ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಮ ಮಂದಿರ ವೃತ್ತದಲ್ಲಿ ರೈತರ ಆಕ್ರೋಶ, ರಸ್ತೆ ಪಕ್ಕದಲ್ಲಿ ಪ್ರತಿಭಟನೆಗೆ ಅನುವು: ಹೋರಾಟದ ಟೆಂಟ್ ತೆರವು: 9 ಜನರ ವಶಕ್ಕೆ

ಕಳೆದ ನಾಲ್ಕು ದಿನಗಳಿಂದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹಾಕಲಾಗಿದ್ದ ಹೋರಾಟದ ಟೆಂಟ್‌ ನ್ನು ಪೊಲೀಸರು ಶುಕ್ರವಾರ ರಾತ್ರಿ ತೆರವುಗೊಳಿಸಿದರು. ಇದರಿಂದ ಆಕ್ರೋಶಗೊಂಡ ರೈತರು ಪೊಲೀಸರ ಕ್ರಮವನ್ನು ಖಂಡಿಸಿದರು. ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಂತಿಯುತ ವಾಗಿ ಹೋರಾಟ ನಡೆಸುತ್ತಿದ್ದರೂ ಟೆಂಟ್ ತೆರವುಗೊಳಿಸಿ ಹೋರಾಟಗಾರರನ್ನು ವಶಕ್ಕೆ ಪಡೆದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕಲಬುರಗಿ: ನಗರದ ರಾಮ ಮಂದಿರ ವೃತ್ತದ ಬಳಿ ಕಬ್ಬಿಗೆ ಟನ್‌ಗೆ ₹5,500 ದರ ನಿಗದಿ ಹಾಗೂ ಸ್ವಾಮಿನಾಥನ್ ವರದಿ(Swaminathan Report) ಜಾರಿಗೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಹೋರಾಟದ ಟೆಂಟ್‌ನ್ನು ಪೊಲೀಸರು ತೆರವುಗೊಳಿಸಿ, ಸಿದ್ದರಾಮ ಡಣ್ಣೂರು, ಬಸವರಾಜ ಕೋರಿ, ಮಲ್ಲಿಕಾರ್ಜುನ ಸಾರವಾಡ್ ಸೇರಿದಂತೆ 9 ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Sugarcane farmers protest: ಕಬ್ಬಿಗೆ ₹5,500 ದರಕ್ಕೆ ಪಟ್ಟು; ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಕೆ: ಹೆದ್ದಾರಿ ಮೇಲೆಯೇ ಅನ್ನದಾತರ ಊಟ

ಕಳೆದ ನಾಲ್ಕು ದಿನಗಳಿಂದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಹಾಕಲಾಗಿದ್ದ ಹೋರಾಟದ ಟೆಂಟ್‌ ನ್ನು ಪೊಲೀಸರು ಶುಕ್ರವಾರ ರಾತ್ರಿ ತೆರವುಗೊಳಿಸಿದರು. ಇದರಿಂದ ಆಕ್ರೋಶಗೊಂಡ ರೈತರು ಪೊಲೀಸರ ಕ್ರಮವನ್ನು ಖಂಡಿಸಿದರು. ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಂತಿಯುತ ವಾಗಿ ಹೋರಾಟ ನಡೆಸುತ್ತಿದ್ದರೂ ಟೆಂಟ್ ತೆರವುಗೊಳಿಸಿ ಹೋರಾಟಗಾರರನ್ನು ವಶಕ್ಕೆ ಪಡೆದಿರು ವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

kalaburagi 2

ಟೆಂಟ್ ತೆರವುಗೊಳಿಸಿದ ಕ್ರಮಕ್ಕೆ ಆಕ್ರೋಶಗೊಂಡ ರೈತರು ರಾಮ ಮಂದಿರ ವೃತ್ತದ ನಡು ರಸ್ತೆ ಯಲ್ಲೇ ಮಲಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಕಬ್ಬು ಬೆಳೆಗಾರರಿಗೆ ಟನ್‌ಗೆ ₹5,500 ದರ ನಿಗದಿ ಮಾಡಬೇಕು ಹಾಗೂ ರೈತರ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ದೊರೆಯುವಂತೆ ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

kalaburagi 3

ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಕ್ರಮ ಕೈಗೊಂಡಿದ್ದು, ರಸ್ತೆ ಬದಿಯಲ್ಲಿ ಟೆಂಟ್ ಹಾಕಿಕೊಂಡು ಪ್ರತಿಭಟನೆ ಮುಂದುವರಿಸಲು ರೈತರಿಗೆ ಅವಕಾಶ ಮಾಡಿಕೊಡಲಾಯಿತು. ಟೆಂಟ್ ತೆರವು ಹಾಗೂ ಹೋರಾಟಗಾರರನ್ನು ವಶಕ್ಕೆ ಪಡೆದ ಕ್ರಮದ ವಿರುದ್ಧ ರೈತರು ಆಕ್ರೋಶ ಮುಂದುವರಿಸಿದ್ದಾರೆ.