ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Kalaburagi News: ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಅಪರಿಚಿತರಿಂದ ಬಾಂಬ್ ಬೆದರಿಕೆ ಸಂದೇಶ

Kalaburagi News: ಕಲಬುರಗಿ ಡಿಸ್ಟ್ರಿಕ್ಟ್ ಕೋರ್ಟ್ ಆಫೀಸ್ ಇ-ಮೇಲ್‌ಗೆ ಬಂದ ಸಂದೇಶದಲ್ಲಿ ನ್ಯಾಯಾಲಯದ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಉಲ್ಲೇಖಿಸಲಾಗಿತ್ತು. ಈ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ತಕ್ಷಣವೇ ಎಚ್ಚೆತ್ತುಕೊಂಡು ಭದ್ರತಾ ಕ್ರಮಗಳನ್ನು ಕೈಗೊಂಡರು. ಈ ಕುರಿತ ವಿವರ ಇಲ್ಲಿದೆ.

ಕಲಬುರಗಿ ಡಿಸ್ಟ್ರಿಕ್ಟ್ ಕೋರ್ಟ್‌ಗೆ ಬಾಂಬ್ ನಿಷ್ಕ್ರಿಯ ದಳ ತೆರಳಿ ಪರಿಶೀಲನೆ ನಡೆಸಿತು.

ಕಲಬುರಗಿ, ಮಾ.03: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಅಪರಿಚಿತ ವ್ಯಕ್ತಿಯಿಂದ ಬಾಂಬ್ ಬೆದರಿಕೆ ಮೇಲ್ ಬಂದ ಹಿನ್ನೆಲೆ ಮಂಗಳವಾರ ನ್ಯಾಯಾಲಯ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಕಲಬುರಗಿ ಡಿಸ್ಟ್ರಿಕ್ಟ್ ಕೋರ್ಟ್ (Kalaburagi district court) ಆಫೀಸ್ ಇ-ಮೇಲ್‌ಗೆ ಬಂದ ಸಂದೇಶದಲ್ಲಿ ನ್ಯಾಯಾಲಯದ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಉಲ್ಲೇಖಿಸಲಾಗಿತ್ತು. ಈ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಧಾವಿಸಿ ತಪಾಸಣೆ ನಡೆಸಿದ್ದಾರೆ.

ನ್ಯಾಯಾಲಯದ ಆವರಣದಲ್ಲಿ ಇದ್ದ ವಕೀಲರು, ಕಕ್ಷಿದಾರರು ಹಾಗೂ ಸಾರ್ವಜನಿಕರನ್ನು ಪೊಲೀಸರು ಹೊರಗೆ ಕಳುಹಿಸಿ, ತಪಾಸಣೆ ಕಾರ್ಯ ನಡೆಸಿದರು. ಇದರಿಂದ ನ್ಯಾಯಾಲಯದ ಕಲಾಪ ಕೆಲಕಾಲ ಸ್ಥಗಿತಗೊಂಡಿತು.

ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳವನ್ನು ಕರೆಯಿಸಿ ಪರಿಶೀಲನೆ ನಡೆಸಲಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಇದು ಹುಸಿ ಬಾಂಬ್ ಬೆದರಿಕೆ ಕರೆ ಇರಬಹುದೆಂದು ಶಂಕಿಸಲಾಗಿದೆ.

Petrol Price hike: ಗಲ್ಫ್‌ ಯುದ್ಧದ ನಡುವೆ ರಾಜ್ಯ ಬಜೆಟ್‌ನಲ್ಲೂ ಪೆಟ್ರೋಲ್‌ ಬೆಲೆ ಏರಿಕೆ ಚಿಂತನೆ!

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೇಲ್ ಕಳುಹಿಸಿದ ಅಪರಿಚಿತ ವ್ಯಕ್ತಿಯ ಪತ್ತೆಗೆ ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.