ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

RSS route march: ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

Home Minister Priyank Kharge: ಆರ್‌ಎಸ್‌ಎಸ್‌ಗೆ 100 ವರ್ಷದ ಇತಿಹಾಸವಿದೆ ಎಂದು ಹೇಳಿಕೊಳ್ಳುತ್ತೀರಿ. ಆದರೆ ನಿಮ್ಮ ಸಂಘಟನೆಯ ಕಾನೂನುಬದ್ಧ ದಾಖಲೆಗಳು ಎಲ್ಲಿವೆ? ಪಥಸಂಚಲನ ನಡೆಸಬೇಕಾದರೆ ಸರ್ಕಾರದ ಅನುಮತಿ ಕಡ್ಡಾಯ ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ಕಡ್ಡಾಯ: ಪ್ರಿಯಾಂಕ್ ಖರ್ಗೆ

-

Prabhakara R
Prabhakara R Jul 6, 2026 9:31 PM

ಕಲಬುರಗಿ: ತಾವು ಸಚಿವರಾಗಿರುವವರೆಗೂ ರಾಜ್ಯದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ (RSS route march) ನಡೆಸಲು ಸರ್ಕಾರದ ಅನುಮತಿ ಕಡ್ಡಾಯ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸ್ಪಷ್ಟಪಡಿಸಿದ್ದಾರೆ. ಕಲಬುರಗಿಯ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದ್ದಾರೆ.

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಈಗಾಗಲೇ ಪತ್ರ ಬರೆದಿದ್ದೇನೆ. 100 ವರ್ಷಗಳ ಇತಿಹಾಸವಿದೆ ಎಂದು ಹೇಳುವ ಸಂಘಟನೆ ತನ್ನ ದಾಖಲೆಗಳನ್ನು ತೋರಿಸಬೇಕು. ಪಥಸಂಚಲನ ನಡೆಸಲು ಕಾನೂನುಬದ್ಧವಾಗಿ ಅನುಮತಿ ಪಡೆಯಲೇಬೇಕು. ದಾಖಲೆಗಳು ಸಿಗುವವರೆಗೆ ನಾವು ಸುಮ್ಮನಿರುವುದಿಲ್ಲ ಎಂದು ಹೇಳಿದ್ದಾರೆ.

ತಮ್ಮ ಹೇಳಿಕೆಗಳ ಬಗ್ಗೆ ಪ್ರಶ್ನೆ ಎತ್ತಿದ ಬಳಿಕ ಬಿಜೆಪಿ ಹಾಗೂ RSS ಬೆಂಬಲಿಗರು ವೈಯಕ್ತಿಕ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದಿರುವ ಅವರು, ನನ್ನ ವೈಯಕ್ತಿಕ ಜೀವನ ಅಥವಾ ರೂಪದ ಬಗ್ಗೆ ಟೀಕೆ ಮಾಡಿದರೂ ನಾನು ಹೆದರುವುದಿಲ್ಲ. ನನ್ನ ಕೆಲಸವೇ ಅವರಿಗೆ ಉತ್ತರ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಆರ್‌ಎಸ್‌ಎಸ್‌ಗೆ 100 ವರ್ಷದ ಇತಿಹಾಸವಿದೆ ಎಂದು ಹೇಳಿಕೊಳ್ಳುತ್ತೀರಿ. ಆದರೆ ನಿಮ್ಮ ಸಂಘಟನೆಯ ಕಾನೂನುಬದ್ಧ ದಾಖಲೆಗಳು ಎಲ್ಲಿವೆ? ಪಥಸಂಚಲನ ನಡೆಸಬೇಕಾದರೆ ಸರ್ಕಾರದ ಅನುಮತಿ ಕಡ್ಡಾಯ. ದಾಖಲೆಗಳನ್ನು ಹುಡುಕಿಕೊಂಡು ಬನ್ನಿ, ಅಲ್ಲಿಯವರೆಗೆ ಸುಮ್ಮನೆ ಬಿಡುವುದಿಲ್ಲ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೊಬೈಲ್ ಟಾರ್ಚ್ ಬಳಸಿ‌ ಸಾರಿಗೆ ಬಸ್ ಚಾಲನೆ; ಮೂವರು ಸಿಬ್ಬಂದಿ ಸಸ್ಪೆಂಡ್‌

ಇದೇ ವೇಳೆ, ಅಯೋಧ್ಯ ರಾಮಮಂದಿರ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪವನ್ನೂ ಖರ್ಗೆ ಮಾಡಿದರು. ದೇವಸ್ಥಾನದ ಕಾಮಗಾರಿಯಲ್ಲಿ ಕಮಿಷನ್ ದಂಧೆ ನಡೆದಿದೆ, ಈ ವಿಚಾರದ ಬಗ್ಗೆ ತನಿಖೆ ನಡೆಯಬೇಕೆಂದು ಆಗ್ರಹಿಸಿದ್ದಾರೆ.