ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Kalaburagi News: ಕೌಟುಂಬಿಕ ಕಲಹ; ಪತ್ನಿಯನ್ನು ಕೊಂದು, ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ನಂತರ ಪತಿ ಕೂಡ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಯಲ್ಲಿ ಮಗುವನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ಸಂಬಂಧ ರೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿಯನ್ನು ಕೊಂದು, ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಆತ್ಮಹತ್ಯೆ!

ಮೃತ ಲಕ್ಷ್ಮೀಪುತ್ರ ಮತ್ತು ಅಂಜಲಿ ದಂಪತಿ. -

Prabhakara R
Prabhakara R Apr 28, 2026 4:16 PM

ಕಲಬುರಗಿ: ಕೌಟುಂಬಿಕ ಕಲಹದಿಂದ ದಂಪತಿ ದುರಂತ ಅಂತ್ಯ ಕಂಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮದರಾ (ಕೆ) ಗ್ರಾಮದಲ್ಲಿ ನಡೆದಿದೆ. ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿದ ಪತಿ, ನಂತರ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಲಕ್ಷ್ಮೀಪುತ್ರ ಎಂಬಾತ ತನ್ನ 23 ವರ್ಷದ ಪತ್ನಿ ಅಂಜಲಿಯನ್ನು ಕ್ಷುಲ್ಲಕ ಕಾರಣಕ್ಕಾಗಿ ಮನೆಯಲ್ಲೇ ಕುಡುಗೋಲಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ. ಹೆಂಡತಿಯ ಕೊಲೆಯ ನಂತರ ತೀವ್ರ ಆತಂಕಕ್ಕೊಳಗಾದ ಲಕ್ಷ್ಮೀಪುತ್ರ, ತನ್ನ ಪುಟ್ಟ ಮಗುವನ್ನು ಎತ್ತಿಕೊಂಡು ಗ್ರಾಮದ ಸಮೀಪದ ಬಾವಿಯತ್ತ ಓಡಿ ನೀರಿಗೆ ಜಿಗಿದಿದ್ದಾನೆ.

ಲಕ್ಷ್ಮೀಪುತ್ರ ಮಗುವಿನೊಂದಿಗೆ ಬಾವಿಗೆ ಹಾರುತ್ತಿರುವುದನ್ನು ಕಂಡ ಸ್ಥಳೀಯರು ಸಮಯಪ್ರಜ್ಞೆ ಮೆರೆದು, ಮಗುವನ್ನು ಸುರಕ್ಷಿತವಾಗಿ ದಡಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ನೀರಿನಲ್ಲಿ ಮುಳುಗಿದ ಲಕ್ಷ್ಮೀಪುತ್ರನ ಪ್ರಾಣ ಉಳಿಸಲು ಸಾಧ್ಯವಾಗಿಲ್ಲ.

ವಿಷಯ ತಿಳಿದ ತಕ್ಷಣ ರೇವೂರು ಪೊಲೀಸರು ಹಾಗೂ ಸೋಕೋ (SOCO) ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಜಲಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಬಾವಿಯಿಂದ ಲಕ್ಷ್ಮೀಪುತ್ರನ ಶವವನ್ನು ಹೊರತೆಗೆಯಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಕೌಟುಂಬಿಕ ಕಲಹವೇ ಈ ಕೃತ್ಯಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಕುರಿತು ರೇವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆ

ಚಿಕ್ಕಬಳ್ಳಾಪುರ: ಅನುಮಾನಾಸ್ಪದ ರೀತಿಯಲ್ಲಿ ನವವಿವಾಹಿತೆ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿಯಲ್ಲಿ ನಡೆದಿದೆ. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಶವ ಪತ್ತೆಯಾಗಿದೆ. ಮೃತಳನ್ನು ರೂಪ ಎಂದು ಗುರುತಿಸಲಾಗಿದೆ.

5 ತಿಂಗಳ ಹಿಂದೆಯಷ್ಟೇ ಮುನಿರಾಜು ಎಂಬಾತನ ಜತೆ ಮದುವೆಯಾಗಿದ್ದ ರೂಪ, ಪತಿಯ ಅನುಮಾನದ ಭೂತಕ್ಕೆ ರೂಪ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ರೂಪ ಮೃತದೇಹ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

Hassan News: ಅಮ್ಮನ ಜತೆ ನಗುತ್ತಾ ಮಾತನಾಡುತ್ತಿದ್ದಾಗಲೇ ಬ್ರೈನ್‌ ಸ್ಟ್ರೋಕ್; ಹಾಸನದಲ್ಲಿ ಟೆಕ್ಕಿ ಯುವತಿ ಸಾವು

ಮೃತೆ ರೂಪ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ನಿವಾಸಿಯಾಗಿದ್ದು, ರೂಪ ಪೋಷಕರು ಆಳಿಯ ಮುನಿರಾಜು ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ.