Kalaburagi Robbery case: ಕಲಬುರಗಿಯ ಜ್ಯುವೆಲ್ಲರಿ ಶಾಪ್‌ನಲ್ಲಿ 3 ಕೆಜಿ ಚಿನ್ನಾಭರಣ ದರೋಡೆ; ಮಾಲೀಕನ ತಲೆಗೆ ಗನ್ ಇಟ್ಟು ಕೃತ್ಯ!
Kalaburagi Robbery case: ನಾಲ್ವರು ದುಷ್ಕರ್ಮಿಗಳಿಂದ ಚಿನ್ನಾಭರಣ ದರೋಡೆ ನಡೆದಿದೆ. ತಲೆಗೆ ಕ್ಯಾಪ್, ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಬಂದಿದ್ದ ಖದೀಮರು 2-3 ಕೆಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಖದೀಮರು ಚಿನ್ನದಂಗಡಿಗೆ ನುಗ್ಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.


ಕಲಬುರಗಿ: ನಗರದಲ್ಲಿ ಹಾಡಹಗಲೇ ಜ್ಯುವೆಲ್ಲರಿ ಶಾಪ್‌ನಲ್ಲಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ನಡೆದಿದೆ. ಕಲಬುರಗಿಯ ಸರ್ಫ್ ಬಜಾರ್‌ನಲ್ಲಿರುವ ಮಾಲೀಕ್ ಜ್ಯುವೆಲ್ಲರಿ ಶಾಪ್‌ನಲ್ಲಿ ದರೋಡೆ (Kalaburagi Robbery case) ನಡೆದಿದೆ. ಅಂಗಡಿ ಮಾಲೀಕನ ಕೈ ಕಾಲು ಕಟ್ಟಿ ಹಾಕಿ, ತಲೆಗೆ ಗನ್ ಇಟ್ಟು ಬೆದರಿಸಿ ದರೋಡೆ ಮಾಡಲಾಗಿದೆ.
ನಾಲ್ವರು ದುಷ್ಕರ್ಮಿಗಳಿಂದ ಚಿನ್ನಾಭರಣ ದರೋಡೆ ನಡೆದಿದೆ. ತಲೆಗೆ ಕ್ಯಾಪ್, ಮುಖಕ್ಕೆ ಮಾಸ್ಕ್ ಧರಿಸಿಕೊಂಡು ಬಂದಿದ್ದ ಖದೀಮರು 2-3 ಕೆಜಿ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ. ಶರಣಪ್ಪ ಭೇಟಿ ಪರಿಶೀಲನೆ ನಡೆಸುತ್ತಿದ್ದು, ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಖದೀಮರು ಚಿನ್ನದಂಗಡಿಗೆ ನುಗ್ಗಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಪ್ರಕರಣ ಸಂಬಂಧ ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಮಾತನಾಡಿ, ಮಾಲೀಕನ ತಲೆಗೆ ಗನ್ ಇಟ್ಟು ದರೋಡೆ ಮಾಡಿದ್ದಾರೆ. ದರೋಡೆ ಪ್ರಕರಣದ ತನಿಖೆಗೆ ಐದು ವಿಶೇಷ ತಂಡ ರಚನೆ ಮಾಡಿದ್ದೇವೆ. ಆದಷ್ಟು ಬೇಗ ದರೋಡೆಕೋರರ ಬಂಧನ ಮಾಡುತ್ತೇವೆ. ಅಂಗಡಿಯಲ್ಲಿದ್ದ 2-3 ಕೆಜಿ ಚಿನ್ನ ದರೋಡೆಯಾಗಿದೆ. ಈ ಅಂಗಡಿಯವರು ಪ್ರತಿನಿತ್ಯ 15-20 ಗ್ರಾಂ ಚಿನ್ನಾಭರಣ ಮಾರಾಟ ಮಾಡುತ್ತಿದ್ದರು ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ |
24 ಗಂಟೆಯೊಳಗೆ ಭಟ್ಕಳ ಪಟ್ಟಣ ಸ್ಫೋಟಿಸುತ್ತೇವೆ: ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ ಸಂದೇಶ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣವನ್ನು 24 ಗಂಟೆಯೊಳಗೆ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ (Bomb Threat) ಸಂದೇಶ ಕಳುಹಿಸಿರುವುದು ಕಂಡು ಬಂದಿದೆ. ಕಣ್ಣನ್ ಗುರುಸ್ವಾಮಿ ಎಂಬ ಹೆಸರಿನಲ್ಲಿ ಭಟ್ಕಳ ಶಹರ ಠಾಣೆಗೆ ಬಾಂಬ್ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಲರ್ಟ್ ಆಗಿದ್ದು, ನಗರದ ಪ್ರಮುಖ ಸ್ಥಳಗಳಲ್ಲಿ ಶ್ವಾನ ದಳ ಹಾಗೂ ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಗಿದೆ.
ಜು.10 ರ ಬೆಳಗ್ಗೆ 7:22 ಕ್ಕೆ ಎರಡು ಬಾರಿ ಇ-ಮೇಲ್ ಸಂದೇಶ ಕಳುಹಿಸಲಾಗಿದೆ. kannnannandik@gmail.com ನಿಂದ bhatkaltownkwr@ksp.gov.in ಭಟ್ಕಳ ಶಹರ ಠಾಣೆಯ ಮೇಲ್ ಐಡಿಗೆ ಸಂದೇಶ ರವಾನಿಸಲಾಗಿದೆ. ಇ-ಮೇಲ್ ಸಂದೇಶದಲ್ಲಿ ‘ವಿ ವಿಲ್ ಪ್ಲಾಂಟ್ ಬಾಂಬ್ ಇನ್ ಭಟ್ಕಳ ಟೌನ್’ ಎಂದು ಸಂದೇಶ ಕಳುಹಿಸಲಾಗಿದ್ದು, ನಂತರ ‘ಆಲ್ ದ ಬಾಂಬ್ ವಿಲ್ ಬ್ಲಾಸ್ಟ್ ಇನ್ 24 ಅವರ್ಸ್’ ಎಂದು ಸಂದೇಶ ಕಳುಹಿಸಲಾಗಿದೆ. ಈ ಕುರಿತು ಭಟ್ಕಳ ಶಹರ ಠಾಣೆಯ ಪಿಎಸ್‌ಐ ನವೀನ್ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಇಂದು ಮುಂಜಾಗ್ರತಾ ಕ್ರಮವಾಗಿ ಭಟ್ಕಳ ನಗರದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಶ್ವಾನ ದಳ ಹಾಗೂ ಜಿಲ್ಲಾ ಬಾಂಬ್ ನಿಷ್ಕ್ರಿಯ ದಳದಿಂದ ತಪಾಸಣೆ ನಡೆಸಲಾಯಿತು. ಇದಲ್ಲದೇ, ಡ್ರೋನ್ ಕ್ಯಾಮೆರಾ ಮೂಲಕವೂ ಕಣ್ಗಾವಲಿಟ್ಟು ತಪಾಸಣೆ ನಡೆಸಲಾಗಿದೆ. ಇದೇ ಮೊದಲ ಬಾರಿಗೆ ಭಟ್ಕಳ ನಗರ ಸ್ಫೋಟಿಸುವ ಸಂದೇಶ ಬಂದಿದ್ದು, ಪೊಲೀಸರು ಅಲರ್ಟ್ ಆಗಿದ್ದು, ತಪಾಸಣೆ ಕೈಗೊಂಡಿದ್ದಾರೆ.
ಈ ಸುದ್ದಿಯನ್ನೂ ಓದಿ |Viral News: ಪ್ರವಾಹದ ನೀರಿನಲ್ಲಿ ಮೊಬೈಲ್‍ಗಾಗಿ ಯುವಕನ ಗೋಳಾಟ; ವಿಡಿಯೊ ಫುಲ್ ವೈರಲ್