Heart attack: ಕಲಬುರಗಿಯಲ್ಲಿ ಹೃದಯಾಘಾತದಿಂದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು!
Heart attack: ಇತ್ತೀಚೆಗೆ ಚಿಕ್ಕ ವಯಸ್ಸಿನವರಲ್ಲೂ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕಲಬುರಗಿ ಪಿಡಿಎ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ತುಮಕೂರು ಜಿಲ್ಲೆಯಲ್ಲಿ ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಬೆನ್ನಲ್ಲೇ ಈ ಘಟನೆ ನಡೆದಿದೆ.


ಕಲಬುರಗಿ: ಇತ್ತೀಚೆಗೆ ಚಿಕ್ಕ ವಯಸ್ಸಿನವರಲ್ಲೂ ಹೃದಯಾಘಾತ ಪ್ರಕರಣಗಳ (Heart attack) ಸಂಖ್ಯೆ ಹೆಚ್ಚಾಗುತ್ತಿದೆ. ತುಮಕೂರು ಜಿಲ್ಲೆಯಲ್ಲಿ ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಬೆನ್ನಲ್ಲೇ ಕಲಬುರಗಿಯಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾನೆ. ಕಲಬುರಗಿ ನಗರದ ಗಂಗಾನಗರ ನಿವಾಸಿ ರವಿಕುಮಾರ್ (19) ಮೃತ ವಿದ್ಯಾರ್ಥಿ. ಕಲಬುರಗಿ ಪಿಡಿಎ ಎಂಜಿನಿಯರಿಂಗ್ ಕಾಲೇಜಿನಲ್ಲಿ ರವಿಕುಮಾರ್ 4ನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ತಿ, ಬೆಳಗ್ಗೆ ಮನೆಯಲ್ಲಿ ಇದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾನೆ.
ಈ ಸುದ್ದಿಯನ್ನೂ ಓದಿ | Assault Case: ಕನ್ನಡದಲ್ಲಿ ಮಾತಾಡಿ ಎಂದಿದ್ದಕ್ಕೆ ಹಲ್ಲೆ ಪ್ರಕರಣ; ನಿರ್ವಾಹಕನ ಮೇಲೆಯೇ ಪೋಕ್ಸೊ ಕೇಸ್!
ತುಮಕೂರಲ್ಲಿ ಎದೆನೋವಿನಿಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಸಾವು
ತುಮಕೂರು: ಹೃದಯವೈಫಲ್ಯ (Heart Failure) ಮತ್ತಿತರ ಕಾರಣಗಳಿಂದ ತೀರಾ ಚಿಕ್ಕ ವಯಸ್ಸಿನ ಮಕ್ಕಳೂ ಕುಸಿದು ಬಿದ್ದು (children death) ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ತುಮಕೂರು (Tumkur news) ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿ (SSLC student) ಹೃದಯಾಘಾತದಿಂದ (heart attack) ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯನಹಳ್ಳಿ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಬೈರಾಪುರ ಗ್ರಾಮದ ಜಯರಾಂ ಎಂಬುವರ ಪುತ್ರ ರಾಹುಲ್ (16) ಮೃತಪಟ್ಟ ವಿದ್ಯಾರ್ಥಿ.
ರಾತ್ರಿ 9.30ರ ಸುಮಾರಿಗೆ ರಾಹುಲ್‌ಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಹುಳಿಯಾರು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಿಸದೇ ರಾಹುಲ್ ಸಾವನ್ನಪ್ಪಿದ್ದಾನೆ. ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೊಪ್ಪಳದಲ್ಲಿ ಇನ್ನೊಂದು ಶಾಕಿಂಗ್ ಘಟನೆ ಇತ್ತೀಚೆಗೆ ನಡೆದಿತ್ತು. ಅಂಗನವಾಡಿಯಲ್ಲಿ ಆಟ ಆಡುತ್ತಿದ್ದಾಗ ಕುಸಿದು ಬಿದ್ದು 5 ವರ್ಷದ ಬಾಲಕಿಯೊಬ್ಬಳು (child death) ಸಾವನ್ನಪ್ಪಿದ್ದಳು. ಈ ಘಟನೆ ಕೊಪ್ಪಳ (Koppala news) ಜಿಲ್ಲೆಯ ತಾಲೂಕಿನ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ. ಆಟವಾಡುತ್ತಿದ್ದಾಗ ಅಲಿಯಾ ಮೊಹಮ್ಮದ್ ರಿಯಾಜ್ (5) ಎನ್ನುವ ಬಾಲಕಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾಲಕಿಯನ್ನು ದೊಟಿಹಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆಸ್ಪತ್ರೆಗೆ ಸಾಗಿಸುವ ವೇಳೆಯೇ ಅಲಿಯಾ ಮೊಹಮ್ಮದ್ ರಿಯಾಜ್ ಸಾವನ್ನಪ್ಪಿದ್ದಾಳೆ. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ಇದನ್ನೂ ಓದಿ: ರೀಲ್ಸ್ ಗೀಳು ತಂದ ಆಪತ್ತು; ರೈಲು ಡಿಕ್ಕಿಯಾಗಿ ಮೂವರು ಯುವಕರ ಸಾವು
ಇತ್ತೀಚೆಗೆ ಶಿವಮೊಗ್ಗದಲ್ಲಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಕುಸಿದುಬಿದ್ದು ಸಾವನ್ನಪ್ಪಿದ್ದಳು. ಲೋ ಬಿಪಿಯಿಂದಾಗಿ ಕುಸಿದು ಬಿದ್ದು 13 ವರ್ಷದ ಬಾಲಕ ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ತರಗನಹಳ್ಳಿಯಲ್ಲಿ ನಡೆದಿದೆ. ಇನ್ನಷ್ಟು ಇಂಥ ಘಟನೆಗಳು ರಾಜ್ಯದ, ದೇಶದ ನಾನಾ ಕಡೆಗಳಲ್ಲಿ ವರದಿಯಾಗುತ್ತಿವೆ. ಇಂಥ ಆಕಸ್ಮಿಕ ಸಾವುಗಳ ಅಧ್ಯಯನಕ್ಕಾಗಿ ತಜ್ಞರ ಸಮಿತಿ ರಚಿಸಲು ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ.