರೆತಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: Karnataka Cabinet expansion: ನಾಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಪುತ್ರರಾಗಿರುವ ಡಾ. ಅಜಯಸಿಂಗ್ ಅವರು ರಾಜಕೀಯ ಪರಂಪರೆಯನ್ನು ಕೇವಲ ಮುಂದುವರಿಸುವುದಷ್ಟೇ ಅಲ್ಲದೆ, ಜನಸಂಪರ್ಕ ಮತ್ತು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವ ಮೂಲಕ ಸ್ವತಂತ್ರ ನಾಯಕನಾಗಿ ಗುರುತಿಸಿಕೊಂಡಿ ದ್ದಾರೆ. ಆರಂಭದಲ್ಲಿ ಗುಲ್ಬರ್ಗ ದಕ್ಷಿಣ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋಲು ಕಂಡಿದ್ದರೂ, ನಂತರ ಜೇವರ್ಗಿ ಕ್ಷೇತ್ರವನ್ನು ತಮ್ಮ ರಾಜಕೀಯ ಕರ್ಮಭೂಮಿಯನ್ನಾಗಿ ಮಾಡಿಕೊಂಡು ಸತತ ಮೂರು ಬಾರಿ ಶಾಸಕರಾಗಿ ಜನರ ವಿಶ್ವಾಸ ಗಳಿಸಿದ್ದಾರೆ.

Jevarg

ವಿಧಾನಸಭೆಯಲ್ಲಿ ಪಕ್ಷದ ಮುಖ್ಯ ಸಚೇತಕರಾಗಿ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವವೂ ಅವರಿಗೆ ಇದೆ. ಆಡಳಿತಾತ್ಮಕ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಪಕ್ಷದ ನಾಯಕತ್ವದೊಂದಿಗೆ ಉತ್ತಮ ಹೊಂದಾಣಿಕೆ ಹೊಂದಿರುವ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2013ರಲ್ಲಿ ಸಚಿವ ಸ್ಥಾನದ ನಿರೀಕ್ಷೆ ಕೈತಪ್ಪಿದ್ದರೂ ಯಾವುದೇ ಅಸಮಾಧಾನ ವ್ಯಕ್ತಪಡಿಸದೆ ಪಕ್ಷ ಸಂಘಟನೆಗೆ ಶ್ರಮಿಸಿದ ಡಾ. ಅಜಯಸಿಂಗ್ ಅವರು ಸದಾ ಪಕ್ಷದೊಂದಿಗೆ ಹೆಜ್ಜೆ ಹಾಕಿದರು. ಇದೀಗ ಅವರ ತಾಳ್ಮೆ, ಪಕ್ಷ ನಿಷ್ಠೆ ಮತ್ತು ಸೇವಾ ಮನೋಭಾವಕ್ಕೆ ಪ್ರತಿಫಲವಾಗಿ ಸಚಿವ ಸ್ಥಾನ ದೊರೆತಿರು ವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಡಾ.ಅಜಯಸಿಂಗ್ ಅವರ ಸಚಿವ ಸಂಪುಟ ಪ್ರವೇಶದಿಂದ ಜೇವರ್ಗಿ ಕ್ಷೇತ್ರದ ಅಭಿವೃದ್ಧಿ ಯೋಜನೆ ಗಳಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆ ವ್ಯಕ್ತವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಸರ್ಕಾರದ ಮಟ್ಟದಲ್ಲಿ ಹೆಚ್ಚಿನ ಆದ್ಯತೆ ದೊರೆಯಲಿದೆ ಎಂಬ ಆಶಾಭಾವನೆ ಜಿಲ್ಲೆಯ ಜನರಲ್ಲಿ ಮೂಡಿದೆ.