ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kaneri Swamiji: ವಿಜಯಪುರ ಜಿಲ್ಲೆಗೆ ಕನೇರಿ ಶ್ರೀಗಳ ಪ್ರವೇಶ ನಿರ್ಬಂಧ ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Vijayapura news: ವಿಜಯಪುರಕ್ಕೆ ಎರಡು ತಿಂಗಳು ಕಾಲಿಡುವಂತಿಲ್ಲ ಎಂದು ತಮ್ಮ ವಿರುದ್ಧ ಅಲ್ಲಿನ ಜಿಲ್ಲಾಡಳಿತ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ಕೋರಿ ಕನೇರಿ ಮಠದ ಶ್ರೀಗಳು ಅರ್ಜಿ ಸಲ್ಲಿಸಿದ್ದರು. ಇದೀಗ ಕಲಬುರಗಿ ಹೈಕೋರ್ಟ್ ಪೀಠ ಶ್ರೀಗಳು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.

ಕನೇರಿ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ

ಕಲಬುರಗಿ: ಪ್ರಚೋದನಕಾರಿ ಮಾತುಗಳಿಗಾಗಿ ವಿಜಯಪುರ (Vijayapura) ಜಿಲ್ಲೆಗೆ ಕನೇರಿ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ (Kaneri Swamiji) ಅವರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದ ಜಿಲ್ಲಾಡಳಿತದ ಕ್ರಮ ಪ್ರಶ್ನಿಸಿ ಕನ್ನೇರಿ ಶ್ರೀಗಳು ಸಲ್ಲಿಸಿದ ಅರ್ಜಿಯನ್ನು ಕಲಬುರಗಿ ಹೈಕೋರ್ಟ್ (high court) ಪೀಠ ವಜಾಗೊಳಿಸಿದೆ. ವಿಜಯಪುರ ಜಿಲ್ಲಾಡಳಿತ ಆದೇಶಕ್ಕೆ ತಡೆಯಾಜ್ಞೆ ಕೋರಿ ಕನೇರಿ ಮಠದ ಶ್ರೀಗಳು ಅರ್ಜಿ ಸಲ್ಲಿಸಿದ್ದರು. ಇದೀಗ ಕಲಬುರಗಿ ಹೈಕೋರ್ಟ್ ಪೀಠ ಶ್ರೀಗಳು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.

ಲಿಂಗಾಯತ ಮಠಾಧೀಶರ ಒಕ್ಕೂಟದ ಸ್ವಾಮೀಜಿಗಳ ಅವಹೇಳನ ಮತ್ತು ಧರ್ಮದ ಹೆಸರಿನಲ್ಲಿ ವಿಭಜನೆ ಮೂಡಿಸಬಹುದಾದ ಅಸಾಂವಿಧಾನಿಕ ಆಶ್ಲೀಲ ಭಾಷೆ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಕನ್ನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ 2 ತಿಂಗಳುಗಳ ಕಾಲ ವಿಜಯಪುರ (Vijayapura) ಜಿಲ್ಲೆಗೆ ಪ್ರವೇಶಿಸದಂತೆ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಆನಂದ್​ ಆದೇಶ ಹೊರಡಿಸಿದ್ದರು. ಆದೇಶದ ಅನ್ವಯ ಅಕ್ಟೋಬರ್​ 16ರಿಂದ ಡಿಸೆಂಬರ್​ 14ರ ವರೆಗೆ ಸ್ವಾಮೀಜಿ ವಿಜಯಪುರ ಜಿಲ್ಲೆಗೆ ಭೆಟಿ ನೀಡುವಂತಿಲ್ಲ.

ಇತ್ತೀಚೆಗೆ ಮಹಾರಾಷ್ಟ್ರದ ಜತ್ತ ತಾಲೂಕಿನ ಬೀಳೂರು ಗ್ರಾಮದ ಸಮಾರಂಭದಲ್ಲಿ ಮಾತನಾಡಿದ್ದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ, ಕೆಲ ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಾಗ್ದಾಳಿ ನಡೆಸಿದ್ದರು. ಕಳೆದ ಎರಡು ತಿಗಂಗಳುಗಳಿಂದ ದೇವಾಲಯಕ್ಕೆ ಹೋಗಬೇಡಿ ಎಂದು ಪ್ರಚಾರ ಮಾಡಲಾಗ್ತಿದೆ. ಮುಖ್ಯಮಂತ್ರಿಗಳ ಕೃಪಾಪೋಷಿತ ಲಿಂಗಾಯತ ಮಠಾಧೀಪತಿಗಳ ಒಕ್ಕೂಟದ ಕಲಾವಿದರು ಸೇರಿ ಬಸವ ಸಂಸ್ಕೃತಿ ಅಭಿಯಾನ ಎನ್ನುವ ನಾಟಕವನ್ನ ರಾಜ್ಯಾದ್ಯಂತ ಮಾಡುತ್ತಿದ್ದಾರೆ. ಗುಡಿಯಲ್ಲಿ ದೇವರಲಿಲ್ಲ. ಮನೆಯಲ್ಲಿನ ದೇವರನ್ನು ಹೊಳೆಗೆ ಹಾಕಿ ಎನ್ನುತ್ತಿದ್ದಾರೆ. ಇವರಿಗೆ ನಾನೇ ಬುದ್ಧಿ ಹೇಳಬೇಕು ಎಂದು ಕೆಲ ಅಸಂವಿಧಾನಿಕ ಪದ ಬಳಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Kodi Mutt Swamiji Predictions: ಸಿಎಂ ಸಿದ್ದರಾಮಯ್ಯ ಸರಕಾರದ ಬಗ್ಗೆ ಕೋಡಿಮಠ ಸ್ವಾಮೀಜಿ ಭವಿಷ್ಯ

ಸ್ವಾಮೀಜಿಗಳ ಹೇಳಿಕೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಪ್ರತಿಕೃತಿಗಳನ್ನು ದಹಿಸಿ ಪ್ರತಿಭಟನೆಗಳನ್ನು ನಡೆಸಲಾಗಿದೆ. ಈ ನಡುವೆ ಬಸವನ ಬಾಗೇವಾಡಿಯಲ್ಲಿ ನಡೆಯುತ್ತಿರುವ ಸಮರ್ಥ ಸದ್ಗುರು, ಶ್ರೀ ಸಿದ್ದರಾಮೇಶ್ವರ ಮಹಾರಾಜರ ಪುಣ್ಯತಿಥಿ ಉತ್ಸವ ಕಾರ್ಯಕ್ರಮದಲ್ಲಿ ಅ.16 ಮತ್ತು 17ರಂದು ಕನ್ನೇರಿ ಶ್ರೀಗಳು ಭಾಗವಹಿಸಬೇಕಿತ್ತು. ಇದರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆ ಇದೆ ಎಂದು ಸ್ಥಳೀಯ ಠಾಣೆ ವರದಿ ತಿಳಿಸಿದೆ. ಹೀಗಾಗಿ ಜಿಲ್ಲೆಗೆ ಕಾಡಸಿದ್ದೇಶ್ವರ ಸ್ವಾಮೀಜಿಯವರ ಭೇಟಿಯನ್ನು 2 ತಿಂಗಳವರೆಗೆ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಹರೀಶ್‌ ಕೇರ

View all posts by this author