ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

I Love Muhammad Row: ಕಲಬುರಗಿಗೂ ಕಾಲಿಟ್ಟ 'ಐ ಲವ್ ಮೊಹಮ್ಮದ್' ಬ್ಯಾನರ್ ವಿವಾದ; ಮುಖ್ಯ ರಸ್ತೆಯಲ್ಲಿ ಅಳವಡಿಕೆ

ಇತ್ತೀಚೆಗೆ ದಾವಣಗೆರೆ ಕಾರ್ಲ್ ಮಾರ್ಕ್ಸ್‌ ನಗರದಲ್ಲಿ `ಐ ಲವ್ ಮಹಮ್ಮದ್’ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಊಡಗಿ ಗ್ರಾಮದ ಮುಖ್ಯ ರಸ್ತೆಯಲ್ಲಿ ʼಐ ಲವ್ ಮೊಹಮ್ಮದ್ʼ ಬ್ಯಾನರ್ ಅಳವಡಿಕೆ ಮಾಡಿದ್ದು, ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಕಲಬುರಗಿಗೂ ಕಾಲಿಟ್ಟ 'ಐ ಲವ್ ಮೊಹಮ್ಮದ್' ಬ್ಯಾನರ್ ವಿವಾದ!

-

Prabhakara R Prabhakara R Oct 3, 2025 6:19 PM

ಕಲಬುರಗಿ: ರಾಜ್ಯದಲ್ಲಿ ದಾವಣಗೆರೆ ಬಳಿಕ ಕಲಬುರಗಿಗೂ ʼಐ ಲವ್ ಮೊಹಮ್ಮದ್ ಬ್ಯಾನರ್ʼ ವಿವಾದ (I Love Muhammad Row) ಕಾಲಿಟ್ಟಿದೆ. ಜಿಲ್ಲೆಯ ಸೇಡಂ ತಾಲೂಕಿನ ಊಡಗಿ ಗ್ರಾಮದ ಮುಖ್ಯ ರಸ್ತೆಯಲ್ಲಿ ʼಐ ಲವ್ ಮೊಹಮ್ಮದ್ʼ ಬ್ಯಾನರ್ ಅಳವಡಿಕೆ ಮಾಡಿದ್ದು, ಇದಕ್ಕೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಸಚಿವ ಶರಣಪ್ರಕಾಶ್ ಪಾಟೀಲ್ ಸ್ವಗ್ರಾಮದಲ್ಲಿ ಬ್ಯಾನರ್ ಅಳವಡಿಕೆ ಹಿನ್ನೆಲೆಯಲ್ಲಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಇನ್ನು ಐ ಲವ್ ಮೊಹಮ್ಮದ್ ಬ್ಯಾನರ್ ಅಳವಡಿಕೆ ವಿಚಾರ ತಿಳಿಯುತ್ತಿದ್ದ ಹಾಗೆ ಎಚ್ಚೆತ್ತ ಪೊಲೀಸ್ ಇಲಾಖೆ, ತಕ್ಷಣ ಬ್ಯಾನರ್ ತೆರವುಗೊಳಿಸಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂಪರ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದು, ಮಾನ್ಯ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರೇ ಕ್ಷೇತ್ರದಲ್ಲಿ ಏನು ನಡೆಯುತ್ತಿದೆ ಅನ್ನೋ ಮಾಹಿತಿ ಅಂತೂ ನಿಮಗಿಲ್ಲ. ನಿಮ್ಮ ಹುಟ್ಟೂರು ಊಡಗಿಯಲ್ಲಿ ಏನು ನಡೆಯುತ್ತಿದೆ ನೋಡಿ ಸ್ವಲ್ಪ. ಇಷ್ಟು ದಿನ ಬೆರೆಲ್ಲೋ ಇರುವ ವಿವಾದ ಇಂದು ಸೇಡಂ ತಾಲೂಕಿನ ಉಡಗಿ ಗ್ರಾಮಕ್ಕೆ ತಂದಿದ್ದೀರಿ. ಹಿಂದೂ ಸಮಾಜವನ್ನು ಏನು ಮಾಡಲು ಹೊರಟಿದ್ದೀರಿ, ಇನ್ನೆಷ್ಟು ಸಹಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇತ್ತೀಚೆಗೆ ದಾವಣಗೆರೆ ಕಾರ್ಲ್ ಮಾರ್ಕ್ಸ್‌ ನಗರದಲ್ಲಿ `ಐ ಲವ್ ಮಹಮ್ಮದ್’ ಬ್ಯಾನರ್ ವಿಚಾರಕ್ಕೆ ಸಂಬಂಧಿಸಿ ಗಲಾಟೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಬ್ಯಾನರ್ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕೋಮಿನ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಹಿಂದೂಗಳ ಮನೆ ಮೇಲೆ ಕಲ್ಲು ತೂರಾಟ ನಡೆದಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ 3 ಎಫ್‍ಐಆರ್ ದಾಖಲಾಗಿತ್ತು. ಎರಡೂ ಕಡೆಯವರಿಂದ 8 ಮಂದಿಯನ್ನು ಬಂಧಿಸಲಾಗಿತ್ತು.

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೊಂದು ಹುಲಿ ಹತ್ಯೆ, ತನಿಖೆಗೆ ಆದೇಶ

ಬೆಂಗಳೂರು: ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ (Male mahadeshwara hills) ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ (tiger kill) ಆಗಿರುವ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆಗೆ ಆದೇಶ ನೀಡಿದ್ದಾರೆ.

ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಲಿಖಿತ ಆದೇಶ ನೀಡಿರುವ ಅವರು, ಮಲೆ ಮಹದೇಶ್ವರ ಬೆಟ್ಟದ ಕಾನನದ ಹನೂರು ವಲಯದ, ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಬಳಿ ನಿನ್ನೆ ಸತ್ತ ಹುಲಿಯ ಅರ್ಧ ಕಳೇಬರ ಪತ್ತೆಯಾಗಿರುವ ಬಗ್ಗೆ ಪಿಸಿಸಿಎಫ್ ಸ್ಮಿತಾ ಬಿಜ್ಜೂರು ಅವರ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಲು ಆದೇಶಿಸುವಂತೆ ಸೂಚಿಸಿದ್ದಾರೆ.

ಈ ಕಾನನದಲ್ಲಿ ಕಳೆದ 3 ವರ್ಷದಲ್ಲಿ ದಾಖಲಾಗಿರುವ ಕಳ್ಳಬೇಟೆ ಪ್ರಕರಣಗಳ ಬಗ್ಗೆಯೂ ಗಮನ ಹರಿಸಿ, ಹಿಂದಿನ ತನಿಖಾ ವರದಿಗಳನ್ನೂ ಪರಾಮರ್ಶಿಸಿ ಮುಂದೆ ಈ ಭಾಗದಲ್ಲಿ ಇಂತಹ ಘಟನೆ ಮರುಕಳಿಸದಂತೆ ಕ್ರಮವಹಿಸಲು, ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಹಾಗೂ ಕಳ್ಳಬೇಟೆಗಾರರ ವಿರುದ್ಧ ಸೂಕ್ತ ಕ್ರಮದ ಶಿಫಾರಸಿನೊಂದಿಗೆ 8 ದಿನಗಳಲ್ಲಿ ವರದಿ ಸಲ್ಲಿಸಲು ಮತ್ತು ಹುಲಿ ಹಂತಕರನ್ನು ಪತ್ತೆ ಮಾಡಿ ಅವರಿಗೆ ಕಾನೂನು ರೀತ್ಯ ದಂಡನೆ ಕೊಡಿಸಲು ತುರ್ತು ಕ್ರಮ ವಹಿಸಲು ಆದೇಶ ಹೊರಡಿಸುವಂತೆ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಈ ಘಟನೆ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ಧಾಮದಲ್ಲಿ ನಿರಂತರವಾಗಿ ವನ್ಯಜೀವಿಗಳ ಕಳ್ಳಬೇಟೆ ನಡೆಯುತ್ತಿರುವುದನ್ನು ದೃಢಪಡಿಸುತ್ತಿದ್ದು ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದ್ದೇನು?

ಹುಲಿ ಕಳೇಬರ ಸಿಕ್ಕಿದ ವಿಚಾರವಾಗಿ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅಧಿಕಾರಿಗಳು ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹನೂರು ಗಸ್ತಿನಲ್ಲಿರುವ ಪಚ್ಚೆದೊಡ್ಡಿ ಗ್ರಾಮದ ಹತ್ತಿರ ಗುರುವಾರ (2ನೇ ಅಕ್ಟೋಬರ್ 2025) ಸಂಜೆ ನಮ್ಮ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಸತ್ತ ಹುಲಿಯ ಅರ್ಧ ಕಳೇಬರವೊಂದು ಮಣ್ಣಿನಲ್ಲಿ ಹುದುಗಿಸಿದ್ದು ಪತ್ತೆಯಾಗಿದೆ. ಹುಲಿಯ ತಲೆ, ಭುಜ ಮುಂದಿನ ಕಾಲುಗಳು ಪತ್ತೆಯಾಗಿದ್ದು ಉಳಿದ ಭಾಗಗಳು ಇನ್ನು ಪತ್ತೆಯಾಗಿಲ್ಲ. ಸಿಕ್ಕಿರುವ ಕಳೇಬರದ ಭಾಗದಲ್ಲಿ ಉಗುರುಗಳು ಮತ್ತು ಹಲ್ಲುಗಳು ಇದ್ದು, ಕಳೇಬರದ ಇನ್ನುಳಿದ ಭಾಗವನ್ನು ಹುಡುಕಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನು ಕಳ್ಳ ಬೇಟೆಯ ಪ್ರಕರಣವೆಂದೇ ಪರಿಗಣಿಸಿ ತನಿಖೆ ಮಾಡಲಾಗುತ್ತಿದೆ. ಸೀನ್ ಆಫ್ ಕೈಂ (SoCo), ಶ್ವಾನ ತನಿಖಾ ದಳ ಮತ್ತಿತರ ಸಹಾಯದಿಂದ ಅರಣ್ಯ ಇಲಾಖೆ ತಕ್ಷಣವೇ ತನಿಖೆ ಪ್ರಾರಂಭಿಸಿದೆ. ಪ್ರಕರಣಕ್ಕೆ ಕಾರಣ ಮತ್ತು ಕಾರಣಕರ್ತರನ್ನು ಅದಷ್ಟು ಬೇಗೆ ಪತ್ತೆ ಹಚ್ಚಲಾಗುವುದು. ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ಮಾಹಿತಿಯನ್ನು ನಂತರ ನೀಡಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ: Cauvery Wildlife Sanctuary: ಕಾವೇರಿ ವನ್ಯಧಾಮದಲ್ಲಿ ಎರಡು ಹುಲಿ ಮರಿಗಳ ಸಾವು