ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

kalaburagi news: ಬಾಗಲಕೋಟೆ ಬಳಿಕ ಕಲಬುರಗಿಯಲ್ಲೂ ಶಿವಾಜಿ ಜಯಂತಿ ವೇಳೆ ಮಾರಾಮಾರಿ

ಶಿವಾಜಿ ಜಯಂತಿಯಲ್ಲಿ ಸೌಂಡ್ ಬಾಕ್ಸ್ ಬಳಕೆ ಬಗ್ಗೆ ಮಾತಿನ ಚಕಮಕಿ ಉಂಟಾಗಿ, ಬಳಿಕ ಎರಡೂ ಸಮುದಾಯಗಳ ನಡುವೆ ಕಟ್ಟಿಗೆ ಹಾಗೂ ಕಲ್ಲುಗಳಿಂದ ಹೊಡೆದಾಟ ನಡೆದಿದೆ. ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಶಿವಾಜಿ ಜಯಂತಿ ವೇಳೆ ನಡೆದ ಮಾರಾಮಾರಿ

ಕಲಬುರಗಿ, ಫೆ. 21: ಬಾಗಲಕೋಟೆ (Bagalakote) ಬಳಿಕ ಕಲಬುರಗಿಯಲ್ಲೂ (Kalaburagi) ಶಿವಾಜಿ ಜಯಂತಿ (Shivaji Jayanthi) ವೇಳೆ ಎರಡು ಸಮುದಾಯಗಳ ನಡುವೆ ಮಾರಾಮಾರಿ (clash) ನಡೆದಿದ್ದು, ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಿವಾಜಿ ಜಯಂತಿ ಆಚರಣೆಯ ವೇಳೆ ಎರಡು ಸಮುದಾಯಗಳ ನಡುವೆ ಗಲಾಟೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ನಡೆದಿದೆ.

ರಾವೂರು ಗ್ರಾಮದ ಗೋಕುಲ ನಗರದಲ್ಲಿನ ಗಣೇಶ್ ಕಟ್ಟೆಯ ಮೇಲೆ ಶಿವಾಜಿ ಮಹಾರಾಜರ ಭಾವಚಿತ್ರ ಇಟ್ಟು ಯುವಕರು ಜಯಂತಿ ಆಚರಣೆ ಮಾಡುತ್ತಿದ್ದರು. ಈ ವೇಳೆ ಸೌಂಡ್ ಬಾಕ್ಸ್ ಹಚ್ಚಿ ಡ್ಯಾನ್ಸ್ ಮಾಡುತ್ತಿದ್ದಾಗ ಮತ್ತೊಂದು ಸಮುದಾಯದ ಕೆಲವರು ಸೌಂಡ್ ಕಡಿಮೆ ಮಾಡುವಂತೆ ಹೇಳಿ ಕಿರಿಕ್ ಮಾಡಿದರೆಂದು ತಿಳಿದುಬಂದಿದೆ. ಇದರಿಂದ ಮಾತಿನ ಚಕಮಕಿ ಉಂಟಾಗಿ, ಬಳಿಕ ಎರಡೂ ಸಮುದಾಯಗಳ ನಡುವೆ ಕಟ್ಟಿಗೆ ಹಾಗೂ ಕಲ್ಲುಗಳಿಂದ ಹೊಡೆದಾಟ ನಡೆದಿದ್ದು, ಘಟನೆಯಲ್ಲಿ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ಈ ಘಟನೆ ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ಹಿರಿಯರು ಹಾಗೂ ಪೊಲೀಸ್ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಎರಡೂ ಸಮುದಾಯಗಳ ನಡುವೆ ಸಂಧಾನ ನಡೆದಿದ್ದು, ಯಾವುದೇ ಪಕ್ಷದಿಂದಲೂ ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ. ಗ್ರಾಮದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Stone Pelting: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಬಾಗಲಕೋಟೆ ಉದ್ವಿಗ್ನ

ಹರೀಶ್‌ ಕೇರ

View all posts by this author