Jayadeva Hospital: ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆ ಮಾಡಿದ ಸಿಎಂ

Jayadeva Hospital: ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಲೋಕಾರ್ಪಣೆಗೊಳಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

Profile Prabhakara R December 22, 2024
ಕಲಬುರಗಿ: ನಗರದಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು (Jayadeva Hospital) ಸಿಎಂ ಸಿದ್ದರಾಮಯ್ಯ ಅವರು ಭಾನುವಾರ ಲೋಕಾರ್ಪಣೆ ಮಾಡಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ತಿಳಿಸಿದರು. ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದರು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಲೋಕಾರ್ಪಣೆಗೊಳಿಸಿದ್ದೇವೆ ಎಂದರು‌. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಂಗತಿಗಳನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, "ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ, ಈ ಬಗ್ಗೆ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ವೇದಿಕೆಯಲ್ಲಿದ್ದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚಿಸಿದರು. ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದ್ದು ಅದನ್ನು ಮರೆಯಬೇಡಿ ಎಂದರು‌. 371 ಜೆ ಜಾರಿಯಿಂದ ಈ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ. ನಮ್ಮ ಸರ್ಕಾರ ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿಕೊಂಡಿದ್ದೇವೆ. ಇದು ನಮ್ಮ ಸರ್ಕಾರದ ಬದ್ಧತೆ ಎಂದರು. ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್‌ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು ಎಂದರು. ತೊಗರಿ ಬೆಳೆ ಪ್ಯಾಕೇಜ್ ಬಗ್ಗೆ KKRDB ಅಧ್ಯಕ್ಷರಾದ ಅಜಯ್ ಸಿಂಗ್ ಮತ್ತು ಇಲ್ಲಿನ ಶಾಸಕರು, ಸಚಿವರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು. ಅನುಭವ ಮಂಟಪ ಕಾಮಗಾರಿ ಪೂರ್ಣಗೊಳಿಸಲು ಹಣಈಗಾಗಲೇ ಅನುಭವ ಮಂಟಪ ನಿರ್ಮಾಣ ಅರ್ಧ ಮುಗಿದಿದೆ. ಪೂರ್ಣಗೊಳಿಸಲು ಅಗತ್ಯ ಹಣ ನೀಡಲಾಗಿದೆ. ಇನ್ನೂ ಅಗತ್ಯಬಿದ್ದರೆ ಹಣ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು. ಈ ಸುದ್ದಿಯನ್ನೂ ಓದಿ | Kannada Sahitya Sammelana: ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ; ಕಸಾಪ ಸಭೆಯಲ್ಲಿ ತೀರ್ಮಾನ
Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ