ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕಲಬುರಗಿಯಲ್ಲಿ ಭಾರಿ ಮಳೆಯ ಆರ್ಭಟ: ಸೇತುವೆ ಕುಸಿತ, ಮನೆಗಳಿಗೆ ನೀರು ನುಗ್ಗಿ ಜನರ ಪರದಾಟ

ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿ ಸುರಿದ ಭಾರಿ ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಮ್ಮನಚೋಡ ಗ್ರಾಮದ ಸಮೀಪ ಇರುವ ಚಿಮ್ಮನಚೋಡ–ನರನಾಳ ಸಂಪರ್ಕ ಸೇತುವೆ ಮಳೆಯ ರಭಸಕ್ಕೆ ಕುಸಿದಿದೆ. ಇನ್ನೊಂದೆಡೆ, ಚಿಂಚೋಳಿ ತಾಲ್ಲೂಕಿನ ಬೆಡಕಪಳ್ಳಿ ಗ್ರಾಮದಲ್ಲಿ ಮಳೆ ನೀರು ನುಗ್ಗಿ 20ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.

ಸಂಗ್ರಹ ಚಿತ್ರ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲ್ಲೂಕಿನಲ್ಲಿ ಸುರಿದ ಭಾರಿ ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. )(Kalaburgi News) ಚಿಮ್ಮನಚೋಡ ಗ್ರಾಮದ ಸಮೀಪ ಇರುವ ಚಿಮ್ಮನಚೋಡ–ನರನಾಳ ಸಂಪರ್ಕ ಸೇತುವೆ ಮಳೆಯ ರಭಸಕ್ಕೆ ಕುಸಿದಿದ್ದು, ಚಿಂಚೋಳಿ ಮತ್ತು ಭಾಲ್ಕಿ ತಾಲ್ಲೂಕುಗಳ ನಡುವಿನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಈ ಘಟನೆ ಸಂಭವಿಸಿದೆ. ಸೇತುವೆ ಕುಸಿತದಿಂದ ವಾಹನ ಸವಾರರು ಹಾಗೂ ಗ್ರಾಮಸ್ಥರು ಪರ್ಯಾಯ ಮಾರ್ಗಗಳ ಮೊರೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ನೂರಾರು ಜನರ ಸಂಚಾರಕ್ಕೆ ತೊಂದರೆಯಾಗಿದೆ.

ಇನ್ನೊಂದೆಡೆ, ಚಿಂಚೋಳಿ ತಾಲ್ಲೂಕಿನ ಬೆಡಕಪಳ್ಳಿ ಗ್ರಾಮದಲ್ಲಿ ಮಳೆ ನೀರು ನುಗ್ಗಿ 20ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಮನೆಗಳೊಳಗೆ ನೀರು ಹರಿದು ಬಂದ ಪರಿಣಾಮ ನಿವಾಸಿಗಳು ತಮ್ಮ ಸಾಮಗ್ರಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಹರಸಾಹಸ ಪಡುತ್ತಿದ್ದಾರೆ. ಕೆಲ ಕುಟುಂಬಗಳು ತಾತ್ಕಾಲಿಕವಾಗಿ ಸಂಬಂಧಿಕರ ಮನೆಗಳಿಗೆ ತೆರಳಿರುವುದಾಗಿ ತಿಳಿದುಬಂದಿದೆ.

ಭಾರಿ ಮಳೆಯಿಂದ ಉಂಟಾದ ಹಾನಿ ಕುರಿತು ಸ್ಥಳೀಯ ಆಡಳಿತ ಮಾಹಿತಿ ಸಂಗ್ರಹಿಸುತ್ತಿದ್ದು, ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Kalaburgi News: ಕಲಬುರ್ಗಿಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಬಲಿ; ಕುಟುಂಸ್ಥರ ಆಕ್ರೋಶ

ಮುಂದಿನ ನಾಲ್ಕು ದಿನ ರಾಜ್ಯದಲ್ಲಿ ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದೆ. ಇಂದು (ಜೂ.7) ಅತಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಇನ್ನುಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಮುಂದಿನ 24 ಗಂಟೆಗಳವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಕೆಲವೊಮ್ಮೆ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30°C ಮತ್ತು 21°C ಇರುವ ಸಾಧ್ಯತೆಯಿದೆ.

Vishakha Bhat Heggar

View all posts by this author